Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
Team Udayavani, Apr 22, 2024, 10:56 AM IST
ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್‌ನಡಿ ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರಕ್ಕೆ ಟೈಟಲ್ ಸಿಕ್ಕಿದೆ.ಚಿತ್ರಕ್ಕೆ ರಾಮರಸ ಎಂದು ನಾಮಕರಣ ಮಾಡಲಾಗಿದೆ. ಜಟ್ಟ, ಮೈತ್ರಿ ಚಿತ್ರಗಳನ್ನು ನಿರ್ದೇಶಿಸಿರುವ ಬಿ.ಎಂ ಗಿರಿರಾಜ್ ಈ ಚಿತ್ರದ ನಿರ್ದೇಶಕರು. ಈ ಚಿತ್ರದ ಶೀರ್ಷಿಕೆಯನ್ನು ನಟ ಧ್ರುವ ಸರ್ಜಾ ಇತ್ತೀಚೆಗೆ ಬಿಡುಗಡೆ ಮಾಡಿದರು.
“ರಾಮರಸ ಟೈಟಲ್ ಚೆನ್ನಾಗಿದೆ. ಮೋಷನ್ ಪೋಸ್ಟರ್ ಕೂಡ ಅದ್ಭುತವಾಗಿದೆ. ಗುರು ದೇಶಪಾಂಡೆ ಅವರು ನಮ್ಮ ಅಣ್ಣನ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ನೂತನ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ .ನನ್ನ ಸ್ನೇಹಿತ ಕೂಡ ಈ ಚಿತ್ರದಲ್ಲಿ ನಟಸುತ್ತಿದ್ದಾನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಧ್ರುವ ಸರ್ಜಾ ಹಾರೈಸಿದರು.
ರಾಮರಸ , ಹಾರರ್ ಕಾಮಿಡಿ ಜಾನರ್‌ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣವನ್ನು ಮಾಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಂಗ್ ರೆಕಾರ್ಡಿಂಗ್ ಪೂಜೆ ಮಾಡುವುದು ವಿರಳ. ಹಳೆಯ ಸಂಪ್ರದಾಯಗಳನ್ನು ಪುನಃ ಗುರು ದೇಶಪಾಂಡೆ ಅವರು ಚಿತ್ರರಂಗಕ್ಕೆ ತರುತ್ತಿದ್ದಾರೆ ಎನ್ನುವುದು ನಿರ್ದೇಶಕ ಬಿ.ಎಂ.ಗಿರಿರಾಜ್ ಮಾತು.
ನಿರ್ಮಾಪಕ ಗುರುದೇಶಪಾಂಡೆ ಮಾತನಾಡಿ, “2008 ರಲ್ಲಿ ಮೊದಲ ನಿರ್ದೇಶನದೊಂದಿಗೆ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ಅಂದಿನಿಂದ ನನ್ನ ಹೆಚ್ಚು ಚಿತ್ರಗಳಲ್ಲಿ ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾ ಬಂದಿದ್ದೇನೆ. ಇದು ನಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ. ಈ ಚಿತ್ರದಲ್ಲೂ ಜಿ ಅಕಾಡೆಮಿಯ ಹದಿನಾರು ಜನ ನೂತನ ಪ್ರತಿಭೆಗಳು ಅಭಿನಯಿ ಸುತ್ತಿದ್ದಾರೆ. ಅವರಿಗೆ ಅಭಿನಯಕ್ಕೆ ಬೇಕಾದ ವರ್ಕ್ ಶಾಪ್ ನಡೆಸಲಾಗಿದೆ. ಇವರೊಂದಿಗೆ ಕನ್ನಡದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ. ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ನಿರ್ದೇಶಕ ಬಿ.ಎಂ. ಗಿರಿರಾಜ್ ಅವರ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿದ್ದವು. ಕನ್ನಡದಲ್ಲಷ್ಟೇ ಕಮರ್ಷಿಯಲ್, ಆರ್ಟ್ ಅಂತ ವಿಭಾಗಗಳಿದೆ. ಆದರೆ ಬೇರೆ ಭಾಷೆಗಳಲ್ಲಿ ಆ ಚಿತ್ರ ಪ್ರಶಸ್ತಿ ಪಡೆದುಕೊಂಡಿರುತ್ತದೆ ಹಾಗೂ ಗಳಿಕೆಯಲ್ಲೂ ಮುಂದಿರುತ್ತದೆ. ಈ ಚಿತ್ರ ಕೂಡ ಅಂತಹ ಚಿತ್ರವಾಗಬೇಕೆಂದು ನನ್ನ ಆಸೆ. ಬಿ.ಜೆ.ಭರತ್ ಈಗಾಗಲೇ ರಾಮರಸದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಆರ್ಯ ಹಾಡುಗಳನ್ನು ಬರೆದಿದ್ದಾರೆ. ಸುನೀಲ್ ಹೆಚ್ ಸಿ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪೋ›ತ್ಸಾಹವಿರಲಿ’ ಎಂದರು ನಿರ್ಮಾಪಕ ಗುರು ದೇಶಪಾಂಡೆ.
ಸಂಗೀತ ನಿರ್ದೇಶಕ ಬಿ.ಜೆ.ಭರತ್, ಗೀತರಚನೆಕಾರ ಪುನೀತ್ ಆರ್ಯ, ಕಾರ್ಯಕಾರಿ ನಿರ್ಮಾಪಕ ಸುನೀಲ್ ಹೆಚ್.ಸಿ.ಗೌಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.