ರಮೇಶ್ 100 ಚಿತ್ರಕ್ಕೆ ಸುಧಾಮೂರ್ತಿ ಮೆಚ್ಚುಗೆ
Team Udayavani, Nov 23, 2021, 12:45 PM IST
ರಮೇಶ್ ಅರವಿಂದ್ ನಟನೆ- ನಿರ್ದೇಶನದ “100′ ಚಿತ್ರ ತೆರೆಕಂಡು ಪ್ರೇಕ್ಷಕರ ಮನಗೆದ್ದಿದೆ. ಸೈಬರ್ ಕ್ರೈಂ ಸುತ್ತ ಸಾಗುವ ಈ ಸಿನಿಮಾ ಸಿನಿಮಾ ಪ್ರೇಕ್ಷಕರ ಕುತೂಹಲ ಹೆಚ್ಚಿಸುತ್ತಾ ಸಾಗಿಸುತ್ತಿದೆ.
ಈಗ ಈ ಸಿನಿಮಾವನ್ನು ಇನ್ಫೋಸಿಸ್‌ನ ಸುಧಾ ಮೂರ್ತಿ ನೋಡಿ ಇಷ್ಟಪಟ್ಟಿದ್ದಾರೆ. ಜೊತೆಗೆ ಸಿನಿಮಾ ಕುರಿತಾಗಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. “ನಾನು 100 ಸಿನಿಮಾ ನೋಡಿದೆ. ಈ ಚಿತ್ರ ಬಹಳ ಚೆನ್ನಾಗಿದೆ. ಇತ್ತೀಚೆಗೆ ಯುವಜನರಲ್ಲಿ ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್‌ಗೆ ಅಂಟಿಕೊಂಡವರು ಅಪರಿಚಿತರ ಜೊತೆ ಗೆಳೆತನ ಬೆಳೆಸುತ್ತಾರೆ.
ಇದನ್ನೂ ಓದಿ;- ಆಂಧ್ರ ಮಾದರಿಯಲ್ಲಿ ಭತ್ತ ಖರೀದಿಗೆ ಬೇಡಿಕೆ
ಗೆಳೆತನ ತಪ್ಪಲ್ಲ. ಆದರೆ ಗೊತ್ತಿಲ್ಲದ ಜನರ ಜೊತೆ ನಮ್ಮ ಅಂತರಂಗ ಹೇಳುವುದು ತಪ್ಪು. ಅದರಿಂದ ಇಡೀ ಕುಟುಂಬಕ್ಕೆ ಏನೆಲ್ಲ ತೊಂದರೆ ಆಗಬಹುದು ಎಂಬುದನ್ನು ಈ ಚಿತ್ರ ವಿವರಿಸಿದೆ. ಇತ್ತೀಚಿನ ದಿನಗಳಲ್ಲಿ ಇಂಥ ಒಳ್ಳೆಯ ಸಿನಿಮಾ ಬಂದಿರುವುದು ತುಂಬ ಕಡಿಮೆ. ಈ ಚಿತ್ರವನ್ನು ನಾನು ಬಹಳ ಎಂಜಾಯ್ ಮಾಡಿದೆ.
ಇಡೀ ಕುಟುಂಬ ನೋಡುವ ಸಿನಿಮಾ. ಈ ಸಿನಿಮಾದಲ್ಲೊಂದು ಕಲಿಕೆ ಇದೆ. ಸೈಬರ್ ಕ್ರೈಮ್‌ನಿಂದ ಎಷ್ಟು ಜೋಪಾನವಾಗಿರಬೇಕು, ಯಾರನ್ನು ಎಷ್ಟು ನಂಬೇಕು ಅಂಶವನ್ನು ಈ ಚಿತ್ರದಲ್ಲಿ ಹೇಳಿದ್ದಾರೆ’ ಎಂದು ಸುಧಾ ಮೂರ್ತಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಿಸಿದ್ದು, ರಚಿತಾ ರಾಮ್, ಪೂರ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.