![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 8, 2021, 11:40 AM IST
ರಮೇಶ್ ಅರವಿಂದ್ ನಟಿಸಿ, ನಿರ್ದೇಶಿಸಿರುವ “100′ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರ ನವೆಂಬರ್ 19ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಿಸಿದೆ. ಟ್ರೇಲರ್ ನೋಡಿದಾಗ ಇಡೀ ಸಿನಿಮಾ ಥ್ರಿಲ್ಲರ್ ಅಂಶಗಳೊಂದಿಗೆ ಸಾಗುವುದು ಕಾಣುತ್ತದೆ. ಚಿತ್ರದ ಕಥೆ ಸೈಬರ್ ಕ್ರೈಂಗೆ ಸಂಬಂಧಿಸಿದ್ದರೂ, ಒಂದಷ್ಟು ಫ್ಯಾಮಿಲಿ ಅಂಶಗಳು ಕೂಡಾ ತುಂಬಿಕೊಂಡಿವೆ. ಇವತ್ತಿನ ಡಿಜಿಟಲ್ ಯುಗದಲ್ಲಿ ಅತಿಯಾದ ಮೊಬೈಲ್ ಬಳಕೆ, ಮುಂದೆ ಹೇಗೆ ನಮ್ಮ ನೆಮ್ಮದಿ ಕಿತ್ತುಕೊಳ್ಳಬಹುದು ಎಂಬ ಅಂಶವನ್ನು ಚಿತ್ರದಲ್ಲಿ ಹೇಳಿರುವುದು ಗೊತ್ತಾಗುತ್ತದೆ. ಟ್ವಿಸ್ಟ್-ಟರ್ನ್ಗಳೊಂದಿಗೆ ಸಾಗುವ ಕಥೆ ಪ್ರೇಕ್ಷಕರಿಗೆ ಮಜಾ ನೀಡೋದು ಗ್ಯಾರಂಟಿ. ರಮೇಶ್ ಅರವಿಂದ್ ಅವರಿಗೆ ನಟ, ನಿರ್ದೇಶಕರಾಗಿ ಈ ಚಿತ್ರ ಹೊಸದು.
“ಇಲ್ಲಿವರೆಗೆ ನಾನು 100ಕ್ಕೂ ಹೆಚ್ಚು ಚಿತ್ರ ಮಾಡಿದ್ದೇನೆ. ಆದರೆ, ಯಾವುದೇ ಸಿನಿಮಾದಲ್ಲೂ ನಾನು ಒಬ್ಬ ಖಡಕ್ ವಿಲನ್ ಎದುರು ನಿಂತು ಫೈಟ್ ಮಾಡಿಲ್ಲ. ಏಕೆಂದರೆ ನನ್ನ ಸಿನಿಮಾಗಳಲ್ಲಿ ಸನ್ನಿವೇಶ, ಸಂದರ್ಭಗಳೇ ವಿಲನ್ ಆಗಿರುತ್ತಿದ್ದವು. ಆದರೆ, “100′ ಅದಕ್ಕೆ ವಿರುದ್ಧ. ಇಲ್ಲೊಬ್ಬ ವಿಲನ್ ಇದ್ದಾನೆ. ಅವನ ಜೊತೆ ನಾನು ದೈಹಿಕವಾಗಿ ಹೊಡೆದಾಡಿದ್ದೇನೆ. ಫೈಟ್ ಮಾಸ್ಟರ್ ಇಟ್ಟು ಸಾಹಸ ಸಂಯೋಜಿಸಲಾಗಿದೆ. ಈ ತರಹದ ಅನುಭವ ನನಗೆ ಹೊಸದು ಎಂದರೆ ತಪ್ಪಲ್ಲ. ಆ ಫೈಟ್ಸ್ ನನಗೆ ಮಜಾ ಕೊಟ್ಟಿದ್ದು ಸುಳ್ಳಲ್ಲ’ ಎನ್ನುವುದು ರಮೇಶ್ ಅರವಿಂದ್ ಅವರ ಮಾತು.
ಇದನ್ನೂ ಓದಿ:ಅಪ್ಪು ಬಿಟ್ಟುಹೋದ ಜಾಗ ತುಂಬಲು ಸಾಧ್ಯವಿಲ್ಲ: ರಮೇಶ್ ಅರವಿಂದ್
ಚಿತ್ರದ ಕಂಟೆಂಟ್ ಬಗ್ಗೆ ಮಾತನಾಡುವ ರಮೇಶ್, “ಹುಡುಗಿಯರನ್ನು ಹುಡುಗರು ಫಾಲೋ ಮಾಡೋದು, ತೊಂದರೆ ಕೊಡೋದು ಎಂಬ ಒಂದು ಕಾಲವಿತ್ತು. ಈಗ ಫಾಲೋ ಮಾಡೋದು, ತೊಂದರೆ ಕೊಡೋದು ಎಲ್ಲವೂ ಸೋಶಿಯಲ್ ಮೀಡಿಯಾ ಮೂಲಕ ಆಗುತ್ತಿದೆ. ಹೆಣ್ಣು ಮಕ್ಕಳು ಯಾರನ್ನೋ ಫ್ರೆಂಡ್ ಆಗಿ ಒಪ್ಪಿಕೊಳ್ಳುತ್ತಾರೆ. ಆ ನಂತರ ಫ್ರೆಂಡ್‌ಶಿಪ್‌ನ ಕಟ್ ಮಾಡೋಕೂ ಆಗಲ್ಲ, ಅನ್‌ಫ್ರೆಂಡ್ ಮಾಡೋಕೂ ಆಗಲ್ಲ. ಈ ತರಹ ವಿಪರೀತ ತೊಂದರೆಯಲ್ಲಿ ಕೆಲವು ಹೆಣ್ಮಕ್ಕಳು ಸಿಲುಕಿದ್ದಾರೆ. ಇದನ್ನು “ಸೈಬರ್ ಸ್ಟಾಕಿಂಗ್’ ಎನ್ನುತ್ತಾರೆ.
ಕಂಪ್ಯೂಟರ್, ಮೊಬೈಲ್ ಮೂಲಕ ಸತತವಾಗಿ ಹುಡುಗಿಯರ ಮೇಲೆ ಕಣ್ಣಿಟ್ಟು ಅವರಿಗೆ ತೊಂದರೆ ಕೊಡುವ ಒಂದಷ್ಟು ಮಂದಿ ಇದ್ದಾರೆ. ಆ ತರಹದ ಕಥಾ ವಸ್ತುವನ್ನಿಟ್ಟುಕೊಂಡು ಹೆಣೆದಿರುವ ಕಥೆ 100′ ಎನ್ನುತ್ತಾರೆ ರಮೇಶ್ ಅರವಿಂದ್.
ಈ ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಿಸಿದ್ದು, ಚಿತ್ರ ಅದ್ಧೂರಿಯಾಗಿ ಮೂಡಿ ಬಂದಿದೆ. ಚಿತ್ರದಲ್ಲಿ ರಚಿತಾ ರಾಮ್, ಪೂರ್ಣ ಸೇರಿದಂತೆ ಅನೇಕರು ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.