ಮಹಾ ಶಿವರಾತ್ರಿಗೆ ‘ಶಿವಾಜಿ ಸುರತ್ಕಲ್’ ರಿಲೀಸ್…
ಜ್ಯೂಡಾ ಸ್ಯಾಂಡಿ ಸಂಗೀತ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ಚಿತ್ರಕ್ಕಿದೆ.
Team Udayavani, Feb 19, 2020, 4:01 PM IST
ಬೆಂಗಳೂರು:ರಮೇಶ್ ಅರವಿಂದ್ ಡಿಟೆಕ್ಟಿವ್ ಪಾತ್ರದಲ್ಲಿ ಅಭಿನಯಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಮಹಾ ಶ್ರಿವರಾತ್ರಿಯಂದು ಥ್ರಿಲ್ ನೀಡಲು ಬರ್ತಿದೆ. ಫೆಬ್ರವರಿ 21ರ ಮಹಾ ಶಿವರಾತ್ರಿಗೆ
‘ಶಿವಾಜಿ ಸುರತ್ಕಲ್’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಮೇಶ್ ಅರವಿಂದ್ ಮೂರು ದಶಕಗಳ ಸಿನಿ ಜೀವನದಲ್ಲಿ ಮೊದಲ ಬಾರಿ ಡಿಟೆಕ್ಟಿವ್ ಪಾತ್ರದಲ್ಲಿ ಬಣ್ಣಹಚ್ಚಿರೋದು ಈ ಚಿತ್ರದ ವಿಶೇಷ. ಚಿತ್ರದಲ್ಲಿ ನಾಯಕಿಯರಾಗಿ ರಾಧಿಕಾ ನಾರಾಯಣ್, ಆರೋಹಿ ಅಭಿನಯಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.
ಜ್ಯೂಡಾ ಸ್ಯಾಂಡಿ ಸಂಗೀತ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’
ಚಿತ್ರಕ್ಕಿದೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ನಡಿ ನಿರ್ಮಾಣವಾಗಿರೋ ಈ ಚಿತ್ರಕ್ಕೆ ರೇಖಾ.ಕೆ.ಎನ್, ಅನೂಪ್ ಗೌಡ ಬಂಡವಾಳ ಹೂಡಿದ್ದಾರೆ. ಸಾಕಷ್ಟು ಕುತೂಹಲ
ಮೂಡಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಫೆಬ್ರವರಿ 21ಕ್ಕೆ ಚಿತ್ರಮಂದಿರಕ್ಕೆ ಬರಲಿದೆ.
‘ಶಿವಾಜಿ ಸುರತ್ಕಲ್’ ಪತ್ತೇದಾರಿ ಕಥಾನಕ ಸಬ್ಜೆಕ್ಟ್ ಇರೋ ಸಿನಿಮಾ. ರಣಗಿರಿಯಲ್ಲಿ ಅನುಮಾನಾಸ್ಪದವಾಗಿ ನಡಿಯೋ ಕೊಲೆ ರಹಸ್ಯವನ್ನು ಭೇದಿಸುವ ಪಾತ್ರದಲ್ಲಿ ರಮೇಶ್
ಮಿಂಚಿದ್ದಾರೆ. ಸಸ್ಪೆನ್ಸ್ ,ಥ್ರಿಲ್ಲರ್ ಮತ್ತು ಹಾರಾರ್ ಸಬ್ಜೆಕ್ಟ್ ಚಿತ್ರದಲ್ಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ‘ಶಿವಾಜಿ ಸುರತ್ಕಲ್’ಚಿತ್ರ ಮೂಡಿಬಂದಿದ್ದು ಆರಂಭದಿಂದ ಕುತೂಹಲ ಮೂಡಿಸಿದ್ದ ಈ ಚಿತ್ರ ಟ್ರೈಲರ್ ಮೂಲಕ ಆ ಕೌತುಕವನ್ನು ದುಪ್ಪಟ್ಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.