ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮದುವೆ ಸಂಭ್ರಮ
Team Udayavani, Dec 28, 2020, 8:13 PM IST
ಬೆಂಗಳೂರು: ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ – ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕಾ ಅವರು ತಮ್ಮ ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಸೋಮವಾರ (ಡಿ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ಬಳಿ ಇರುವ ರೆಸಾರ್ಟ್ ಒಂದರಲ್ಲಿ ಈ ಶುಭಸಮಾರಂಭ ನಡೆದಿದ್ದು ,ಕೋವಿಡ್ ಹಿನ್ನೆಲೆಯಲ್ಲಿ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ವಿವಾಹ ಮಹೋತ್ಸವ ನೆರವೇರಿದೆ.
ಕಳೆದ ಎರಡು ದಿನಗಳಿಂದ ನಿಹಾರಿಕಾ ಮದುವೆಯ ಸಂಭ್ರಮ ಜೋರಾಗಿದ್ದು, ಈ ಕುರಿತಾದ ಹಲವಾರು ಪೋಟೋಗಳನ್ನು ನಟ ರಮೇಶ್ ಅರವಿಂದ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ನಿಹಾರಿಕ ಹಾಗೂ ಅಕ್ಷಯ್ ಅವರು ಬಹುಕಾಲದ ಗೆಳೆಯರಾಗಿದ್ದು, ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ತದ ನಂತರ ತಮ್ಮ ಪ್ರೀತಿ ವಿಚಾರವನ್ನು ಕುಟುಂಬದವರ ಬಳಿ ತಿಳಿಸಿ ಮನೆಯವರ ಒಪ್ಪಿಗೆ ಪಡೆದುಕೊಂಡಿದ್ದರು.
ಇದನ್ನೂ ಓದಿ:ಪ್ರಾರಂಭೋತ್ಸವಕ್ಕೆ ಸಿದ್ಧತೆ ಕೈಗೊಳ್ಳಿ
ವಿವಾಹ ಮಹೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಕುಟುಂಬದವರು ತಿರ್ಮಾನಿಸಿದ್ದರು ಆದರೆ ಕೋವಿಡ್ ಹಿನ್ನಲೆಯಲ್ಲಿ ಕೆಲವೇ ಕೆಲವು ಆಪ್ತರು ಹಾಗೂ ಕುಟುಂಬದ ಸದಸ್ಯರನ್ನು ಮಾತ್ರ ಆಮಂತ್ರಿಸಲಾಗಿತ್ತು.
ವಿವಾಹದ ಹಿಂದಿನ ದಿನ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಹಲವಾರು ತಾರೆಯರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಭಾಗಿಯಾಗಿದ್ದ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಮಾರಂಭದ ಪೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಹೆಣ್ಣುಮಕ್ಕಳ ಮದುವೆ ಮಾಡುವಾಗ ಅಪ್ಪ- ಅಮ್ಮ ಪಡುವ ಖುಷಿಗೆ ಪಾರವೆಲ್ಲಿ? ಅಕ್ಷಯ್ ನನ್ನು ಒರಿಸಿರುವ ನಿಹಾರಿಕೆಯ ಬಾಳು ಬೆಳಗಲಿ ಎಂದು ಮದು ಮಕ್ಕಳನ್ನು ಹರಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.