![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 16, 2023, 2:54 PM IST
ರಾಜ್ ಬಿ. ಶೆಟ್ಟಿ ನಿರ್ದೇಶನ ಮತ್ತು ಅಭಿನಯದ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದ್ದು, ಸದ್ಯ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಇನ್ನು ನಟಿ ರಮ್ಯಾ ಇದೇ ಮೊದಲ ಬಾರಿಗೆ “ಆಪಲ್ ಬಾಕ್ಸ್ ಸ್ಟುಡಿಯೋಸ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡುವ ಉತ್ಸಾಹದಲ್ಲಿದ್ದಾರೆ.
ಸದ್ಯ ತೆರೆಗೆ ಬರಲು ತಯಾರಾಗುತ್ತಿರುವ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಬಗ್ಗೆ ನಿರ್ಮಾಪಕಿ ರಮ್ಯಾ ಒಂದಷ್ಟು ನಿರೀಕ್ಷೆಯ ಮಾತನಾಡಿದ್ದಾರೆ. “ಈ ಸಿನಿಮಾವೂ ನಮ್ಮೆಲ್ಲರನ್ನು ಪ್ರೀತಿ-ಪ್ರೇಮದೊಂದಿಗೆ ಒಲವಾಗುವಂತೆ ಮಾಡುತ್ತೆ ಎಂದು ವಿಶ್ವಾಸದಿಂದ ಹೇಳುತ್ತೇನೆ. ಮೊದಲ ಬಾರಿ ನಾನು ನಿರ್ಮಾಪಕಿಯ ಜವಾಬ್ದಾರಿ ನಿರ್ವಹಿಸುತ್ತಾ ಬಹಳಷ್ಟು ವಿಷಯಗಳನ್ನು ಈ ಸಿನಿಮಾದಿಂದ ಕಲಿತಿದ್ದೇನೆ. ನನಗಿದೊಂದು ಅದ್ಭುತವಾದ ಅನುಭವ. ಈ ಸಿನಿಮಾವು ಪ್ರೀತಿ ಹಾಗು ಆತ್ಮಶೋಧನೆಯನ್ನು ಕುರಿತು ಒಂದು ಸುಂದರ, ಕಾವ್ಯಾತ್ಮಕ ಹಾಗು ಸೌಮ್ಯ ಅನುಭವವಾಗಲಿದೆ’ ಎಂದಿದ್ದಾರೆ.
“ಕಳೆದ ವಿಜಯ ದಶಮಿಯಂದು ಈ ಸಿನಿಮಾವನ್ನು ಅನೌನ್ಸ್ ಮಾಡಲಾಗಿತ್ತು. ಹಲವು ಸುಂದರ ತಾಣಗಳಲ್ಲಿ ಈ ಸಿನಿಮಾದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಫಸ್ಟ್‌ಲುಕ್ ಪೋಸ್ಟರ್ ಮತ್ತು ಪಾತ್ರಗಳನ್ನು ಪರಿಚಯಿಸಲು ಬಿಡುಗಡೆ ಮಾಡಿದ ಪೋಸ್ಟರ್‌ಗಳು ಈಗಾಗಲೇ ಎಲ್ಲರ ಗಮನವನ್ನು ಸೆಳೆದಿದೆ. ಅದರಂತೆ, “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಕೂಡ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬುದು ರಮ್ಯಾ ಅವರ ಭರವಸೆಯ ಮಾತು.
ಇದನ್ನೂ ಓದಿ:ವಯಾಕಾಮ್ 18 ಪಾಲಾದ ಮಹಿಳಾ ಐಪಿಎಲ್ ಮಾಧ್ಯಮ ಹಕ್ಕು: ಪ್ರತಿ ಪಂದ್ಯಕ್ಕೆ 7.09 ಕೋಟಿ ಬೆಲೆ
“ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ನಟ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ ಮತ್ತು ಸಿರಿ ರವಿಕುಮಾರ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, “ಅನಿಕೇತ್’ ಮತ್ತು “ಪ್ರೇರಣಾ’ ಎಂಬ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮ, ಜೆ.ಪಿ
ತುಮ್ಮಿನಾಡ್, ಗೋಪಾಲಕೃಷ್ಣ ದೇಶಪಾಂಡೆ ಮತ್ತಿತರರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಲಿದ್ದು, ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನವಿದೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.