ಬಿಡುಗಡೆಗೆ ರೆಡಿಯಾದ ರಣಂ

ಥಿಯೇಟರ್‌ಗಳು ತೆರೆಯುತ್ತಿದ್ದಂತೆ, ತೆರೆಗೆ ಬರುತ್ತಿದೆ ಚಿರು-ಚೇತನ್‌ ಅಭಿನಯದ ಚಿತ್ರ

Team Udayavani, Oct 4, 2020, 12:19 PM IST

cinema-tdy-1

ಥಿಯೇಟರ್‌ಗಳು ತೆರೆಯಲು ಸರ್ಕಾರದಿಂದ ಅನುಮತಿ ಸಿಗುತ್ತಿದ್ದಂತೆ, ಒಂದರ ಹಿಂದೊಂದು ಸಿನಿಮಾಗಳುನಿಧಾನವಾಗಿ ತೆರೆಗೆ ಬರಲು ತಯಾರಿ  ಮಾಡಿಕೊಳ್ಳುತ್ತಿವೆ. ಒಂದೆಡೆ,ಈವರ್ಷದ ಫೆಬ್ರವರಿ ಕೊನೆಗೆ ಮತ್ತು ಮಾರ್ಚ್‌ ಮೊದಲ ವಾರ ಬಿಡುಗಡೆಯಾದ ಚಿತ್ರಗಳು ಮತ್ತೆ ರೀ-ರಿಲೀಸ್‌ ಮಾಡಲು ಯೋಚಿಸುತ್ತಿವೆ. ಇದರ ನಡುವೆಯೇ ಚಿರಂಜೀವಿ ಸರ್ಜಾ ಮತ್ತು ಚೇತನ್‌ ಅಭಿನಯದ “ರಣಂ’ ಚಿತ್ರಕೂಡ ಇದೇ23ಕ್ಕೆ ಬಿಡುಗಡೆಯಾಗಿ ತೆರೆಗೆ ಬರಲು ಸಿದ್ಧತೆ ‌ಮಾಡಿಕೊಂಡಿದೆ.

ಹೌದು, ಈ ವರ್ಷದ ಆರಂಭದಲ್ಲಿಯೇ “ರಣಂ’ ಬಿಡುಗಡೆಗೆ ತಯಾರಾಗಿದ್ದರೂ ಅಂದುಕೊಂಡ ಸಮಯಕ್ಕೆ ತೆರೆಗೆ ಬರಲು ಸಾಧ್ಯವಾಗಿರಲಿಲ್ಲ. ಆದರೆ, ಈಗ ಚಿತ್ರದ ಬಿಡುಗಡೆಯನ್ನು ಅಧಿಕೃತವಾಗಿಘೋಷಿಸಿರುವ ಚಿತ್ರತಂಡ, ಇದೇ ದಸರಾ ಹಬ್ಬದ ಸಂದರ್ಭದಲ್ಲಿ, ಅಕ್ಟೋಬರ್‌ 23ರಂದು”ರಣಂ’ ಚಿತ್ರವನ್ನು ತೆರೆಗೆ ತರುತ್ತಿದೆ. ಇದೇ ವೇಳೆ “ರಣಂ’ ಚಿತ್ರದ ಬಿಡುಗಡೆಯ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿರುವ ನಿರ್ಮಾಪಕ ಕನಕಪುರ ಶ್ರೀನಿವಾಸ್‌, “ಈ ವರ್ಷದ ಆರಂಭದಲ್ಲಿಯೇ “ರಣಂ’ ಸಿನಿಮಾ ರೆಡಿಯಾಗಿತ್ತು. ಇದೇ ಫೆಬ್ರವರಿ ಅಥವಾ ಮಾರ್ಚ್‌ ವೇಳೆಗೆ ಸಿನಿಮಾ ರಿಲೀಸ್‌ ಮಾಡಲು ಪ್ಲಾನ್‌ ಮಾಡಿಕೊಂಡಿದ್ದೆವು . ಆದ್ರೆ ಅಷ್ಟರಲ್ಲಿ ಕೋವಿಡ್ ಲಾಕ್‌ಡೌನ್‌ ಬಂದಿದ್ದರಿಂದ, ನಾವು ಅಂದುಕೊಂಡಂತೆ ಸಿನಿಮಾ ರಿಲೀಸ್‌ ಮಾಡಲು ಸಾಧ್ಯವಾಗಲಿಲ್ಲ. ಈಗ ಥಿಯೇಟರ್‌ಗಳು ಓಪನ್‌ ಮಾಡೋದಕ್ಕೆ ಅನುಮತಿ ಸಿಕ್ಕಿರುವುದರಿಂದ, ಇದೇ ಅಕ್ಟೋಬರ್‌23ಕ್ಕೆ ದಸರಾ ಹಬ್ಬದ ವೇಳೆಗೆ “ರಣಂ’ ಸಿನಿಮಾ ರಿಲೀಸ್‌ ಮಾಡುತ್ತಿದ್ದೇವೆ.

ರಾಜ್ಯದಾದ್ಯಂತ ಸುಮಾರು 250 – 300 ಥಿಯೇಟರ್‌ಗಳಲ್ಲಿ ರಿಲೀಸ್‌ ಮಾಡುವ ಯೋಚನೆ ಇದೆ. ಮೊದಲಿಗೆ ಕರ್ನಾಟಕದಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದ್ದು, ಅದಾದ ನಂತರ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಮಾಡುವ ಬಗ್ಗೆ ಯೋಚಿಸುತ್ತೇವೆ. ಸುಮಾರು ಏಳು ತಿಂಗಳ ನಂತರ ಒಂದೊಳ್ಳೆ ಆ್ಯಕ್ಷನ್ ಸಿನಿಮಾ ಬರುತ್ತಿದ್ದು,ಕನ್ನಡದ ಮಾಸ್‌ ಆಡಿಯನ್ಸ್‌ಗೆ “ರಣಂ’ಖಂಡಿತ ಇಷ್ಟವಾಗಲಿದೆ’ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆ್ಯಕ್ಷನ್‌ಕಂ ಥ್ರಿಲ್ಲರ್‌ಕಥಾಹಂದರ ಹೊಂದಿರುವ “ರಣಂ’ ಚಿತ್ರದಲ್ಲಿ ಚಿರು ಸರ್ಜಾ ಜೊತೆಗೆ ಮತ್ತೂಬ್ಬ ನಾಯಕ ನಟ ಚೇತನ್‌ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು ನಟಿ ವರಲಕ್ಷ್ಮೀ ಶರತ್‌ ಕುಮಾರ್‌ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ವಿ. ಸಮುದ್ರ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

ಚಿರು ಸರ್ಜಾಅಭಿನಯದಕೊನೆಚಿತ್ರ:ಇನ್ನು ಇದೇ ಮಾರ್ಚ್ ನಲ್ಲಿ ನಟ ಚಿರಂಜೀವಿ ಸರ್ಜಾ ಅಭಿನಯದ “ಶಿವಾರ್ಜುನ’ ಚಿತ್ರ ತೆರೆಕಂಡಿತ್ತು. ಆದರೆ “ಶಿವಾರ್ಜುನ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಕೋವಿಡ್ ಆತಂಕದಿಂದ ಥಿಯೇಟರ್‌ ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ “ಶಿವಾರ್ಜುನ’ ಚಿತ್ರದ ಗಳಿಕೆಯಿಲ್ಲದೆ ನಿರ್ಮಾಪಕರು ಆರ್ಥಿಕ ತೊಂದರೆ ಎದುರಿಸುವಂತಾಯಿತು. ಇದೀಗ “ಶಿವಾರ್ಜುನ’ ಮತ್ತೆ ಮರು ಬಿಡುಗಡೆಯ ಬಗ್ಗೆ ಚಿತ್ರತಂಡ ಯೋಚಿಸುತ್ತಿರುವಂತೆಯೇ, ಚಿರಂಜೀವಿ ಸರ್ಜಾ ಅಭಿನಯದಕೊನೆಯ ಚಿತ್ರ “ರಣಂ’ಕೂಡ ತೆರೆಗೆ ಬರುತ್ತಿದೆ. ಒಟ್ಟಾರೆ ಸುಮಾರು ಏಳು ತಿಂಗಳ ಬಳಿಕ ಮತ್ತೆ ತೆರೆಮೇಲೆ ಬರುತ್ತಿರುವ ಚಿರು ಸರ್ಜಾ, ಪ್ರೇಕ್ಷಕರಿಗೆ ಅಗಲಿಕೆಯ ನೆನಪುಗಳನ್ನು ಹೊತ್ತುತರುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.