ಬಿಡುಗಡೆಗೆ ಸಜ್ಜಾದ ‘ರಂಗಿನ ರಾಟೆ’
Team Udayavani, Oct 2, 2022, 5:01 PM IST
ಸದ್ದಿಲ್ಲದೇ ತನ್ನ ಶೂಟಿಂಗ್ ಮುಗಿಸಿರುವ “ರಂಗಿನ ರಾಟೆ’ ಚಿತ್ರ ಇದೀಗ ಬಿಡುಗಡೆಯ ಸನಿಹದಲ್ಲಿದೆ. ಬಿಡುಗಡೆಯ ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಅನಾವರಣಗೊಳಿಸಿದೆ ಚಿತ್ರತಂಡ. “ಕಮಲ್ ಪ್ರೊಡಕ್ಷನ್ಸ್’ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ “ರಂಗಿನ ರಾಟೆ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.
ನಟಿ ರಾಗಿಣಿ ದ್ವಿವೇದಿ, ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ರಾಗಿಣಿ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ, “ನಾನು ಚಿತ್ರದ ಕೆಲವು ಸನ್ನಿವೇಶಗಳನ್ನು ನೋಡಿದ್ದೀನಿ. ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ರಾಗಿಣಿ ಹಾರೈಸಿದರು.
ನಿರ್ದೇಶಕ ಆರ್ಮುಗಂ ಮಾತನಾಡಿ, “ಏಳು ಪ್ರಮುಖಪಾತ್ರಗಳ ಸುತ್ತ ನಡೆಯುವ ಕಥೆಯಿದು. ಕೆಟ್ಟದ್ದನ್ನು ಮಾಡಿದವರು ಇಲ್ಲೇ ಅನುಭವಿಸುತ್ತಾರೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಇಂದು ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ ಪ್ರೋತ್ಸಾಹಿಸಿ’ ಎಂದರು.
“ಇದೊಂದು ಕಾಡಿನಲ್ಲಿ ನಡೆಯುವ ಕಥೆ. ನನ್ನ ಜೊತೆಗಿರುವವರು ಅನಿವಾರ್ಯ ಕಾರಣದಿಂದ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ. ಅವರನೆಲ್ಲಾ ಕಷ್ಟದಿಂದ ಪಾರು ಮಾಡುವ ಪಾತ್ರ ನನ್ನದು’ ಎಂದು ತಮ್ಮ ಪಾತ್ರದ ಬಗ್ಗೆ ರಾಜೀವ್ ರಾಥೋಡ್ ವಿವರಿಸಿದರು.
ನಿರ್ದೇಶಕ ಮುರಳಿ ಮೋಹನ್ ಸಹ ತಮಗೆ ಈ ಚಿತ್ರದಲ್ಲಿ ಉತ್ತಮ ಪಾತ್ರ ಸಿಕ್ಕಿರುವುದಾಗಿ ಹೇಳಿಕೊಂಡರು. ನಿರ್ಮಾಪಕಿ ಕವಿತಾ ಅರುಣ್ ಕುಮಾರ್, ಸಹನಾಯಕಿ ಸ್ವಪ್ನ ಶೆಟ್ಟಿಗಾರ್, ಸಂತೋಷ್ ಮಳವಳ್ಳಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಆಗಮಿಸಿದ್ದ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.
ಆರ್ಮುಗಂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿ ಸುವರ್ಣ ಛಾಯಾಗ್ರಹಣ ಹಾಗೂ ಚಂದ್ರು ಓಬ್ಬಯ್ಯ ಅವರ ಸಂಗೀತ ನಿರ್ದೇಶನವಿದೆ. ರಾಜೀವ್ ರಾಥೋಡ್, ಮುರಳಿ ಮೋಹನ್ (ಸಂತ), ದುನಿಯಾ ರಶ್ಮಿ, ಸಂತೋಷ್ ಮಳವಳ್ಳಿ, ಭವ್ಯ, ರಾಂಕಲ್ ಚಂದ್ರು, ಸ್ವಪ್ನ ಶೆಟ್ಟಿಗಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.