ಪುಷ್ಪ ಸಕ್ಸಸ್‌ ಎಫೆಕ್ಟ್; ರಶ್ಮಿಕಾ ಮಂದಣ್ಣ ಸಂಭಾವನೆ ಏರಿಕೆ!

Team Udayavani, Jan 11, 2022, 11:35 AM IST

Rashmika mandanna has hikes her fees After success of Pushpa

ಸಾಮಾನ್ಯವಾಗಿ ಒಂದು ಸಿನಿಮಾ ಬಾಕ್ಸಾಫೀಸ್‌ನಲ್ಲಿ ಹಿಟ್‌ ಆಗುತ್ತಿದ್ದಂತೆ, ಆ ಸಿನಿಮಾದ ಸ್ಟಾರ್, ಡೈರೆಕ್ಟರ್‌ ಮತ್ತು ತಂತ್ರಜ್ಞರ ಸಂಭಾವನೆಯಲ್ಲೂ ಏರಿಕೆಯಾಗುವುದು ಚಿತ್ರರಂಗದಲ್ಲಿ ಸಹಜ. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್‌ ಭಯ, ಲಾಕ್‌ಡೌನ್‌ ಆತಂಕ ಮತ್ತಿತರ ಕಾರಣಗಳಿಂದ ಚಿತ್ರರಂಗದ ಬೆಳವಣಿಗೆಯ ಗ್ರಾಫ್ ಕೂಡ ಇಳಿಕೆಯಾಗಿದೆ. ಅಂದುಕೊಂಡಂತೆ ಸಿನಿಮಾಗಳು ನಿಗಧಿತ ಸಮಯಕ್ಕೆ ಬಿಡುಗಡೆಯಾಗಿ ತೆರೆಗೆ ಬರಲು ಸಾಧ್ಯವಾಗದಿದ್ದರಿಂದ, ಸಿನಿಮಾದ ಬಜೆಟ್‌ ಏರಿಕೆಯಾಗುತ್ತಿದೆ. ಹೀಗಾಗಿ ಬಹುತೇಕ ಸ್ಟಾರ್ ಹೀರೋ -ಹೀರೋಯಿನ್‌ಗಳು, ನಿರ್ದೇಶಕರು, ತಂತ್ರಜ್ಞರ ಸಂಭಾವನೆ ಕಳೆದ ಎರಡು ವರ್ಷಗಳಿಂದ ಏರಿಕೆ ಕಂಡಿಲ್ಲ. ಆದರೆ ಇದೆಲ್ಲದರ ನಡುವೆಯೂ ಕೆಲವು ಸ್ಟಾರ್‌ ಹೀರೋ – ಹೀರೋಯಿನ್ಸ್‌ ಹಿಟ್‌ ಸಿನಿಮಾಗಳನ್ನು ನೀಡುವ ಮೂಲಕ ತಮ್ಮ ಸಂಭಾವನೆಯನ್ನು ಏರಿಸಿಕೊಂಡಿದ್ದಾರೆ.

ಹೀಗೆ ಇತ್ತೀಚೆಗೆ ದಿಢೀರ್‌ ಸಂಭಾವನೆ ಏರಿಸಿಕೊಂಡ ಸ್ಟಾರ್‌ ಹೀರೋಯಿನ್ಸ್‌ ಪೈಕಿ ಸದ್ಯಕ್ಕೆ ಮೊದಲು ಕೇಳಿಬರುತ್ತಿರುವ ಹೆಸರು ರಶ್ಮಿಕಾ ಮಂದಣ್ಣ ಅವರದ್ದು. ಹೌದು, ಇತ್ತೀಚೆಗಷ್ಟೇ ರಶ್ಮಿಕಾ ಮಂದಣ್ಣ ಅಭಿನಯದ “ಪುಷ್ಪ’ ಸಿನಿಮಾ ತೆಲುಗು, ಕನ್ನಡ, ತಮಿಳು ಸೇರಿದಂತರೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಸಿನಿಮಾ ತೆರೆಕಂಡ ಮೂರೇ ವಾರಗಳಲ್ಲಿ 300 ಕೋಟಿಗೂ ಹೆಚ್ಚು ಕಲೆಕ್ಷನ್‌ ಮಾಡಿದೆ ಎನ್ನಲಾಗುತ್ತಿದೆ. ಇದಲ್ಲದೆ ಒಟಿಟಿಯಲ್ಲಿಯೂ “ಪುಷ್ಪ’ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಪುಷ್ಪ’ ಸಿನಿಮಾಕ್ಕೆ ಇಂಥದ್ದೊಂದು ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದ್ದಂತೆ, ಅದರ ಹೀರೋಯಿನ್‌ ರಶ್ಮಿಕಾ ಮಂದಣ್ಣ ಅವರ ಸಂಭಾವನೆಯಲ್ಲೂ ಹೆಚ್ಚಳವಾಗಿದೆ ಎನ್ನುತ್ತಿವೆ ಚಿತ್ರೋದ್ಯಮದ ಮೂಲಗಳು.

ಈಗಾಗಲೇ “ಪುಷ್ಪ’ ಸಿನಿಮಾದ ಮೊದಲ ಭಾಗಕ್ಕೆ ಸುಮಾರು ಎರಡು ಕೋಟಿ ಸಂಭಾವನೆಯನ್ನು ಪಡೆದುಕೊಂಡಿರುವ ರಶ್ಮಿಕಾ ಮಂದಣ್ಣ, ಅದರ ಎರಡನೇ ಭಾಗಕ್ಕೆ ಬರೋಬ್ಬರಿ 3 ಕೋಟಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನುತ್ತಿವೆ ತೆಲುಗು ಚಿತ್ರರಂಗದ ಮೂಲಗಳು.

ಇದನ್ನೂ ಓದಿ:ಹೊಸಬರಿಗೆ ಮತ್ತೆ ಸಂಕಷ್ಟ: ರಿಲೀಸ್‌ ಮಾಡೋದೇ ಸವಾಲು

ಇನ್ನು ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆಯನ್ನು ಕೇಳುತ್ತಿರುವುದಕ್ಕೆ ಕಾರಣವಾಗಿರುವ ಅಂಶಗಳನ್ನೂ ರಶ್ಮಿಕಾ ಮಂದಣ್ಣ ನೀಡುತ್ತಿದ್ದಾರಂತೆ. ಸದ್ಯದ ಮಟ್ಟಿಗೆ ಅತಿ ಕಡಿಮೆ ಅವಧಿಯಲ್ಲಿ ಬ್ಯಾಕ್‌ ಟು ಬ್ಯಾಕ್‌ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿರುವ ನಾಯಕಿಯರ ಪೈಕಿ ರಶ್ಮಿಕಾ ಹೆಸರು ಮೊದಲಿಗಿದೆ. ಕಳೆದ ನಾಲ್ಕೈದು ವರ್ಷಗಳಲ್ಲಿ ರಶ್ಮಿಕಾ ಅಭಿನಯಿಸಿರುವ ಕನ್ನಡ, ತೆಲುಗು, ತಮಿಳಿನ ಬಹುತೇಕ ಎಲ್ಲ ಸಿನಿಮಾಗಳೂ ಸೂಪರ್‌ ಹಿಟ್‌ ಆಗಿವೆ. ಸದ್ಯ ಎರಡು ಬಾಲಿವುಡ್‌ ಸಿನಿಮಾಗಳಲ್ಲೂ ಅಭಿನಯಿಸುತ್ತಿರುವುದು ರಶ್ಮಿಕಾ ಸಂಭಾವನೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.

ಇನ್ನು ಕನ್ನಡದ ಮಟ್ಟಿಗೆ ರಶ್ಮಿಕಾ ಮಂದಣ್ಣ ಅವರ ಡಿಮ್ಯಾಂಡ್‌ನ‌ಂತೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾ ವನೆ ಸಿಗುವುದು ಸದ್ಯದ ಮಟ್ಟಿಗೆ ದೂರದ ಮಾತು. ಕನ್ನಡ ಚಿತ್ರರಂಗದ ಮೂಲಗಳ ಪ್ರಕಾರ ಇಲ್ಲಿಯವರೆಗೆ ಯಾವ ಹೀರೋಯಿನ್‌ಗಳ ಸಂಭಾ ವನೆ ಕೂಡ 50 ಲಕ್ಷದ ಗಡಿ ದಾಟಿಲ್ಲ. ಹೀಗಿರುವಾಗ ರಶ್ಮಿಕಾ ಅವರನ್ನ ಮುಂದಿನ ದಿನಗಳಲ್ಲಿ ಅವರು ಕೇಳಿದಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತರುವುದು ದೂರ ದ ಮಾತು ಅನ್ನೋದು ಗಾಂಧಿ ನಗರದ ಮಂದಿಯ ಅಭಿಪ್ರಾಯ.

ಟಾಪ್ ನ್ಯೂಸ್

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.