ದೇವರೇ..ಕೊಡವರು ಮಾಡಿದ ತಪ್ಪೇನು ? ರಶ್ಮಿಕಾ ಮಂದಣ್ಣ ಪತ್ರ
Team Udayavani, Aug 23, 2018, 2:06 PM IST
ಬೆಂಗಳೂರು : ಜಲಪ್ರಳಯಕ್ಕೆ ತತ್ತರಿಸಿ ಹೋಗಿರುವ ಕೊಡಗಿನ ನೋವಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಭಾವನಾತ್ಮಕ ಪತ್ರವೊಂದನ್ನು ಬರೆದು ಟ್ವೀಟ್ ಮಾಡಿ ದೇವರಲ್ಲೇ ಕೊಡಗಿನ ಜನರು ಮಾಡಿದ ತಪ್ಪೇನು ಎಂಬ ನಿವೇದನೆಯನ್ನು ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಪತ್ರ ಹೀಗಿದೆ
ನಮಗೆ ನೋವಾದಾಗ ಅಮ್ಮಾ..ಎಂದು ಕೂಗುತ್ತೇವೆ. ಅಮ್ಮನೇ ಮುನಿಸಿಕೊಂಡಾಗ ಯಾರನ್ನು ಕೂಗುವುದು,ಏನೆಂದು ಕೂಗುವುದು…ನಾ ಹುಟ್ಟಿದ ಬೆಳೆದ, ಆಡಿದ್ದ, ಓದಿದ್ದ , ಉಸಿರಾಡುತ್ತಿದ್ದ ಕೊಡಗು ಇಂದು ಮುಳುಗಿದ ಹಡಗಾಗಿದೆ.ಜಲಪ್ರಳಯಕ್ಕೆ ಲಕ್ಷಾಂತರ ಜನರು ಅಕ್ಷರಶಃ ನೀರುಪಾಲಾಗಿದ್ದಾರೆ. ಇದಕ್ಕೆ ಮೂಕ ಜೀವಿಗಳು ಹೊರತಾಗಿಲ್ಲ. ಯಾರಿಗೂ ನೋವು ಮಾಡದ ನಮ್ಮವರು ಇಂದು ನೋವಿನಲ್ಲಿದ್ದಾರೆ…
ಪ್ರಪಂಚದಲ್ಲಿ ಮೂರರಷ್ಟು ನೀರು ಒಂದರಷ್ಟು ಭೂಮಿ ಎಂಬುವುದನ್ನು ನೀರೆ ಮುಂದೆ ನಿಂತು ಹೇಳಿದಂತಿದೆ..!
ನಾನು, ನೀನು, ನಂದು, ನಿಂದು, ಮೇಲು, ಕೀಳು, ಶ್ರೀಮಂತಿಕೆ ಎಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿದೆ. ಮನುಷ್ಯತ್ವವೇ ಕಣ್‌ತುಂಬಿಕೊಂಡಿದೆ.
ಮಳೆಯ ಶಬ್ಧ, ನೀರಿನ ಆರ್ಭಟ ಕೇಳಿದರೆ ಜೀವ ನಡುಗುವಂತಾಗಿದೆ.
ಮಕ್ಕಳು ಮಾಡಿದ ತಪ್ಪಾದರು ಏನು? ಪ್ರಾಣಿಗಳು ಮಾಡಿದ ತಪ್ಪಾದರು ಏನು? ದೇವರೇ ಉತ್ತರಿಸು..
ಬೆಟ್ಟಗಳು ನೆಂದು ನೆಲವಾಗಿ ಬಯಲು ಕೆರೆಗಳಾಗಿ, ದಾರಿಗಳು ನದಿಗಳಾಗಿ ಕೊಡಗು ಸಮುದ್ರವಾಗಿದೆ…ನೀರು, ನೀರು, ನೀರು ಬಿಟ್ಟರೆ ಕಣ್ಣೀರು..
ಧೈರ್ಯವಾಗಿರಿ ನಾವಿದ್ದೇವೆ ಎಂಬ ನಿಮ್ಮಗಳ ಮಾತು ನಮ್ಮನ್ನು ಜೀವಂತವಾಗಿರಿಸಿದೆ.
ಸರ್ಕಾರಗಳು , ಸ್ವಯಂ ಸಂಘಗಳು, ಸಂಸ್ಥೆಗಳು, ಚಿತ್ರರಂಗದವರು, ಪತ್ರಕರ್ತರು,ಮಾಧ್ಯಮದವರು, ವಿದ್ಯಾರ್ಥಿಗಳು,ಕೋಟ್ಯನುಕೋಟಿ ಕನ್ನಡಿಗರು, ಲ್ಲಾ ಭಾಷಿಕರು ಪ್ರಪಂಚದ ಮೂಲೆ ಮೂಲೆಗಳಲ್ಲಿರುವ ಕೊಡವ ಸಮಾಜದವರು, ನೀವುಗಳು ಕೈಮೀರಿ ಸಹಾಯ ಮಾಡಿದ್ದೀರಿ, ಮಾಡುತ್ತಿದ್ದೀರಿ. ಬಳ್ಳಾರಿಯ ಜೈಲಿನ ಕೈದಿಗಳು ನಾಲ್ಕು ವಾರಗಳ ಮಾಂಸದೂಟ ಬೇಡವೆಂದು 3 ಲಕ್ಷ ರೂಪಾಯಿ ಕೊಡಗಿನ ಸಂತ್ರಸ್ತ್ರರಿಗೆ ಕಳುಹಿಸಿದ್ದಾರೆಂದರೆ ಮನುಷ್ಯತ್ವ ನಮಗಿಂತ ಮುಂದಿದೆ ಎನಿಸುತ್ತದೆ. ನಿಮ್ಮ ಸಹಾಯಕ್ಕೆ ಸ್ಪಂದನೆಗೆ ನಾನು ಋಣಿ…
ಮನಪೂರ್ವಕವಾಗಿ ಕೊಡಗಿನ ಪರವಾಗಿ ಒದ್ದೆ ಕಣ್ಣಿನಿಂದ ವಂದಿಸುತ್ತಿದ್ದೇನೆ. ಕೊಡಗನ್ನು ಕೊಡಗಿನವರ ನೆಂದ ನೊಂದ ಬದುಕನ್ನು ಪುನರ್ ನಿರ್ಮಿಸಬೇಕಾಗಿದೆ. ಕೈ ಜೋಡಿಸಿ ನಾನು ನಿಮ್ಮೊಂದಿಗೆ ಇರುತ್ತೇನೆ ..ರಶ್ಮಿಕಾ ಮಂದಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.