ವಿಜಯ್ ದೇವರಕೊಂಡ ಜೊತೆಗೆ ರಶ್ಮಿಕಾ
Team Udayavani, Sep 7, 2017, 10:38 AM IST
ರಶ್ಮಿಕಾ ಮಂದಣ್ಣ ತೆಲುಗು ಚಿತ್ರಗಳಲ್ಲಿ ನಟಿಸುವ ಸುದ್ದಿಯೊಂದು ಕೆಲವು ಸಮಯದಿಂದ ಇತ್ತು. ಆದರೆ, ಇಲ್ಲೇ ಪುನೀತ್ ರಾಜಕುಮಾರ್ ಅಭಿನಯದ “ಅಂಜನಿಪುತ್ರ’ ಮತ್ತು ಗಣೇಶ್ ಅಭಿನಯದ “ಚಮಕ್’ ಚಿತ್ರಗಳಲ್ಲಿ ಬಿಝಿಯಾಗಿದ್ದ ರಶ್ಮಿಕಾ ಇದೀಗ ತೆಲುಗಿಗೆ ಹೊರಟು ನಿಂತಿದ್ದಾರೆ. ವಿಜಯ್ ದೇವರಕೊಂಡ ಅಭಿನಯದ ಹೊಸ ಚಿತ್ರವೊಂದರಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದು, ಈ ವಿಷಯವನ್ನು ಸ್ವತಃ ರಶ್ಮಿಕಾ ಹೇಳಿಕೊಂಡಿದ್ದಾರೆ.
“ಅರ್ಜುನ್ ರೆಡ್ಡಿ’ ಎಂಬ ಚಿತ್ರದಲ್ಲಿ ನಟಿಸಿ ಸಖತ್ ಜನಪ್ರಿಯರಾಗಿರುವ ವಿಜಯ್ ದೇವರಕೊಂಡ, ಇದೀಗ ತೆಲುಗಿನಲ್ಲಿ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಆ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ವಿಶೇಷವೆಂದರೆ, ಈ ಚಿತ್ರವನ್ನು ತೆಲುಗಿನ ಜನಪ್ರಿಯ ನಿರ್ಮಾಪಕ ಅಲ್ಲು ಅರವಿಂದ್ ನಿರ್ಮಿಸುತ್ತಿರುವುದು.
“ಮಗಧೀರ’ ಸೇರಿದಂತೆ ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದ ಅಲ್ಲು ಅರವಿಂದ್, ಕನ್ನಡದಲ್ಲಿ “ಮಾಂಗಲ್ಯಂ ತಂತು ನಾನೇನ’ ಮತ್ತು ರಾಕ್‌ಲೈನ್ ವೆಂಕಟೇಶ್ ಜೊತೆಗೆ ಸೇರಿಕೊಂಡು “ಸುಂದರಾಂಗ ಜಾಣ’ ಎನ್ನುವ ಚಿತ್ರವನ್ನೂ ನಿರ್ಮಿಸಿದ್ದಾರೆ. ಈಗ ಅವರು ನಿರ್ಮಿಸುತ್ತಿರುವ ಹೊಸ ತೆಲುಗು ಚಿತ್ರವೊಂದರಲ್ಲಿ ವಿಜಯ್ ಮತ್ತು ರಶ್ಮಿಕಾ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪರಶುರಾಮ್ ಎನ್ನುವವರು ನಿರ್ಮಿಸುತ್ತಿರುವ ಈ ಚಿತ್ರವು ಸದ್ಯದಲ್ಲೇ ಪ್ರಾರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.