Ravike Prasanga: ಟ್ರೇಲರ್‌ನಲ್ಲಿ ರವಿಕೆ ಪ್ರಸಂಗ
Team Udayavani, Jan 21, 2024, 4:50 PM IST
ರವಿಕೆ ಪ್ರಸಂಗ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಫೆ.16ರಂದು ಚಿತ್ರ ತೆರೆಗೆ ಬರಲಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ನಟ ಧನಂಜಯ್ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.
ಸಂತೋಷ್ ಕೊಡೆಂಕೇರಿ ಈ ಚಿತ್ರದ ನಿರ್ದೇಶಕರು. “ದೃಷ್ಟಿ ಮೀಡಿಯಾ’ ಪ್ರೊಡಕ್ಷನ್ಸ್‌ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದಲ್ಲಿ ನಾಯಕಿಯಾಗಿ ಗೀತಾ ಭಾರತಿ ಭಟ್ ನಟಿಸಿದ್ದಾರೆ. ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ.
ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೈಲರ್ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ “ರವಿಕೆ ಪ್ರಸಂಗ’ದಲ್ಲಿದೆ. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.