ಡ್ಯಾನ್ಸ್, ಫೈಟ್‌ಗೆ ನಾನ್ ರೆಡಿ
ಲಂಡನ್‌ನಿಂದ ಶಿವಣ್ಣ ಸಂದೇಶ
Team Udayavani, Jul 20, 2019, 3:03 AM IST
ಶಿವರಾಜಕುಮಾರ್ ಅವರು ಲಂಡನ್‌ಗೆ ತೆರಳಿ ಭುಜದ ಶಸ್ತ್ರಚಿಕಿತ್ಸೆಗೊಳಗಾಗಿರುವ ವಿಚಾರ ನಿಮಗೆ ಗೊತ್ತೇ ಇದೆ. ಸದ್ಯ ಲಂಡನ್‌ನಲ್ಲಿರುವ ಶಿವಣ್ಣ ಯಾವಾಗ ಬರುತ್ತಾರೆಂಬ ಪ್ರಶ್ನೆಯ ಜೊತೆಗೆ ಮತ್ತೆ ಡ್ಯಾನ್ಸ್, ಫೈಟ್ ಮಾಡುತ್ತಾರಾ ಎಂಬ ಪ್ರಶ್ನೆ ಕೂಡಾ ಅವರ ಅಭಿಮಾನಿಗಳಲ್ಲಿದೆ. ಈ ಬಗ್ಗೆ ಸ್ವತಃ ಶಿವರಾಜಕುಮಾರ್ ಉತ್ತರಿಸಿದ್ದಾರೆ.
ತಮಗೆ ಚಿಕಿತ್ಸೆ ನೀಡಿದ ಡಾಕ್ಟರ್ ಆ್ಯಂಡ್ರೂ ವ್ಯಾಲೇಸ್ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿರುವ ಶಿವಣ್ಣ, ಸದಾ ನಗುತ್ತಲೇ ಇರುವ ಪಾಸಿಟಿವ್ ವ್ಯಕ್ತಿ ಎಂದಿದ್ದಾರೆ. ಜೊತೆಗೆ ಅಭಿಮಾನಿಗಳಿಗೂ ಒಂದು ಗುಡ್ ನ್ಯೂಸ್ ನೀಡಿದ್ದಾರೆ.
“ನಾನು ಡ್ಯಾನ್ಸ್ ,ಫೈಟ್ ಮಾಡಲು ಯಾವುದೇ ಅಭ್ಯಂತರವಿಲ್ಲವೆಂದು ವೈದ್ಯರು ಹೇಳಿದ್ದಾರೆ’ ಎಂದು ಟ್ವೀಟ್ ಮಾಡಿರುವ ಶಿವಣ್ಣ, ಬೆಂಗಳೂರಿಗೆ ಬಂದು ಶೂಟಿಂಗ್‌ನಲ್ಲಿ ಭಾಗಿಯಾಗಲು ಉತ್ಸುಕನಾಗಿರುವುದಾಗಿಯೂ ಹೇಳಿದ್ದಾರೆ.
ಕೆಲ ತಿಂಗಳ ಹಿಂದೆ ಶಿವರಾಜಕುಮಾರ್ ಯುಎಸ್‌ಎಗೆ ತೆರಳಿದ ವೇಳೆ, ಒಂದು ಮುಂಜಾನೆ ವಾಕಿಂಗ್ ಮಾಡುವ ಸಂದರ್ಭದಲ್ಲಿ ಜಾರಿ ಬಿದ್ದಿದ್ದರು. ಆಗ ಕೈಗೆ ಪೆಟ್ಟು ಬಿದ್ದಿತ್ತು. ಸ್ವಲ್ಪ ನೋವು ಇದ್ದುದರಿಂದ ಅದನ್ನು ಅಷ್ಟೊಂದು ಪರಿಗಣಿಸದೇ ಸುಮ್ಮನಾಗಿದ್ದರು.
ಆದರೆ, ನೋವು ಹೆಚ್ಚಾದ ಕಾರಣ ಈಗ ಲಂಡನ್‌ಗೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಲಂಡನ್‌ನಿಂದ ಜುಲೈ 23ಕ್ಕೆ ಶಿವಣ್ಣ ವಾಪಾಸ್ಸಾಗಲಿದ್ದು, ಆ ನಂತರ ಕೆಲ ತಿಂಗಳು ವಿಶ್ರಾಂತಿ ಪಡೆದು ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಅವರ ನಟನೆತ “ಭಜರಂಗಿ-2′ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.