UI ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ರಿಯಲ್ ಸ್ಟಾರ್ ಉಪೇಂದ್ರ
Team Udayavani, Oct 14, 2024, 12:07 PM IST
ಬೆಂಗಳೂರು: ಅನೌನ್ಸ್ ಮಾಡಿದ ದಿನದಿಂದ ಒಂದಲ್ಲಾ ಒಂದು ವಿಚಾರದಲ್ಲಿ ಕುತೂಹಲ ಕೆರಳಿಸಿರುವ ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಅವರ ʼಯುಐʼ (UI) ಸಿನಿಮಾದ ಬಗ್ಗೆ ದೊಡ್ಡ ಅಪ್ಡೇಟ್ ಒಂದು ಇದೀಗ ಹೊರ ಬಿದ್ದಿದೆ. ಅದು ಚಿತ್ರದ ರಿಲೀಸ್ ದಿನಾಂಕದ ಬಗ್ಗೆ.
ಈಗಾಗಲೇ ಟೀಸರ್, ಹಾಡುಗಳ ಮೂಲಕ ಚಿತ್ರದ ತುಣುಕಿನೊಂದಿಗೆ ಜನರ ಎದುರು ಬಂದಿದ್ದ ಉಪೇಂದ್ರ ಇದೀಗ ಚಿತ್ರದ ಬಿಡುಗಡೆಯ ದಿನಾಂಕ ನಿಗದಿ ಮಾಡಿದ್ದಾರೆ. ಈ ಹಿಂದೆ ನವೆಂಬರ್ ನಲ್ಲಿ ಚಿತ್ರ ರಿಲೀಸ್ ಮಾಡುವ ಬಗ್ಗೆ ಉಪೇಂದ್ರ ಸುಳಿವು ನೀಡಿದ್ದರು. ಆದರೆ ಇಂದು ಅಧಿಕೃತವಾಗಿ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ಅಂದಹಾಗೆ ಉಪೇಂದ್ರ ಅವರು ನಿರ್ದೇಶನ ಮಾಡಿ ನಟಿಸಿರುವ ʼಯು-ಐʼ ಚಿತ್ರವು ಡಿಸೆಂಬರ್ 20ರಂದು ತೆರೆಗೆ ಬರಲಿದೆ.
ಇಷ್ಟ್ ದಿನ ಸಿನಿಮಾ ನೋಡಿ ನೀವ್ ಹಿಟ್ / ಫ್ಲಾಪ್ ಅಂತ ಹೇಳ್ತಿದ್ರೀ, ಈ ಸಿನಿಮಾ ನಿಮ್ಮನ್ ನೋಡಿ…..
All these days you watched the movies and decided weather it’s a hit or a flop. This movie will watch you and….#UiTheMovieOnDEC20th ❤️🔥#UiTheMovie #UppiDirects #Upendra @nimmaupendra… pic.twitter.com/eSo3tAkKNc
— Upendra (@nimmaupendra) October 14, 2024
ಸದಾ ಪ್ರೇಕ್ಷಕರ ತಲೆಗೆ ಹುಳ ಬಿಡುವ ಉಪೇಂದ್ರ ಅವರು ʼಯು-ಐʼ ಚಿತ್ರ ರಿಲೀಸ್ ಪೋಸ್ಟರ್ ನಲ್ಲಿಯೂ ಟ್ವಿಸ್ಟ್ ನೀಡಿದ್ದಾರೆ. “ಇಷ್ಟ್ ದಿನ ಸಿನಿಮಾ ನೋಡಿ ನೀವ್ ಹಿಟ್ / ಫ್ಲಾಪ್ ಅಂತ ಹೇಳ್ತಿದ್ರೀ, ಈ ಸಿನಿಮಾ ನಿಮ್ಮನ್ ನೋಡಿ…..” ಎಂದು ಬರೆಯುವ ಮೂಲಕ ಮತ್ತಷ್ಟು ಹುಳ ಬಿಡುವ ಕೆಲಸ ಮಾಡಿದ್ದಾರೆ ಉಪೇಂದ್ರ.
ಜಿ ಮನೋಹರನ್ ಮತ್ತು ಶ್ರೀಕಾಂತ್ ಕೆಪಿ ನಿರ್ಮಾಣದಲ್ಲಿ ತಯಾರಾಗಿರುವ ʼಯು-ಐʼ ಸಿನಮಾ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡದೊಂದಿಗೆ ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿದೆ.
ಚಿತ್ರದಲ್ಲಿ ಉಪೇಂದ್ರ ಅವರ ಜತೆ ರೀಶ್ಮಾ ನಾಣಯ್ಯ, ಮುರಳಿ ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.