ಉಪೇಂದ್ರ ಹೇಳಿದಾಗೆ ನೀವೂ ಮಾಡಿದರೆ.. ಉಪ್ಪಿ ಬರ್ತ್‌ಡೇ ದಿನ ನಿಮ್ಗೆ ಸಿಗುತ್ತೆ ಗಿಫ್ಟ್!
ಕೇಕ್, ಹಾರ ತರುವ ಬದಲು ಉಪ್ಪಿ, ಅಭಿಮಾನಿಗಳಿಗಾಗಿಯೇ ಒಂದು ಗಿಫ್ಟ್ ಕೊಡುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
Team Udayavani, Sep 3, 2022, 3:20 PM IST
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಅಭಿಮಾನಿಗಳು ತನ್ನ ನೆಚ್ಚಿನ ನಟನಿಗೆ ಶುಭಕೋರಲು ಕಾಯುತ್ತಿದ್ದಾರೆ. ಈ ನಡುವೇ ಅಭಿಮಾನಿಗಳಿಂದ ಉಪ್ಪಿ ಸ್ಪೆಷೆಲ್ ಗಿಫ್ಟ್ ಕೇಳಿದ್ದಾರೆ.
ಕೋವಿಡ್ ಹಾಗೂ ಅಪ್ಪು ಅಗಲಿಕೆಯ ಬಳಿಕ ಸ್ಟಾರ್ ಗಳು ತಮ್ಮ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸಿಕೊಳ್ಳುತ್ತಿಲ್ಲ. ಇತ್ತೀಚಿಗೆ ಡಾಲಿ ಧನಂಜಯ ಅವರು ತಮ್ಮ ಹುಟ್ಟುಹಬ್ಬವನ್ನು ಅಪ್ಪು ಅವರ ಅಗಲಿಕೆಯ ಕಾರಣದಿಂದ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು. ಕಿಚ್ಚ ಸುದೀಪ್ ಎರಡು ವರ್ಷದ ಬಳಿಕ ಅಭಿಮಾನಿಗಳೊಂದಿಗೆ ಸೇರಿಕೊಂಡು ತಮ್ಮ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸಿಕೊಂಡಿದ್ದಾರೆ.
ಇದೇ ತಿಂಗಳ 18 ( ಸೆ.18) ರಂದು ಉಪ್ಪಿ ಅವರ ಹುಟ್ಟುಹಬ್ಬವಿದೆ. ಅಭಿಮಾನಿಗಳು, ಕೇಕ್, ಹಾರ ತರುವ ಬದಲು ಉಪ್ಪಿ, ಅಭಿಮಾನಿಗಳಿಗಾಗಿಯೇ ಒಂದು ಗಿಫ್ಟ್ ಕೊಡುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಪ್ಪಿ ಟ್ವೀಟ್ ಮಾಡಿದ್ದು, “ವಿಚಾರವಂತರಾಗೋಣಾ ? ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನು ನಮ್ಮ ಮನೆಯಲ್ಲಿ ಭೇಟಿಯಾಗುತ್ತೇನೆ. ಆ ದಿನ ಕೇಕ್, ಹೂಗುಚ್ಚ ಗಿಫ್ಟ್ ಎಲ್ಲಾ ಬಿಟ್ಟು, ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ ? ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.
ಬರ್ತ್ ಡೇ ವಿಶ್ ಮಾಡಲು ಬರುವ ಅಭಿಮಾನಿಗಳು ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಉತ್ತಮ ವಿಚಾರ ಬರೆದು ತರುವಂತೆ ಹೇಳಿದ್ದಾರೆ. ಉಪ್ಪಿ ಈ ಕರೆಗೆ ಅಭಿಮಾನಿಗಳು ಯಾವ ರೀತಿ ರೆಸ್ಪಾನ್ಸ್ ಮಾಡುತ್ತಾರೆ ಎನ್ನುವುದನ್ನು ಕಾದು ನೋಡಬೇಕು.ಸದ್ಯ ರಿಯಲ್ ಸ್ಟಾರ್ ಉಪೇಂದ್ರ ಅವರ ʼಯು/ಐʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅವರ ಪ್ಯಾನ್ ಇಂಡಿಯಾ ʼಕಬ್ಜʼ ಕೂಡ ಬಹು ನಿರೀಕ್ಷೆಯ ಸಿನಿಮಾಗಳಲ್ಲೊಂದು.
ವಿಚಾರವಂತರಾಗೋಣಾ ????
ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಬೇಟಿಯಾಗುತ್ತೇನೆ.
ಆ ದಿನ ಕೇಕ್, ಹೂಗುಚ್ಚ ಗಿಫ್ಟ್ ಎಲ್ಲಾ ಬಿಟ್ಟು …..
ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ ?
ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ ??— Upendra (@nimmaupendra) September 3, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.