![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 17, 2018, 3:00 PM IST
ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ನಟ ಶಿವರಾಜಕುಮಾರ್ ಇಂದು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಚಳಿ ಜ್ವರ ಕಾಣಿಸಿಕೊಂಡಿದ್ದರಿಂದ ಶಿವಣ್ಣ ಎರಡು ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಸಂಜೆಯೇ ಶಿವಣ್ಣ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ವೈದ್ಯರ ಸಲಹೆಯ ಮೇರೆಗೆ ಇನ್ನು 2 ದಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದಿದ್ದರು.
ಇಂದು ಸಂಪೂರ್ಣ ಗುಣಮುಖರಾದ ಕಾರಣ ಶಿವಣ್ಣರನ್ನು ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, ನನಗೆ ಯಾವುದೇ ರೀತಿಯ ಸಮಸ್ಯೆಯಾಗಿಲ್ಲ. ವೈರಲ್ ಫೀವರ್ ಇದ್ದಿದ್ದರಿಂದ ವಿಶ್ರಾಂತಿ ಪಡೆಯಬೇಕಾಯ್ತು. ಆರು ತಿಂಗಳಿಗೊಮ್ಮೆ ರೆಗ್ಯುಲರ್ ಚೆಕ್ಅಪ್ಗೆ ಬರುತ್ತೇನೆ ಎಂದಿದ್ದಾರೆ.
ಇನ್ನು “ದಿ ವಿಲನ್’ ನಾಳೆ ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದ್ದು, ಈ ಚಿತ್ರದಿಂದ ಕನ್ನಡದಲ್ಲಿ ಮಲ್ಟಿಸ್ಟಾರ್ ಸಿನಿಮಾಗಳು ಹೆಚ್ಚು ಜಾಸ್ತಿಯಾಗ್ತಿವೆ. ಅಲ್ಲದೇ ನಾಳೆ ಅಭಿಮಾನಿಗಳ ಜೊತೆ ಸಿನಿಮಾ ನೋಡಿ, ಶುಕ್ರವಾರ ಮೈಸೂರು ದಸರಾ ನೋಡಲು ಹೋಗುತ್ತೇನೆ. ಇಷ್ಟರಲ್ಲೇ “ದ್ರೋಣ’ ಸಿನಿಮಾ ಶೂಟಿಂಗ್ನಲ್ಲಿ ಕೂಡಾ ಭಾಗಿಯಾಗುತ್ತೇನೆ ಎಂದು ಹೇಳಿದರು. ಯಾವುದೇ ಫುಡ್ ಡಯಟ್ಗೆ ವೈದ್ಯರು ತಿಳಿಸಿಲ್ಲ. ಆರಾಮವಾಗಿ ಶೂಟಿಂಗ್ನಲ್ಲಿ ಭಾಗವಹಿಸುತ್ತೇನೆ ಎಂದರು ಶಿವಣ್ಣ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.