ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3′ ಬಿಡುಗಡೆಗೆ ಮುಹೂರ್ತ ಫಿಕ್ಸ್
Team Udayavani, Jan 5, 2021, 11:52 AM IST
ನಟ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3′ ಚಿತ್ರದ ಬಿಡುಗಡೆಗೆ ದಿನ ನಿಗದಿಯಾಗಿದೆ. ಕೋಟಿಗೊಬ್ಬ-3′ ಇದೇ ಏಪ್ರಿಲ್ 23 ರಂದು ಚಿತ್ರ ತೆರೆ ಕಾಣುತ್ತಿದೆ. ಸದ್ಯ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರವನ್ನು ಏ.23 ಕ್ಕೆ ತೆರೆಗೆ ತರುವುದು ಖಚಿತ ಎಂದು ಚಿತ್ರದ ನಿರ್ಮಾಪಕ ಸೂರಪ್ಪ ಬಾಬು ತಿಳಿಸಿದ್ದಾರೆ.
ಇತ್ತೀಚೆಗೆ ಕೋಟಿಗೊಬ್ಬ-3′ ಚಿತ್ರದ ಹಾಡು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು.
ನಿರ್ದೇಶನದತ್ತ ನಾಗೇಂದ್ರ ಪ್ರಸಾದ್ :
ನಟ ಪ್ರಭುದೇವ ಅವರ ಸಹೋದರ ನಾಗೇಂದ್ರ ಪ್ರಸಾದ್ ಈಗ ನಿರ್ದೇಶನದತ್ತ ಮುಖ ಮಾಡಿದ್ದಾರೆ. ತಮಿಳಿನ “ಓಹ್ ಮೈ ಕಡವುಳೆ’ ಸಿನಿಮಾವನ್ನು ನಾಗೇಂದ್ರ ಪ್ರಸಾದ್ ಕನ್ನಡಕ್ಕೆ ರೀಮೇಕ್ ಮಾಡಲು ನಿರ್ಧರಿಸಿದ್ದಾರೆ. ಇದು ಅವರ ಮೊದಲ ಪ್ರಯತ್ನವಾಗಿದೆ. ನಾಗೇಂದ್ರ ಪ್ರಸಾದ್ ಈ ಹಿಂದೆ ಕನ್ನಡದಲ್ಲಿ “ಚಿತ್ರ’, “ಮನಸೆಲ್ಲಾ ನೀನೆ’, “123′ ಸಿನಿಮಾಗಳಲ್ಲಿ ನಟಿಸಿದ್ದರು. ಈಗ ಮತ್ತೆ ಕನ್ನಡದತ್ತ ಮುಖ ಮಾಡಿದ್ದಾರೆ.
ಡಾರ್ಲಿಂಗ್ ಕೃಷ್ಣ ಈಗ ಮಿ. ಬ್ಯಾಚುಲರ್ :
ಸದ್ಯ “ಲವ್ ಮಾಕ್ಟೇಲ್’ ಚಿತ್ರದಲ್ಲಿ ಬಿಝಿಯಾಗಿರುವ ನಟ ಡಾರ್ಲಿಂಗ್ ಕೃಷ್ಣ, ಹೊಸ ವರ್ಷದ ಪ್ರಯುಕ್ತ ತಮ್ಮ ಮುಂಬರುವ ಮತ್ತೂಂದು ಹೊಸ ಚಿತ್ರದ ಟೈಟಲ್ ಅನೌನ್ಸ್ ಮಾಡಿದ್ದಾರೆ.
ಡಾರ್ಲಿಂಗ್ ಕೃಷ್ಣ ಅಭಿನಯದ ಹೊಸಚಿತ್ರಕ್ಕೆ “ಮಿ. ಬ್ಯಾಚುಲರ್’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ನಾಯ್ಡು ಬಂದರ್ ನಿರ್ದೇಶನ ಮಾಡುತ್ತಿದ್ದು, ಮಿಲನಾ ನಾಗರಾಜ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಈ ಚಿತ್ರದ ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.