ಹೊರಬಂದ “ಕವಚ’ ಟ್ರೈಲರ್: ಜನರಿಂದ ಮೆಚ್ಚುಗೆ ಸೂಪರ್: Watch
Team Udayavani, Dec 22, 2018, 3:38 PM IST
“ದಿ ವಿಲನ್’ ಚಿತ್ರದ ನಂತರ ಶಿವರಾಜಕುಮಾರ್ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದು, ಇದೀಗ ಶಿವಣ್ಣನ ವೃತ್ತಿ ಜೀವನದ ವಿಭಿನ್ನ ಚಿತ್ರ ಎಂದೇ ಹೇಳಲಾಗುತ್ತಿರುವ “ಕವಚ’ ಚಿತ್ರದ ಟ್ರೈಲರ್ ಹೊರಬಂದಿದೆ. ಟ್ರೈಲರ್ ನಲ್ಲಿ ಶಿವಣ್ಣ ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಕುತೂಹಲ ಕೆರಳಿಸಿದ್ದಾರೆ. ಆಕರ್ಷಕವಾಗಿ ಮೂಡಿ ಬಂದಿರುವ ಟ್ರೈಲರ್ ಕ್ರೈಮ್ ಕಥೆಯನ್ನು ಬಿಂಬಿಸುತ್ತೆ.
ಶಿವಣ್ಣ ಅಂಧನಾಗಿಯೂ ಆಕ್ಷನ್ ದೃಶ್ಯಗಳಲ್ಲಿ ಮಿಂಚಿದ್ದಾರೆ. ಈ ಚಿತ್ರವು ಮಲಯಾಳಂನ “ಒಪ್ಪಂ’ ಚಿತ್ರದ ರೀಮೇಕು. ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ನಟಿಸಿರುವ ಈ ಚಿತ್ರದ ಕನ್ನಡ ಅವತರಣಿಕೆಯಲ್ಲಿ ಇದೀಗ ಶಿವರಾಜಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಎಚ್.ಎಂ.ಎ ಸಿನಿಮಾನಡಿ ಎಂ.ವಿ.ವಿ. ಸತ್ಯನಾರಾಯಣ ಮತ್ತು ಎ. ಸಂಪತ್ ಕುಮಾರ್ ನಿರ್ಮಿಸುತ್ತಿದ್ದಾರೆ.
ಇನ್ನು ಜಿ.ವಿ.ಆರ್. ವಾಸು ಈ ಚಿತ್ರದ ನಿರ್ದೇಶಕರು. “ಕವಚ’ ಚಿತ್ರವು ತೆರೆಗೆ ಬರಲು ಸಜ್ಜಾಗಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್ ಅವರ ಜೊತೆಗೆ ಇಶಾ ಕೊಪ್ಪಿಕರ್, ರವಿ ಕಾಳೆ, ತಬಲಾ ನಾಣಿ, ವಸಿಷ್ಠ ಸಿಂಹ, ಸುಧಾ ಬೆಳವಾಡಿ, ಜಯಪ್ರಕಾಶ್, ಲಯೇಂದ್ರ ಮುಂತಾದವರು ನಟಿಸುತ್ತಿದ್ದಾರೆ. ರಾಹುಲ್ ಶ್ರೀವಾತ್ಸವ್ ಅವರ ಛಾಯಾಗ್ರಹಣ ಮತ್ತು ಅರ್ಜುನ್ ಜನ್ಯ ಅವರ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.