ಧ್ರುವ ಸರ್ಜಾರಿಂದ “ಸಂಹಾರ’ ಚಿತ್ರದ ಹಾಡುಗಳ ಬಿಡುಗಡೆ
Team Udayavani, Nov 18, 2017, 4:18 PM IST
ಚಿರಂಜೀವಿ ಸರ್ಜಾ ಅಭಿನಯದ “ಸಂಹಾರ’ ಸದ್ಯದಲ್ಲೇ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ ಚಿತ್ರದ ಹಾಡುಗಳನ್ನು ನಟ ಹಾಗೂ ಚಿರಂಜೀವಿ ಸರ್ಜಾ ಅವರ ಸಹೋದರ ಧ್ರುವ ಸರ್ಜಾ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಿರು, ಕಾವ್ಯ ಶೆಟ್ಟಿ, ಚಿಕ್ಕಣ್ಣ, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ದೇಶಕ ಗುರು ದೇಶಪಾಂಡೆ ಮುಂತಾದವರು ಹಾಜರಿದ್ದರು.
ಈ ಚಿತ್ರದಲ್ಲಿ ಚಿರು ಅಂಧ ಯುವಕನಾಗಿ ಕಾಣಿಸಿಕೊಂಡಿದ್ದಾರಂತೆ. ಅಂಧನೊಬ್ಬ ಯಾರನ್ನು ಮತ್ತು ಯಾಕೆ “ಸಂಹಾರ’ ಮಾಡುತ್ತಾನೆ ಎನ್ನುವುದೇ ಚಿತ್ರದ ಕಥೆ. ಇನ್ನು ಚಿಕ್ಕಣ್ಣ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಚಿರು ಮತ್ತು ಚಿಕ್ಕಣ್ಣರಷ್ಟೇ ಅಲ್ಲ, “ರುದ್ರ ತಾಂಡವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ಜಗದೀಶ್ ವಾಲಿ, ಸಂಕಲನಕಾರ ಕೆ.ಎಂ. ಪ್ರಕಾಶ್ ಇಲ್ಲೂ ಮುಂದುವರೆಯುತ್ತಿದ್ದಾರೆ.
ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತ್ರ ಹೊಸ ಸೇರ್ಪಡೆ. ಅಂದಹಾಗೆ, ಈ ಚಿತ್ರದಲ್ಲಿ ಚಿರುಗೆ ನಾಯಕಿಯರಾಗಿ ಹರಿಪ್ರಿಯ ಮತ್ತು ಕಾವ್ಯ ಶೆಟ್ಟಿ ಅಭಿನಯಿಸಿದ್ದಾರೆ. ಚಿತ್ರವನ್ನು ವೆಂಕಟೇಶ್ ಮತ್ತು ಸುಂದರ್ ಕಾಮರಾಜ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.