Renuka swamy Case: ದರ್ಶನ್, ಪವಿತ್ರಾ ಗೌಡ ಮತ್ತೆ ಪೊಲೀಸ್ ಕಸ್ಟಡಿಗೆ
Team Udayavani, Jun 15, 2024, 5:53 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ, ಪೊಲೀಸ್ ವಿಚಾರಣೆಯಲ್ಲಿದ್ದ ನಟ ದರ್ಶನ್ ಗ್ಯಾಂಗ್ ನ್ನು ಶನಿವಾರ(ಜೂ.15 ರಂದು) ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ದರ್ಶನ್ ಸೇರಿ 10 ಮಂದಿಯನ್ನು ಮತ್ತೆ 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಆರ್ಥಿಕ ಅಪರಾಧಗಳ ವಿಶೇಷ ಕೋರ್ಟಿನಲ್ಲಿ ವಿಚಾರಣೆ ನಡೆಸಲಾಗಿದೆ. ಪೊಲೀಸ್ ವಿಚಾರಣೆಯಲ್ಲಿದ್ದ ಆರೋಪಿಗಳನ್ನು ಮತ್ತೆ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.
ಆರೋಪಿಗಳು ಏನು ಮಾಡಿದ್ದಾರೆ ಎಂದು ತಿಳಿಸಲಿ. ಎಲ್ಲದಕ್ಕೂ 2ನೇ ಆರೋಪಿ ದರ್ಶನ್ ಅವರೇ ಕಾರಣ ಎನ್ನುವುದು ಎಷ್ಟು ಸರಿ? ದರ್ಶನ್ ಪರ ಅನಿಲ್ ಬಾಬು ಕೋರ್ಟಿನ ಮುಂದೆ ವಾದ ಮಂಡಿಸಿದ್ದಾರೆ.
ಆರೋಪಿಗಳ ಪೈಕಿ ಮಹಿಳೆ ನೋವು ಅನುಭವಿಸಿದ್ದಾರೆ. ಪವಿತ್ರಾ ಗೌಡ ಅವರನ್ನು 6 ದಿನಗಳ ವಿಚಾರಣೆಗೆ ಒಳಪಡಿಸಲಾಗಿದೆ. ಇದುವರೆಗೂ ನಮಗೆ ರಿಮ್ಯಾಂಡ್ ಅರ್ಜಿ ಬಂದಿಲ್ಲ. ಕೋರ್ಟ್ ಗೆ ಮಾಹಿತಿ ನೀಡದೆ ಆರೋಪಿಗಳ ಮೊಬೈಲ್ ವಶಪಡಿಸಿದ್ದಾರೆ. ಆರೋಪಿಗಳ ಹೇಳಿಕೆ ಹೊರಗೆ ಸೋರಿಕೆಯಾಗುತ್ತಿದೆ ಎಂದು ಪವಿತ್ರಾ ಪರ ವಕೀಲ ನಾರಾಯಣಸ್ವಾಮಿ ವಾದ ಮಂಡಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿ ಎ5 ಹಾಗೂ 13 ರೇಣುಕಾಸ್ವಾಮಿ ಅವರಿಗೆ ಎಲೆಕ್ಟ್ರಿಕ್ ಶಾಕ್ ನೀಡಿ ಸಾಯಿಸಿದ್ದಾರೆ. ಆ ಡಿವೈಸ್ ನ್ನು ನಾವು ವಶಕ್ಕೆ ಪಡೆಯಬೇಕು. ಕೊಲೆ ಮಾಡಿ ಆರೋಪಿ ಮೈಸೂರಿಗೆ ತೆರಳಿದ್ದಾರೆ. ಅಲ್ಲಿನ ಸ್ಥಳ ಮಹಜರು ನಡೆಯಬೇಕು. ಆರೋಪಿಗಳ ಮೊಬೈಲ್ ರಿಟ್ರೈವ್ ಮಾಡಬೇಕು. ಹಾಗಾಗಿ ನಮಗೆ ಆರೋಪಿಗಳು ಇನ್ನಷ್ಟು ದಿನ ಕಸ್ಟಡಿಗೆ ಬೇಕೆಂದು ಪೊಲೀಸರ ಪರ ವಕೀಲರು ವಾದ ಮಂಡಿಸಿದ್ದಾರೆ.
ವಾದ – ಪ್ರತಿವಾದ ಆಲಿಸಿದ ಪೊಲೀಸರು ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ (ಜೂ.20 ರವರೆಗೆ) ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಎ1 ಪವಿತ್ರಾ, ಎ2 ದರ್ಶನ್, ಎ3 ಪವನ್, ಎ4 ರಾಘವೇಂದ್ರ, ಎ5 ನಂದೀಶ, ಎ6 ಜಗದೀಶ್(ಜಗ್ಗ), ಎ7 ಅನುಕುಮಾರ್, ಎ10 ವಿನಯ್, ಎ11 ನಾಗರಾಜ್ ಎ12 ಲಕ್ಷ್ಮಣ, ಎ13 ದೀಪಕ್, ಎ14 ಪ್ರದೋಶ್, ಎ16 ಕೇಶವಮೂರ್ತಿ ಅವರನ್ನು ಕಸ್ಟಡಿಗೆ ನೀಡಲಾಗಿದೆ.
ಈಗಾಗಲೇ ಈ ಪ್ರಕರಣದಲ್ಲಿ 18 ಜನರನ್ನು ಬಂಧಿಸಲಾಗಿದೆ. ಶುಕ್ರವಾರ ನಾಲ್ವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ದಿನಕಳೆದಂತೆ ಪ್ರಕರಣ ಸಂಬಂಧ ವಿಚಾರಣೆಯಲ್ಲಿ ಆರೋಪಿಗಳು ಒಂದೊಂದೆ ವಿಚಾರವನ್ನು ಬಹಿರಂಗಪಡಿಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್ ಎ2 ಆಗಿದ್ದಾರೆ.
ಗೆಳತಿ ಪವಿತ್ರಾ ಗೌಡ ಅವರಿಗೆ ಆಶ್ಲೀಲ ಮೆಸೇಜ್ ಹಾಗೂ ಕಾಮೆಂಟ್ ಮಾಡುತ್ತಿದ್ದ ಕಾರಣ ರೇಣುಕಾಸ್ವಾಮಿ ಅವರನ್ನು ಅಪಹರಿಸಿ, ಬೆಂಗಳೂರಿನ ಶೆಡ್ ವೊಂದರಲ್ಲಿ ಇರಿಸಿ ಹಲ್ಲೆ ಮಾಡಿ, ಹತ್ಯೆಗೈದು ಮೃತದೇಹವನ್ನು ಮೋರಿಗೆ ಎಸೆಯಲಾಗಿತ್ತು. ಇದಾದ ಬಳಿಕ ಇಬ್ಬರು ಠಾಣೆಗೆ ಬಂದು ಈ ಕೊಲೆಯನ್ನು ತಾವು ಹಣಕಾಸಿನ ವಿಚಾರಕ್ಕೆ ಮಾಡಿದ್ದೇವೆ ಎನ್ನುವ ಮಾತುಗಳನ್ನು ಪೊಲೀಸರು ಮುಂದೆ ಹೇಳಿದ್ದರು. ಆದರೆ ಪೊಲೀಸರು ಮತ್ತಷ್ಟು ವಿಚಾರಣೆಯನ್ನು ನಡೆಸಿದಾಗ, ದರ್ಶನ್ ಸೂಚನೆಯ ಮೇರೆಗೆ ಕೊಲೆ ಮಾಡಿದ್ದೇವೆ ಎನ್ನುವ ಸತ್ಯಾಂಶವನ್ನು ಬಾಯಿಬಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.