Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್; ದರ್ಶನ್ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?
ಕೊಲೆ ಕೇಸ್‌ನಲ್ಲಿ ಸಿಕ್ಕಿಬಿದ್ದ ಪ್ರಭಾವಿ ರಾಜಕಾರಣಿ ಸಂಬಂಧಿ ರಕ್ಷಣೆಗೆ ಡೀಲ್ !?
Team Udayavani, Jun 14, 2024, 7:05 AM IST
ಬೆಂಗಳೂರು: ಪ್ರಭಾವಿ ರಾಜಕಾರಣಿಯೊಬ್ಬರ ಹತ್ತಿರದ ಸಂಬಂಧಿ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ 13ನೇ ಆರೋಪಿ ದೀಪಕ್‌ನನ್ನು ರಕ್ಷಿಸಲು ಹಾಗೂ ನಟ ದರ್ಶನ್ ಅವರನ್ನು ಪ್ರಕರಣದಿಂದ ಪಾರು ಮಾಡಲು ಕಸರತ್ತು ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಪೊಲೀಸರು ಮಾತ್ರ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.
ದರ್ಶನ್ ಮತ್ತು 13ನೇ ಆರೋಪಿ ದೀಪಕ್‌ನನ್ನು ಪ್ರಕರಣದಿಂದ ಪಾರು ಮಾಡಲು ಆತನ ಕಡೆಯವರು ದೊಡ್ಡ ಮೊತ್ತದ ಡೀಲ್ ನಡೆಸಲು ಮುಂದಾಗಿದ್ದರು ಎನ್ನಲಾಗಿದೆ. ದೀಪಕ್ ಪ್ರಭಾವಿ ರಾಜಕಾರಣಿ ಸಂಬಂಧಿಯಾಗಿರುವುದರಿಂದ ಆತನನ್ನು ಪ್ರಕರಣದಿಂದ ಹೊರಗಿಡಲು ಪ್ರಯತ್ನ ನಡೆದಿರುವ ಗುಮಾನಿ ಹುಟ್ಟಿಕೊಂಡಿದೆ. ದೀಪಕ್ ಫೋಟೋ ಸಹ ಹೊರಬಾರದಂತೆ ನೋಡಿಕೊಳ್ಳಲಾಗಿತ್ತು. ಈತನನ್ನು ಅಪ್ರೂವರ್ ಮಾಡಿಕೊಂಡು ಪ್ರಕರಣದಿಂದ ಕೈ ಬಿಡುವ ಚಿಂತನೆ ನಡೆದಿತ್ತು ಎನ್ನಲಾಗುತ್ತಿದೆ. ಜೊತೆಗೆ ದರ್ಶನ್ ರಕ್ಷಣೆಗೂ ಪ್ರಭಾವಿಗಳಿಂದ ಒತ್ತಡ ಬರಲಾರಂಭಿಸಿರುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ.
ತನಿಖಾಧಿಕಾರಿಯಾಗಿ ಎಸಿಪಿ ಚಂದನ್ ನೇಮಕ
ಪ್ರಕರಣ ಬೆಳಕಿಗೆ ಬಂದ ನಂತರ ಸ್ಥಳ ಮಹಜರು, ವಿಚಾರಣೆ ಸೇರಿದಂತೆ ಆರಂಭದಿಂದಲೂ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿ ಕಾಮಾಕ್ಷಿಪಾಳ್ಯದ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ಆ ಸ್ಥಾನದಿಂದ ಬದಲಾವಣೆ ಮಾಡಲಾಗಿದೆ. ಅವರ ಬದಲಿಗೆ ಗುರುವಾರದಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಮುಂದೆ ಎಸಿಪಿ ಚಂದನ್ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಸಾಗಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಿರೀಶ್ ನಾಯ್ಕ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾಯಿಸಲಾಗಿತ್ತು. ಚುನಾವಣೆ ಕೆಲಸ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳ ಮಹಜರು ವೇಳೆ ಆರೋಪಿ ಕೈಯಲ್ಲಿ ಮೊಬೈಲ್!:
ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಬುಧವಾರ ಪಟ್ಟಣಗೆರೆ ಶೆಡ್‌ನಲ್ಲಿ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡಿದ ಸಂದರ್ಭದಲ್ಲಿ ಆರೋಪಿಯೊಬ್ಬನಿಗೆ ಪೊಲೀಸ್ ಸಿಬ್ಬಂದಿ ಮೊಬೈಲ್ ಕೊಟ್ಟಿದ್ದಾರೆ. ಮಹಜರು ನಡೆಸುತ್ತಿದ್ದಾಗ ಓರ್ವ ಆರೋಪಿ ಮೊಬೈಲ್ ನಲ್ಲಿ ಮಾತಾಡಿದ್ದ ದೃಶ್ಯ ಇದೀಗ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರ ಬಳಿ ಕಾಡಿ ಬೇಡಿ ಆರೋಪಿ ಮೊಬೈಲ್ ಪಡೆದಿದ್ದ. ಕೆಲಕಾಲ ಯಾರೊಂದಿಗೋ ಆರೋಪಿ ಮಾತನಾಡಿದ್ದ. ಇದನ್ನು ಕಂಡೂ ಪೊಲೀಸರು ಸುಮ್ಮನಿದ್ದರು ಎನ್ನಲಾಗಿದೆ.
ಪಿಎಸ್‌ಐ ಸೂಚನೆ ಮೇರೆಗೆ ಶವ ಎಸೆದರೆ?: ರೇಣುಕಾಸ್ವಾಮಿ ಕೊಲೆ ನಂತರ ಆರೋಪಿಗಳು ಪಿಎಸ್‌ಐ ಒಬ್ಬರಿಗೆ ಕರೆ ಮಾಡಿದ್ದರು. ಪಿಎಸ್‌ಐ ಬಳಿ ಚರ್ಚಿಸಿದ ನಂತರವೇ ದರ್ಶನ್ ತಂಡವು ರೇಣುಕಾಸ್ವಾಮಿ ಶವವನ್ನು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಸೇತುವೆ ಬಳಿ ಎಸೆದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಹತ್ಯೆ ಮಾಡಿ ಶವ ಎಸೆದ ಬಳಿಕ ಪೊಲೀಸ್ ಅಧಿಕಾರಿ ಜತೆಗೂ ಕೊಲೆ ಆರೋಪಿಗಳು ಚರ್ಚೆ ನಡೆಸಿದ್ದಾರೆ. ನಟ ದರ್ಶನ್ ಹೆಸರು ಬರುವುದನ್ನು ತಪ್ಪಿಸಲು ಡೀಲ್ ಗೆ ಮುಂದಾಗಿದ್ದ ಶಂಕೆ ವ್ಯಕ್ತವಾಗಿದೆ.
ದರ್ಶನ್ ವಿರುದ್ಧ ರೌಡಿ ಪಟ್ಟಿ ?:
ನಟ ದರ್ಶನ್ ವಿರುದ್ಧ ರೌಡಿ ಶೀಟ್ ತೆರೆಯುವ ವಿಚಾರವೂ ಮುನ್ನಲೆಗೆ ಬಂದಿದೆ. ದರ್ಶನ್ ವಿರುದ್ಧ ಈ ಹಿಂದೆಯೂ ಹಲವು ಹಲ್ಲೆ, ಬೆದರಿಕೆ ಆರೋಪ ಪ್ರಕರಣಗಳು ಕೇಳಿ ಬಂದಿದ್ದವು. ಇದೀಗ ಕೊಲೆ ಪ್ರಕರಣದಲ್ಲಿ ಮತ್ತೆ ಸಿಕ್ಕಿ ಬಿದ್ದಿದ್ದಾರೆ. ಹೀಗಾಗಿ ದರ್ಶನ್ ವಿರುದ್ಧ ರೌಡಿ ಪಟ್ಟಿ ತೆರೆಯುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.