Renukaswamy Case: ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ದರ್ಶನ್‌ರನ್ನು ಭೇಟಿಯಾದ ಅಭಿಷೇಕ್ ಅಂಬರೀಷ್
Team Udayavani, Aug 14, 2024, 3:27 PM IST
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ(Renukaswamy Case) ಸಂಬಂಧ ಜೈಲಿನಲ್ಲಿರುವ ನಟ ದರ್ಶನ್(Darshan) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರ(ಆ.14ರಂದು) ಮತ್ತೆ ವಿಸ್ತರಣೆ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ , ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆ.28ರವರೆಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.
ಇದನ್ನೂ ಓದಿ: Dhruva Sarja: ಓಡ್ರೋ ಓಡ್ರೋ ಇದು ಸರ್ಜಾ ಅಡ್ಡ.. ಅಭಿಮಾನಿಯ ಹಾಡಿಗೆ ಧ್ರುವ ಹೇಳಿದ್ದೇನು?
ದರ್ಶನ್‌ರನ್ನು ಭೇಟಿಯಾದ ಅಭಿಷೇಕ್ ಅಂಬರೀಷ್: ಜೈಲು ಸೇರಿರುವ ನಟ ದರ್ಶನ್‌ರನ್ನು ಚಿತ್ರರಂಗದ ಕಲಾವಿದರು ಹಾಗೂ ಅವರ ಸ್ನೇಹಿತರು ಭೇಟಿ ಆಗುತ್ತಿದ್ದಾರೆ. ಬುಧವಾರ(ಆ.14ರಂದು) ಅಭಿಷೇಕ್ ಅಂಬರೀಷ್, ಧನ್ವೀರ್ ಹಾಗೂ ಚಿಕ್ಕಣ್ಣ ಭೇಟಿಯಾಗಿ ದರ್ಶನ್ ಅವರಲ್ಲಿ ಎಲ್ಲವೂ ಸರಿ ಆಗುತ್ತದೆನ್ನುವ ಧೈರ್ಯದ ಮಾತನ್ನು ಹೇಳಿ ಬಂದಿದ್ದಾರೆ.
ಈ ಪ್ರಕರಣ ಸಂಬಂಧ ನಟ ದರ್ಶನ್ ವಿರುದ್ಧ ಪೊಲೀಸರಿಗೆ ಮಹತ್ವದ ಸಾಕ್ಷ್ಯಗಳು ಲಭಿಸುತ್ತಿದ್ದು, ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆದ ದಿನ ಆರೋಪಿಗಳು ಪಾರ್ಟಿ ಮಾಡಿದ ಜಾಗದಲ್ಲಿ ಬಿಯರ್ ಬಾಟಲಿ ಪತ್ತೆಯಾಗಿತ್ತು. ಈ ಬಾಟಲಿಯಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು, ಇದು ರೇಣುಕಾಸ್ವಾಮಿ ಅವರದ್ದು ಎಂದು ತಿಳಿದು ಬಂದಿದೆ. ಅದರಲ್ಲಿ ಆರೋಪಿಯೊಬ್ಬನ ಫಿಂಗರ್ ಪ್ರಿಂಟ್ ಲಭ್ಯವಾಗಿದೆ. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.