RenukaSwamy Case: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಕೇಸ್ಗೆ ಟ್ವಿಸ್ಟ್
Team Udayavani, Aug 7, 2024, 4:38 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ (RenukaSwamy Case)ಪ್ರಕರಣದಲ್ಲಿ ಬಿಗ್ ಅಪ್ಡೇಟ್ ರಿವೀಲ್ ಆಗಿದ್ದು, ಆರೋಪಿ ದರ್ಶನ್(Darshan)ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ನಲ್ಲಿ ರಕ್ತದ ಕಲೆ ಪತ್ತೆಯಾಗಿತ್ತು.
ಈ ರಕ್ತದ ಕಲೆಗಳು ರೇಣುಕಾಸ್ವಾಮಿ ದೇಹದ ರಕ್ತದ ಕಲೆಯೇ ಎನ್ನುವುದನ್ನು ಪರಿಶೀಲಿಸಲು ಆ ಬಟ್ಟೆಗಳನ್ನು ಎಫ್ಎಸ್ಎಲ್ಗೆ ಕಳುಹಿಸಿದ್ದರು. ಇದೀಗ ಪೊಲೀಸರ ಕೈಗೆ ಎಫ್ಎಸ್ಎಲ್ ವರದಿ (FSL Report) ಸೇರಿದ್ದು, ಕೊಲೆ ಪ್ರಕರಣದಲ್ಲಿ ದರ್ಶನ್ ವಿರುದ್ಧ ಮಹತ್ವದ ಸಾಕ್ಷಿ ಲಭಿಸಿದೆ.
ದರ್ಶನ್ ಅವರ ಬಟ್ಟೆ ಮೇಲಿದ್ದ ರಕ್ತದ ಕಲೆಗಳು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ ಧೃಡಪಟ್ಟಿದೆ. ಆ ಮೂಲಕ ಈ ಪ್ರಕರಣದಲ್ಲಿ ದರ್ಶನ್ ಅವರು ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಪೊಲೀಸರಿಗೆ ಮಹತ್ವದ ಸಾಕ್ಷಿ ಸಿಕ್ಕಂತಾಗಿದೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಆರೋಪಿಗಳ ಡಿಎನ್ಎ ಟೆಸ್ಟ್ ಸ್ಯಾಂಪಲ್ ರಿಪೋರ್ಟ್ಸ್, ಕೃತ್ಯಕ್ಕೆ ಬಳಸಿದ್ದ ವಸ್ತುಗಳ ರಿಪೋರ್ಟ್ಸ್, ಸಿಸಿಟಿವಿ ರಿಪೋರ್ಟ್ಸ್ ಸೇರಿದಂತೆ ಇನ್ನು ಹಲವು ವರದಿಗಳು ಇನ್ನಷ್ಟೇ ಪೊಲೀಸರ ಕೈಗೆ ಸೇರಬೇಕಿದೆ.
ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.