ಚಿತ್ರರಂಗದ ಚಟುವಟಿಕೆಗಳಿಗೆ ಅನುಮತಿ ನೀಡುವಂತೆ ಮನವಿ

Team Udayavani, May 7, 2020, 11:33 AM IST

ಚಿತ್ರರಂಗದ ಚಟುವಟಿಕೆಗಳಿಗೆ ಅನುಮತಿ ನೀಡುವಂತೆ ಮನವಿ

ಸಾಂದರ್ಭಿಕ ಚಿತ್ರ

ಕೋವಿಡ್ 19 ಲಾಕ್‌ ಡೌನ್‌ ನಿಂದಾಗಿ ಚಿತ್ರರಂಗದ ಬಹುತೇಕ ಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿದ್ದು, ಕಳೆದ ಒಂದೂವರೆ ತಿಂಗಳಿನಿಂದ ಚಿತ್ರದ ಚಿತ್ರೀಕರಣ, ಪ್ರಚಾರ, ಪ್ರದರ್ಶನ ಸೇರಿದಂತೆ ಎಲ್ಲ ಚಟುವಟಿಗೆಗಳು ಸಂಪೂರ್ಣ ಬಂದ್‌ ಆಗಿದೆ. ಇದರಿಂದಾಗಿ ಚಿತ್ರರಂಗವನ್ನೆ ಆಶ್ರಯಿಸಿಕೊಂಡು ಬದುಕು ಕಟ್ಟಿಕೊಂಡಿರುವ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು, ಕಾರ್ಮಿಕರು ಸೇರಿದಂತೆ ಸಾವಿರಾರು ಕುಟುಂಬಗಳಲ್ಲಿ ಆತಂಕದ ಛಾಯೆ ಮನೆ ಮಾಡಿದೆ.

ಸದ್ಯ ಸರ್ಕಾರ ಲಾಕ್‌ ಡೌನ್‌ ನಿಯಮಗಳನ್ನು ಸಡಿಲಿಸದ್ದು ಮುಂದಾಗಿದ್ದು, ಧಾರಾವಾಹಿಗಳ ಚಿತ್ರೀಕರಣಕ್ಕೆ ಷರತ್ತುಬದ್ದ ಅನುಮತಿ ನೀಡಿದೆ. ಇದೇ ವೇಳೆ ಸಿನಿಮಾಗಳ ಶೂಟಿಂಗ್‌ಗಳಿಗೂ ಅನುಮತಿ ನೀಡುವಂತೆ ಚಿತ್ರರಂಗ ಸರ್ಕಾರದ ಮುಂದೆ

ಮನವಿಯನ್ನಿಟ್ಟಿದೆ. ಈ ಸಂಬಂಧ ಬುಧವಾರ ಸಚಿವ ಆರ್‌. ಅಶೋಕ್‌ ಅವರನ್ನು ಭೇಟಿ ಮಾಡಿದ ಚಿತ್ರರಂಗದ ಪ್ರಮುಖರು ಧಾರಾವಾಹಿಗಳ ಚಿತ್ರೀಕರಣಕ್ಕೆ ಅನುಮತಿ ನೀಡಿರುವಂತೆಯೇ, ಚಲನಚಿತ್ರಗಳ ಚಿತ್ರೀಕರಣಕ್ಕೂ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ಸಚಿವ ಆರ್‌. ಅಶೋಕ್‌, ಈ ವಿಷಯವನ್ನು ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸಾಧ್ಯಸಾಧ್ಯತೆಗಳನ್ನು ಗಮನದಲ್ಲಿ ಇಟ್ಟುಕೊಂಡು, ಚಿತ್ರೀಕರಣಕ್ಕೆ ಅವಕಾಶ ನೀಡಲು ಪ್ರಯತ್ನಿಸಲಾಗುವುದು. ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಮ್ಮನ್ನು ಭೇಟಿ ಮಾಡಿದ ಚಿತ್ರರಂಗದ ಪ್ರಮುಖರಿಗೆ ಭರವಸೆಯನ್ನು ನೀಡಿದ್ದಾರೆ.

ಇನ್ನು, ಚಿತ್ರರಂಗದ ಮೇಲೂ ಕೋವಿಡ್ 19 ಎಫೆಕ್ಟ್ ಜೋರಾಗಿಯೇ ತಟ್ಟುತ್ತಿದೆ. ಯಾವಾಗಲೂ ಮುಹೂರ್ತ, ಶೂಟಿಂಗ್‌, ಪಬ್ಲಿಸಿಟಿ, ಪ್ರಮೋಶನ್‌, ರಿಲೀಸ್‌, ಸಕ್ಸಸ್‌ ಸೆಲೆಬ್ರೇಶನ್‌ ಅಂಥ ರಂಗುರಂಗಾಗಿ ಕಳೆಕಟ್ಟಿರುತ್ತಿದ್ದ ಚಿತ್ರರಂಗ, ಸದ್ಯಕ್ಕೆ ಅದ್ಯಾವುದೂ ಇಲ್ಲದೆ ಕಂಪ್ಲೀಟ್‌ ಲಾಕ್‌ ಡೌನ್‌ ಆಗಿ ಬಣಗುಡುತ್ತಿದೆ. ಮತ್ತೂಂದೆಡೆ, ಈಗಾಗಲೇ ಅಧಂಬರ್ಧ ಶೂಟಿಂಗ್‌ ಮಾಡಿರುವ ಚಿತ್ರತಂಡಗಳು ಇನ್ನುಳಿದ ಚಿತ್ರೀಕರಣ ಹೇಗೆ ಮಾಡೋದು, ಯಾವಾಗ ಮಾಡೋದು ಅನ್ನೋ ಚಿಂತೆಯಲ್ಲಿವೆ. ಹಾಗಾಗಿ ಸಿನಿಮಾ ನಿಯೋಗ ಚಿತ್ರೀಕರಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದೆ.

ಇನ್ನು ಆರ್‌. ಅಶೋಕ್‌ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಉಪಾಧ್ಯಕ್ಷ ಉಮೇಶ್‌ ಬಣಕಾರ್‌, ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌, ನಿರ್ಮಾಪಕ ಕೆ. ಮಂಜು, ಚಲನಚಿತ್ರ ಕಾರ್ಮಿಕ ಒಕ್ಕೂಟದ ಕಾರ್ಯದರ್ಶಿ ರವೀಂದ್ರನಾಥ್‌ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಹಾಜರಿದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.