ಹಾಡುಗಳಲ್ಲಿ ಕಥೆ ರಿವೀಲ್
Team Udayavani, Dec 20, 2018, 11:43 AM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ರಿವೀಲ್’ ಚಿತ್ರದ ಆಡಿಯೋ ಇತ್ತೀಚೆಗೆ ಹೊರಬಂದಿದೆ. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಲಹರಿ ವೇಲು, ಚಿತ್ರದ ಆಡಿಯೋವನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. “ರಿವೀಲ್’ ಚಿತ್ರದಲ್ಲಿ ನವ ಪ್ರತಿಭೆ ಅದ್ವೆತ್ ನಾಯಕನಾಗಿ, ಆದ್ಯಾ ಆರಾಧ್ಯ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಪ್ರಸನ್ನ, ರವಿಕಿರಣ್ ಮೊದಲಾದ ಕಲಾವಿದರ ತಾರಾಗಣ ಚಿತ್ರದಲ್ಲಿದೆ. ಮಡಿಕೇರಿಯಿಂದ ಸುಮಾರು ನಲವತ್ತು ಕಿ.ಮೀ ದೂರದಲ್ಲಿರುವ ಅರಮನೆಗೆ ಸಂಬಂಧಪಟ್ಟ ಕಥೆ ಚಿತ್ರದಲ್ಲಿದ್ದು, ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಜಯ್ ಯಾಡ್ಲಿ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಜಯ ಸುಧಾಕರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಮುರಳಿ ಎಸ್.ವೈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಮಡಿಕೇರಿ, ದಾವಣಗೆರೆ, ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಛಾಯಗ್ರಾಹಕ ರವಿ ಸುವರ್ಣ ರಿವೀಲ್ ಚಿತ್ರದ ದೃಶ್ಯಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಶಿವಪ್ರಸಾದ್ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಹಾಡುಗಳ ಮೂಲಕ ಹೊರಬಂದಿರುವ ರಿವೀಲ್ ಮುಂದಿನ ಜನವರಿ ವೇಳೆಗೆ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.