ಎಂದೆಂದಿಗೂ ನಮ್ಮ ಹೃದಯದಲ್ಲಿ.. ಹುಟ್ಟುಹಬ್ಬದಂದು ʼಪರಮಾತ್ಮʼನನ್ನು ಸ್ಮರಿಸಿದ ಚಿತ್ರರಂಗ

Team Udayavani, Mar 17, 2024, 4:47 PM IST

12

ಬೆಂಗಳೂರು: ಇಂದು ಪವರ್‌ ಸ್ಟಾರ್‌ ಹುಟ್ಟುಹಬ್ಬದ ಸವಿ ನೆನಪು. ದೈಹಿಕವಾಗಿ ಅಪ್ಪು ನಮ್ಮೊಂದಿಗೆ ಇರದಿದ್ದರೂ, ಅವರ ಸರಳತೆಯ ವ್ಯಕ್ತಿತ್ವ, ನಗುಮುಖದ ನೋಟ ಇಂದಿಗೂ ಅಭಿಮಾನಿಗಳ ಹೃದಯದಲ್ಲಿ ಹಾಗೆಯೇ ಇದೆ.

ಅಪ್ಪು ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ʼಸ್ಪೂರ್ತಿಯ ದಿನʼವನ್ನಾಗಿ ಆಚರಿಸಿಕೊಂಡಿದ್ದಾರೆ. ಅನ್ನದಾನ, ರಕ್ತದಾನ ಸೇರಿದಂತೆ ಹತ್ತಾರು ಕಡೆ ನೂರಾರು ಫ್ಯಾನ್ಸ್‌ ಗಳು ಸಾಮಾಜಿಕ ಕಾರ್ಯವನ್ನು ಮಾಡಿದ್ದಾರೆ. ಅಪ್ಪು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.

ಥಿಯೇಟರ್‌ ನಲ್ಲಿ ʼಜಾಕಿʼ ಸಿನಿಮಾವನ್ನು ರೀ ರಿಲೀಸ್‌ ಮಾಡಲಾಗಿದೆ. ಎಲ್ಲೆಡೆ ʼಜಾಕಿʼ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ಅಪ್ಪು ಬಾಸ್‌ ನ್ನು ಬಿಗ್‌ ಸ್ಕ್ರೀನ್‌ ನಲ್ಲಿ ನೋಡಿ ಅಭಿಮಾನಿಗಳ ಜೈಕಾರ ಹಾಕಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲೆಡೆ ಅಪ್ಪು ಹುಟ್ಟುಹಬ್ಬಕ್ಕೆ ವಿಶ್‌ ಮಾಡಿ, ಸಾವಿರಾರು ಮಂದಿ ಅವರನ್ನು ಸ್ಮರಿಸಿದ್ದಾರೆ.

ʼʼಎಂದೆಂದಿಗೂ ನಮ್ಮ ಹೃದಯದಲ್ಲಿ.. ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಪೂರ್ತಿದಾಯಕವಾಗಿರುತ್ತದೆ” ಎಂದು ಪತ್ನಿ ಅಶ್ವಿನಿ ಅವರು ಬರೆದುಕೊಂಡಿದ್ದಾರೆ.

ಹಿರಿಯ ಸಹೋದರ ಶಿವರಾಜ್‌ ಕುಮಾರ್‌ ಅವರು, ಅಪ್ಪು ಆಗಿ ಬಂದ ನೀನು ಪುನೀತನಾಗಿ ಎಲ್ಲರ ಮನಸ್ಸಲ್ಲೂ ಭದ್ರವಾಗಿ ಇದ್ದುಬಿಟ್ಟೆ. ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ, ಎಷ್ಟೋ ಜನಕ್ಕೆ ನೀನು ಮಾರ್ಗದರ್ಶಿ, ಅವರ ಆರಾಧ್ಯ ದೈವ, ಕೋಟಿ ಕೋಟಿ ಅಭಿಮಾನಿಗಳಿಗೆ ಪ್ರೀತಿಯ ಪವ‌ರ್ ಸ್ಟಾರ್.

ಆದರೆ ನನಗೆ ಎಂದೆಂದಿಗೂ ನನ್ನ ಪುಟ್ಟ ತಮ್ಮ. ನನ್ನ ಕೈ ಹಿಡಿದು ನಡೆದ ತಮ್ಮ, ನಿನ್ನ ನಗುವಲ್ಲಿ ನನ್ನ ಸಂತೋಷ ಹುಡುಕಿ ಕೊಟ್ಟ ತಮ್ಮ, ನನ್ನ ಎದೆಯ ಮೇಲೆ ಮಲಗಿದ ತಮ್ಮ, ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ.ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ಫೋಟೋ ಹಂಚಿಕೊಂಡು ಬರೆದುಕೊಂಡಿದ್ದಾರೆ.

ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು, “ನಮ್ಮೆಲ್ಲರ ಹೃದಯಗಳಲ್ಲಿ ಸದಾ ನೆಲೆಸಿರುವ ಪರಮಾತ್ಮ, ನಗುಮುಖದ ಸರದಾರ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ Sir ಅವರ ನೆನಪಿನಲ್ಲಿ ನಾವು..” ಎಂದು ಬರೆದುಕೊಂಡು ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ.

“ಪುನೀತ್ ರಾಜ್ ಕುಮಾರ್ ಅವರ ಎಲ್ಲಾ ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಶುಭ ದಿನ. ಈ ದಿನ ಎಲ್ಲರ ಮುಖದಲ್ಲಿ ನಗುವನ್ನು ತರಲಿ. ನಿಮ್ಮನ್ನು ನಾನು ಯಾವಾಗಲೂ ಮಿಸ್‌ ಮಾಡಿಕೊಳ್ಳುತ್ತೇನೆ ಸ್ನೇಹಿತ. ಎಲ್ಲರಿಗೂ ಮಾರ್ಚ್ 17 ರ ಶುಭಾಶಯಗಳು” ಎಂದು ಕಿಚ್ಚ ಸುದೀಪ್‌ ಬರೆದುಕೊಂಡಿದ್ದಾರೆ.

ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌, ಸಾಯಿ ಕುಮಾರ್‌, ಶ್ರೀಮುರಳಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ಅಪ್ಪು ಅವರ ಹುಟ್ಟುಹಬ್ಬದಂದು ಅವರನ್ನು ಸ್ಮರಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.