‘ನೋಡಿ ಸ್ವಾಮಿ ಇವರ ಬರ್ತ್ ಡೇ ಇವತ್ತು’
Team Udayavani, Jun 21, 2021, 1:35 PM IST
‘ಆಪರೇಷನ್ ಅಲಮೇಲಮ್ಮ’ ಸಿನಿಮಾ ಖ್ಯಾತಿಯ ನಟ ರಿಷಿ ಅವರಿಗೆ ಇಂದು (ಜೂನ್ 21) ಹುಟ್ಟು ಹಬ್ಬದ ಸಂಭ್ರಮ. 33ನೇ ವಸಂತಕ್ಕೆ ಕಾಲಿಟ್ಟಿರುವ ಈ ನಟನಿಗೆ ಸ್ನೇಹಿತರಿಂದ, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆಯಾಗುತ್ತಿದೆ.
ರಿಷಿ ಬರ್ತ್ ಡೇ ನಿಮಿತ್ತ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಚಿತ್ರದ ಮೊದಲ ಲುಕ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರವನ್ನು ಇಲ್ಸಾವುದಿನ್ ಎನ್.ಎಸ್ ಎಂಬುವರು ನಿರ್ದೇಶನ ಮಾಡುತ್ತಿದ್ದಾರೆ. ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಿಸಿದ್ದ ಅಮರೇಜ್ ಸೂರ್ಯವಂಶಿ ಎಂಬುವರ ನಿರ್ಮಾಣ ಮಾಡುತ್ತಿದ್ದಾರೆ.
ಇನ್ನು ಕನ್ನಡ ಚಿತ್ರರಂಗದಲ್ಲಿ ಪ್ರತಿಭಾನ್ವಿತ ನಟ ಎಂದೇ ಗುರುತಿಸಿಕೊಂಡಿರುವ ರಿಷಿ, ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಮಿಂಚಿದವರು. ಆರಂಭದಲ್ಲಿ 2013ರಂದು ‘ಮನಿ ಹನಿ ಶನಿ’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಟಿ.ಎನ್. ಸೀತಾರಾಮ್ ನಿರ್ದೇಶನದ ‘ಮಹಾಪರ್ವ’ ಧಾರಾವಾಹಿಯಲ್ಲಿ ನಟಿಸಿ ಕಿರುತೆರೆಗೆ ಪಾದಾರ್ಪಣೆ ಮಾಡಿದರು.
ರಿಷಿ 2017ರಂದು ‘ಆಪರೇಷನ್ ಅಲಮೇಲಮ್ಮ’ ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ಮೊದಲ ಸಿನಿಮಾದಲ್ಲೇ ರಿಷಿ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತು. ನಂತರ ಹೇಮಂತ್ ರಾವ್ ಅವರ ಕವಲುದಾರಿ ಸಿನಿಮಾ ಮತ್ತೊಂದು ಬಿಗ್ ಯಶಸ್ಸು ತಂದು ಕೊಟ್ಟಿತು. ಇವರು ಇತ್ತೀಚೆಗೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.