ಸಸ್ಪೆನ್ಸ್ ದಾರಿಯಲ್ಲಿ ರಿಷಿ: Watch
Team Udayavani, Sep 3, 2018, 3:34 PM IST
ಪುನೀತ್ ರಾಜಕುಮಾರ್ ತಮ್ಮ ಪಿಆರ್ಕೆ ಬ್ಯಾನರ್ನಡಿ ಹೊಂಬಾಳೆ ಫಿಲಂಸ್ ಜತೆ ಸೇರಿ ಚಿತ್ರವೊಂದನ್ನು ನಿರ್ಮಿಸುತ್ತಿರುವ “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ನಿರ್ದೇಶಿಸಿದ್ದ ಹೇಮಂತ್ ರಾವ್ ನಿರ್ದೇಶನದ “ಕವಲು ದಾರಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಸಖತ್ ಸಸ್ಪೆನ್ಸ್ ಥ್ರಿಲ್ಲಿಂಗ್ ಆಗಿದ್ದು, ಸಿನಿಪ್ರಿಯರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ.
ಈ ಹಿಂದೆ ಚಿತ್ರದ ನಾಯಕ ರಿಷಿ ಅವರ ಫಸ್ಟ್ ಲುಕ್ ಬಿಡುಗಡೆಯಾಗಿ ಪೊಲೀಸ್ ಅಧಿಕಾರಿಯ ಗೆಟಪ್ನಲ್ಲಿ ಹೀರೋ ಮನೀಶ್ ಕಾಣಿಸಿಕೊಂಡಿದ್ದರು. ಅಲ್ಲದೇ ಮನೀಶ್ ರಿಷಿ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಎಂದಷ್ಟೇ ಗೊತ್ತಾಗಿತ್ತು. ಅಲ್ಲದೇ ಇದೊಂದು ಔಟ್ ಅಂಡ್ ಔಟ್ ಥ್ರಿಲ್ಲರ್ ಸಿನಿಮಾ ಆಗಿದ್ದು, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಚಿತ್ರ ಮಾಡಿದ್ದ ಹೇಮಂತ್, ಅದೇ ತಂಡ ಕಟ್ಟಿಕೊಂಡು “ಕವಲು ದಾರಿ’ ಮಾಡಿದ್ದಾರೆ.
ಇನ್ನು ಚರಣ್ ರಾಜ್ ಸಂಗೀತ ಸಂಯೋಜನೆ, ಕೆ. ರವಿವರ್ಮ ಸಾಹಸ, ಜಗದೀಶ್ ಸಂಕಲನ, ಹೇಮಂತ್ ರಾವ್ – ಗುಂಡು ಶೆಟ್ಟಿ ಸಂಭಾಷಣೆ ಸೇರಿದಂತೆ ಆಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣ ಚಿತ್ರಕ್ಕಿದೆ. ಹಾಗೂ ಅನಂತ್ ನಾಗ್, ರಿಷಿ, ಅಚ್ಯುತ್ ಕುಮಾರ್, ಸುಮನ್ ರಂಗನಾಥನ್, ರೋಶ್ನಿ ಪ್ರಕಾಶ್, ಸಿದ್ಧಾರ್ಥ್ ಮಾಧ್ಯಾಮಿಕ, ಸಿರಿ ರವಿಕುಮಾರ್, ಸಮನ್ವಿತಾ ಶೆಟ್ಟಿ, ಸಂಪತ್ ಕುಮಾರ್, ಸುಲೀಲ್ ಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.