ಚಿತ್ರರಂಗದ 3000 ಕಾರ್ಮಿಕರಿಗೆ ತಲಾ ₹5000: ಸಂಕಷ್ಟಕ್ಕೆ ಸ್ಪಂದಿಸಿದ ರಾಕಿ ಭಾಯ್
Team Udayavani, Jun 1, 2021, 8:45 PM IST
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಬಹುದೊಡ್ಡ ಪರಿಹಾರದ ಮೊತ್ತ ಘೋಷಿಸಿದ್ದಾರೆ. ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸ್ಪಂದಿಸಿರುವ ರಾಕಿ ಭಾಯ್ ತಮ್ಮ ಸಂಪಾದನೆಯಿಂದ ಗಳಿಸಿರುವ ಮೊತ್ತದಲ್ಲಿ 1.5 ಕೋಟಿ ರೂಪಾಯಿಯನ್ನು ಪರಿಹಾರ ರೂಪದಲ್ಲಿ ಹಂಚುತ್ತಿದ್ದಾರೆ. ತಮ್ಮ ಈ ನಿರ್ಧಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
‘ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ ₹5 ಸಾವಿರವನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ.
ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್ ತಿಳಿಸಿದ್ದಾರೆ.ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಯಶ್ ಉಲ್ಲೇಖಿಸಿದ್ದಾರೆ.
ಈಗಾಗಲೇ ನಟರಾದ ಉಪೇಂದ್ರ, ಸುದೀಪ್, ಸಾಧುಕೋಕಿಲ ಮುಂತಾದವರು ಸಂಕಷ್ಟದಲ್ಲಿರುವ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ಆರ್ಥಿಕ ನೆರವು ಹಾಗೂ ದಿನಸಿ ಕಿಟ್‌ಗಳನ್ನು ವಿತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.