ನಿರ್ಮಾಣದತ್ತ ರಾಕಿ ಭಾಯ್ ಚಿತ್ತ ? ಯಶ್ ಮುಂದಿನ ಸಿನಿಮಾ ಯಾವುದು !
Team Udayavani, Jan 9, 2021, 10:00 PM IST
ಬೆಂಗಳೂರು: ಸ್ಯಾಂಡಲ್ ವುಡ್ ಅಭಿಮಾನಿಗಳ ಅತೀ ಕಾತರತೆಯ ಸಿನಿಮಾ ಕೆಜಿಎಫ್ ಚಾಪ್ಟರ್-2 ನ ಟೀಸರ್ ವಿಶ್ವ ದಾಖಲೆಯೊಂದಿಗೆ 100 ಮಿಲಿಯನ್ ವೀಕ್ಷಣೆ ಕಂಡು ಚಿತ್ರತಂಡವನ್ನೂ ಒಳಗೊಂಡಂತೆ ನಟ ಯಶ್ ಅವರಿಗೆ ಬಹುದೊಡ್ಡ ಯಶಸ್ಸನ್ನು ತಂದುಕೊಟ್ಟಿದೆ. ಕನ್ನಡ ಸೇರಿದಂತೆ ಹಲವಾರು ಭಾಷೆಯ ಸಿನಿ ಪ್ರಿಯರು ಈ ಟೀಸರ್ ನೋಡಿ ಫಿದಾ ಆಗಿದ್ದಾರೆ
ಈ ನಡುವೆ ನಟ ಯಶ್ ಹೊಸದೊಂದು ಆಲೋಚನೆಯಲ್ಲಿದ್ದಾರೆ ಎಂಬ ಗುಸು ಗುಸು ಸುದ್ದಿಗಳು ಹರಿದಾಡುತ್ತಿವೆ. ಕೆಜಿಎಫ್ ಚಾಪ್ಟರ್ -2 ಸಿನಿಮಾದ ಬಳಿಕ ರಾಕಿ ಭಾಯ್ ನಿರ್ಮಾಣ ರಂಗಕ್ಕೆ ಇಳಿಯುವ ಸಾಧ್ಯತೆಗಳಿವೆ ಎಂಬ ಸುದ್ದಿ ಹರಿದಾಡುತ್ತಿವೆ. ಹಾಗಂತ ಯಶ್ ಯಾವ ಸಿನಿಮಾದ ನಿರ್ಮಾಪಕರಾಗಲಿದ್ದಾರೆ ಎಂಬಿತ್ಯಾದಿ ಯಾವ ಮಾಹಿತಿಗಳು ಇನ್ನೂ ತಿಳಿದುಬಂದಿಲ್ಲ.
ಯಶ್ ಅಭಿನಯಿಸುತ್ತಿರುವ ಮುಂದಿನ ಸಿನಿಮಾಕ್ಕೆ ಅವರೆ ಬಂಡವಾಳ ಹೂಡಲಿದ್ದಾರಂತೆ. ಅವರ ಆಪ್ತ ವಲಯ ಈ ಸಲಹೆಯೊಂದನ್ನು ನೀಡಿದ್ದು, ರಾಕಿಂಗ್ ಸ್ಟಾರ್ ಅಭಿನಯದಲ್ಲಿ ಮೂಡಿಬರಲಿರುವ ಮುಂದಿನ ಸಿನಿಮಾ ಅವರ ಬ್ಯಾನರ್ ಅಡಿಯಲ್ಲಿಯೇ ನಿರ್ಮಾಣಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಅಮೀರಾ ಪುನ್ವಾನಿ ಹುಟ್ಟುಹಬ್ಬ ಆಚರಿಸಿದ ಅನುಷ್ಕಾ
ಯಶ್ ಅವರ ಮುಂದಿನ ಸಿನಿಮಾ ಯಾವುದಿರಬಹುದು ?
ಕೆಜಿಎಫ್ ಸಿನಿಮಾದ ನಂತರ ಭಾರಿ ಖ್ಯಾತಿಯನ್ನು ಪಡೆದಿರುವ ನಟ ಯಶ್ ರಾಣಾ , ಕಿರಾತಕ 2 ಸೇರಿದಂತೆ ಈಗಾಗಲೇ ಹಲವಾರು ಸಿನಿಮಾಗಳನ್ನು ತಮ್ಮ ಕೈಯಲ್ಲಿಟ್ಟುಕೊಂಡಿದ್ದಾರೆ. ಆದರೆ ಯಾವ ಸಿನಿಮಾದಲ್ಲಿ ಇವರು ಕಾಣಿಸಿಕೊಳ್ಳಲಿದ್ದಾರೆ ಎಂಬುವುದು ಮಾತ್ರ ಇನ್ನೂ ತಿಳಿದುಬಂದಿಲ್ಲ. ಈ ಎಲ್ಲಾ ಸುದ್ದಿಗಳ ನಡುವೆ ಯಶ್ ಅವರ ಮುಂದಿನ ಸಿನಿಮಾವನ್ನು ಮಫ್ತಿ ನಿರ್ದೇಶಕ ನರ್ತನ್ ನಿರ್ದೇಶಿಸಲಿದ್ದಾರೆ ಎಂಬ ಗಾಸಿಪ್ ಗಳೂ ಹರಿದಾಡುತ್ತಿದ್ದು ಯಾವುದೂ ಇನ್ನು ಅಧಿಕೃತಗೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.