Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Team Udayavani, Jul 8, 2024, 12:39 PM IST

Ronny

ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿರುವ ನಾಯಕ ಕಿರಣ್‌ ರಾಜ್‌ ನಟನೆಯ “ರಾನಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆಗಸ್ಟ್‌ 30ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಇತ್ತೀಚೆಗೆ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದೆ ತಂಡ. ಪ್ರಮೋದ್‌ ಮರವಂತೆ ಅವರು ಬರೆದು, ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜಿಸಿರುವ “ಹವಾಮಾನವೆ ಸುಂದರ ಸುಂದರ’ ಎಂಬ ಹಾಡು ಬಿಡುಗಡೆಯಾಯಿತು.

ಹಾಡು ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಕಿರಣ್‌ ರಾಜ್‌, “ಒಂದು ಹಂತದಲ್ಲಿ ನನಗೆ ಜೀವನದಲ್ಲಿ ಮುಂದೇನು ಎಂಬ ಪ್ರಶ್ನೆ ಎದುರಾಯಿತು. ಆಗ ನನಗೆ, “ರಾನಿ’ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರು ಸಿಕ್ಕರು. ನನಗೂ ಈ ಚಿತ್ರದ ಕಥೆ ಇಷ್ಟವಾಯಿತು. ಚಿತ್ರದ ಕಥೆ ಕಾಲ್ಪನಿಕವಾದರೂ, ಪ್ರತಿಯೊಬ್ಬರಿಗೂ ನನ್ನ ಪಾತ್ರ ಹತ್ತಿರವಾಗುತ್ತದೆ. ಬಿಗ್‌ ಬಜೆಟ್‌ ನ ಚಿತ್ರವಿದು. ಕೆಲವರು ನನ್ನ ಸಿನಿಮಾಗೆ ಯಾಕೆ ಇಷ್ಟೊಂದು ಖರ್ಚು ಮಾಡುತ್ತಿದ್ದೀರಾ? ಎಂದು ನಿರ್ಮಾಪಕರನ್ನು ಕೇಳಿರಬಹುದು. ಆದರೆ ನಮ್ಮ ನಿರ್ಮಾಪಕರು ವ್ಯಕ್ತಿಗಿಂತ ವ್ಯಕ್ತಿತ್ವಕ್ಕೆ ಬೆಲೆ ಕೊಡುವವರು. ಹಾಗಾಗಿ, ಹಣಕಾಸಿನ ವಿಚಾರಕ್ಕಿಂತ ಒಳ್ಳೆಯ ಸಿನಿಮಾ ಮಾಡಿದ್ದಾರೆ’ ಎಂದರು.

“ಇದು ಆ್ಯಕ್ಷನ್‌ ಚಿತ್ರವಾದರೂ, ಪಕ್ಕಾ ಕೌಟುಂಬಿಕ ಚಿತ್ರ. ಈ ಹಿಂದೆ ನೀವು ನೋಡಿರದ ಕಿರಣ್‌ ರಾಜ್‌ ಅವರನ್ನು ರಾನಿ ಚಿತ್ರದಲ್ಲಿ ನೋಡಬಹುದು. ಆರು ಆ್ಯಕ್ಷನ್‌ ಸನ್ನಿವೇಶಗಳಿದೆ. ಸೆಂಟಿಮೆಂಟ್‌ ಸಹ ಸ್ವಲ್ಪ ಹೆಚ್ಚಾಗಿಯೇ ಇದೆ. ಆರು ಫೈಟ್‌ಗಳಿಗೆ ವಿನೋದ್‌ ಮಾಸ್ಟರ್‌ ಅವರೇ ಸಾಹಸ ನಿರ್ದೇಶನ ಮಾಡಿದ್ದಾರೆ. ಆರಂಭದಿಂದಲೂ ಸದ್ದು ಮಾಡುತ್ತಿರುವ ರಾನಿ ಆ.30ಕ್ಕೆ ತೆರೆಗೆ ಬರಲಿದೆ’ ಎಂದು ನಿರ್ದೇಶಕ ಗುರುತೇಜ್‌ ಶೆಟ್ಟಿ ತಿಳಿಸಿದರು.

ಚಿತ್ರತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಬಂದಿದೆ. ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು ನಿರ್ಮಾಪಕರಾದ ಚಂದ್ರಕಾಂತ್‌ ಪೂಜಾರಿ ಹಾಗೂ ಉಮೇಶ್‌ ಹೆಗ್ಡೆ.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.