‘ಮಂಕುಭಾಯ್‌ ಫಾಕ್ಸಿ ರಾಣಿ’ ರೂಪದಲ್ಲಿ ಬಂದ ಬಿಗ್ ಬಾಸ್ ರೂಪೇಶ್ ಶೆಟ್ಟಿ


Team Udayavani, Jan 6, 2023, 3:58 PM IST

Roopesh shetty’s manku bhai foxy rani ready to release

ಇತ್ತೀಚೆಗಷ್ಟೇ ಬಿಗ್‌ಬಾಸ್‌ ಮನೆಯಿಂದ ಗೆಲುವಿನ ನಗುವಿನೊಂದಿಗೆ ಹೊರಬಂದಿರುವ ರೂಪೇಶ್‌ ಶೆಟ್ಟಿ, ಸಂಕ್ರಾಂತಿ ವೇಳೆಗೆ ಬಿಗ್‌ ಸ್ಕ್ರೀನ್‌ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ರೂಪೇಶ್‌ ಶೆಟ್ಟಿ ನಾಯನಾಗಿ ಅಭಿನಯಿಸಿರುವ “ಮಂಕುಭಾಯ್‌ ಫಾಕ್ಸಿ ರಾಣಿ’ ಸಿನಿಮಾ ಇದೇ, ಜ. 13ಕ್ಕೆ ಬಿಡುಗಡೆಯಾಗುತ್ತಿದೆ. ಸದ್ಯ “ಮಂಕುಭಾಯ್‌ ಫಾಕ್ಸಿ ರಾಣಿ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದ ಮೊದಲ ಟ್ರೇಲರ್‌ ಬಿಡುಗಡೆ ಮಾಡಿದೆ.

ಇದೇ ವೇಳೆ ಸಿನಿಮಾದ ಬಗ್ಗೆ ಮಾತನಾಡಿದ ರೂಪೇಶ್‌ ಶೆಟ್ಟಿ, “ಕನ್ನಡದಲ್ಲಿ ಇಲ್ಲಿಯವರೆಗೆ ನಾಲ್ಕು ಸಿನಿಮಾಗಳಲ್ಲಿ ಬೇರೆ ಬೇರೆ ನಟರ ಜೊತೆ ಅಭಿನಯಿಸಿದ್ದೇನೆ. ಇದು ನನ್ನ ಐದನೇ ಸಿನಿಮಾ. ಈ ಸಿನಿಮಾದಲ್ಲಿ ನಾನು ಪೂರ್ಣ ಪ್ರಮಾಣದ ಹೀರೋ ಆಗಿ ಕಾಣಿಸಿಕೊಂಡಿದ್ದೇನೆ. ಸುಮಾರು ಮೂರು ವರ್ಷಗಳ ಹಿಂದೆ ಈ ಸಿನಿಮಾದ ಕೆಲಸಗಳು ಶುರುವಾಯಿತು. ಆದರೆ ಕೋವಿಡ್‌ ಮತ್ತಿತರ ಕಾರಣಗಳಿಂದ ಸಿನಿಮಾ ರಿಲೀಸ್‌ ತಡವಾಗುತ್ತ ಹೋಯಿತು. ಈಗ ಸಿನಿಮಾ ರಿಲೀಸ್‌ ಹಂತಕ್ಕೆ ಬಂದಿದೆ. ಯಕ್ಷಗಾನದಲ್ಲಿ ಸಿಂಹದ ಪಾತ್ರ ಹಾಕುವ ಕಲಾವಿದನಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದೇನೆ. ಲವ್‌ ಮಾಡಬೇಕೆಂದು ಹೊರಡುವವನ ಜೀವನದಲ್ಲಿ ಏನೇನು ನಡೆಯುತ್ತದೆ ಎಂಬುದರ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ. ಒಂದಷ್ಟು ಕಾಮಿಡಿ, ಎಮೋಶನ್ಸ್‌ ಜೊತೆಯಾಗಿಟ್ಟುಕೊಂಡು ಸಿನಿಮಾ ಬಂದಿದೆ’ ಎಂದು “ಮಂಕುಭಾಯ್‌ ಫಾಕ್ಸಿ ರಾಣಿ’ ಸಿನಿಮಾದ ಕಥೆ ಮತ್ತು ಪಾತ್ರ ಪರಿಚಯ ಮಾಡಿಕೊಟ್ಟರು.

ಇನ್ನು “ಮಂಕುಭಾಯ್‌ ಫಾಕ್ಸಿ ರಾಣಿ’ ಸಿನಿಮಾದಲ್ಲಿ ಗೀತಾ ಭಾರತಿ ಭಟ್‌ ನಾಯಕಿಯಾಗಿ ಅಭಿನಯಿಸಿದ್ದಾರೆ. “ಸುಮಾರು ಮೂರು ವರ್ಷದ ಹಿಂದೆ ಅಭಿನಯಿಸಿದ ಈ ಪಾತ್ರ ತುಂಬಾ ಖುಷಿಕೊಟ್ಟಿದೆ. ಸ್ಥೂಲಕಾಯದ ಹುಡುಗಿಯೊಬ್ಬಳು ಹೇಗೆಲ್ಲ ಅಪಹಾಸ್ಯಕ್ಕೆ ಈಡಾಗುತ್ತಾಳೆ. ಅವರ ಜೀವನ ಹೇಗಿರುತ್ತದೆ ಎಂಬುದನ್ನು ನನ್ನ ಪಾತ್ರ ತೋರಿಸುತ್ತದೆ’ ಎಂಬುದು ನಾಯಕಿ ಗೀತಾ ಮಾತು.

ಉಳಿದಂತೆ ಪಂಚಮಿ, ಅರ್ಜುನ್‌ ಕಜೆ, ಪ್ರಕಾಶ್‌ ತುಮ್ಮಿನಾಡ್‌, ಸ್ವರಾಜ್‌ ಶೆಟ್ಟಿ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಕೆಲವು ತುಳು ಸಿನಿಮಾಗಳಲ್ಲಿ, ಒಂದಷ್ಟು ಶಾರ್ಟ್‌ ಫಿಲಂ ಮತ್ತು ಮ್ಯೂಸಿಕ್‌ ಆಲ್ಬಂಗಳಲ್ಲಿ ಕೆಲಸ ಮಾಡಿದ ಅನುಭವವಿರುವ ಮಂಗಳೂರು ಮೂಲದ ಗಗನ್‌. ಎಂ “ಮಂಕುಭಾಯ್‌ ಫಾಕ್ಸಿ ರಾಣಿ’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಜೋಶ್ವ ಜೈಶಾನ್‌ ಕ್ರಾಸ್ತಾ ನಿರ್ಮಾಣದಲ್ಲಿ ಮೂಡಿಬಂದಿರುವ “ಮಂಕುಭಾಯ್‌ ಫಾಕ್ಸಿ ರಾಣಿ’ ಸಿನಿಮಾಕ್ಕೆ ಎ. ಕೆ ಷಹಜಹಾನ್‌ ಛಾಯಾಗ್ರಹಣ, ಸುಶಾಂತ್‌ ಶೆಟ್ಟಿ, ಪ್ರಜ್ವಲ್‌ ಸುವರ್ಣ ಸಂಕಲನವಿದೆ. ದಕ್ಷಿಣ ಕನ್ನಡ ಪರಿಸರದಲ್ಲಿ ಇಡೀ ಸಿನಿಮಾದ ಕಥೆ ನಡೆಯುವುದರಿಂದ ವಿಟ್ಲ, ಪುತ್ತೂರು, ಮಂಗಳೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.

ಜಿ.ಎಸ್.ಕಾರ್ತಿಕ ಸುಧನ್

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.