Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Team Udayavani, May 3, 2024, 3:48 PM IST
ರಿಷಿ ನಟನೆಯ ಮತ್ತೂಂದು ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ರುದ್ರ ಗರುಡ ಪುರಾಣ’. ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಫಸ್ಟ್‌ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಫಸ್ಟ್ ಲುಕ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಚಿತ್ರತಂಡದ ಮೊಗದಲ್ಲಿ ನಗುಮೂಡಿದೆ. ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಂಬಲ್, ಡಿಯರ್ ವಿಕ್ರಮ್ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ರಿಷಿ, “ನನಗೆ ಒಂದೇ ಜಾನರ್, ಒಂದೇ ತೆರನಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಇಷ್ಟವಿಲ್ಲ. ಆದರೆ, ಈ ಕಥೆ ಕೇಳಿದ ನಂತರ ಖುಷಿಯಿಂದ ಒಪ್ಪಿಕೊಂಡೆ. ನನ್ನ ಹಿಂದಿನ ಚಿತ್ರಗಳಿಗೆ ಈ ಚಿತ್ರಕ್ಕೂ ಯಾವುದೇ ಹೋಲಿಕೆ ಇಲ್ಲ. ಚಿತ್ರದಲ್ಲಿ ಸಾಕಷ್ಟು ಆಯಾಮಗಳು ಬರುತ್ತವೆ. ಗರುಡ ಪುರಾಣದ ಕೆಲವು ಅಂಶಗಳು ಕೂಡಾ ಈ ಸಿನಿಮಾದಲ್ಲಿ ಬರುತ್ತವೆ’ ಎನ್ನುತ್ತಾರೆ.
ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕಾ ನಟಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್. ಪೇಟೆ, ಗಿರಿ, ಕೆ.ಎಸ್. ಶ್ರೀಧರ್, ಅಶ್ವಿನಿ ಗೌಡ, ರಾಮ್ ಪವನ್, ವಂಶಿ, ಆಕರ್ಷ, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ರದ್ವಿ ಮುಂತಾದವರು ತಾರಾ ಬಳಗ ದಲ್ಲಿದ್ದಾರೆ.
ಸಂಭಾಷಣೆ ರಘು ನಿಡುವಳ್ಳಿ ಅವರದು. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.
ಈಗಾಗಲೇ ರುದ್ರ ಗರುಡ ಪುರಾಣ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.