Sandalwood: ರಿಷಬ್ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?
Team Udayavani, Mar 18, 2024, 4:59 PM IST
ಬೆಂಗಳೂರು: ರಿಷಬ್ ಶೆಟ್ಟಿ ಅವರ ʼಕಾಂತಾರ -1ʼ ಸಿನಿಮಾ ಸಟ್ಟೇರುವ ಮುನ್ನ ಒಂದಲ್ಲ ಒಂದು ವಿಚಾರದಲ್ಲಿ ಸದ್ದು ಮಾಡುತ್ತಿದೆ. ಕಳೆದ ವರ್ಷದ ನವೆಂಬರ್ ನಲ್ಲಿ ಟೀಸರ್ ವೊಂದನ್ನು ರಿಲೀಸ್ ಮಾಡಿದ ಚಿತ್ರತಂಡ ಆ ಬಳಿಕ ಯಾವ ಅಪ್ಡೇಟ್ ನ್ನು ನೀಡಿಲ್ಲ.
ಸದ್ಯಕ್ಕೆ ನಾನೇ ಹೀರೋ, ನಾಯಕಿ ಹಾಗೂ ಇತರ ಪಾತ್ರದ ಹುಡುಕಾಟ ಇನ್ನಷ್ಟೇ ನಡೆಯಬೇಕಿದೆ. ಕನ್ನಡದ ಕಲಾವಿದರಿಗೆ ಮೊದಲ ಆದ್ಯತೆ ಇರಲಿದೆ. ಸಿನಿಮಾದಲ್ಲಿ ನಟಿಸಲು ಹೊಸ ಕಲಾವಿದರ ಹುಡುಕಾಟ ನಡೆಯುತ್ತಿದೆ ಎಂದರು. ಕರಾವಳಿ ಹಾಗೂ ಇತರೆ ಭಾಗದ ಕಲಾವಿದರು ಕೂಡ ಇರಲಿದ್ದಾರೆ ಎಂದು ರಿಷಬ್ ಈ ಹಿಂದೆ ಹೇಳಿದ್ದರು.
ಸಿನಿಮಾದ ನಾಯಕಿ ಯಾರೆನ್ನುವ ಬಗ್ಗೆ ಕುತೂಹಲ ಹೆಚ್ಚಾಗಿದೆ. ದಕ್ಷಿಣದ ಖ್ಯಾತ ನಟಿಯರ ಹೆಸರು ಸಿನಿಮಾದ ನಾಯಕಿಯರ ಪಟ್ಟಿಯಲ್ಲಿ ಕೇಳಿ ಬಂದಿದೆ. ಇದೀಗ ಮತ್ತೊಬ್ಬರ ಹೆಸರು ಕೇಳಿ ಬಂದಿದೆ.
ಈಗಾಗಲೇ ʼಸಪ್ತ ಸಾಗರದಾಚೆ ಎಲ್ಲೋʼ ಮೂಲಕ ಗಮನ ಸೆಳೆದಿರುವ ರುಕ್ಮಿಣಿ ವಸಂತ್ ʼಕಾಂತಾರ-1ʼ ಸಿನಿಮಾಕ್ಕೆ ನಾಯಕಿ ಆಗಿ ಆಯ್ಕೆ ಆಗಲಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ.
ಮೂಲಗಳ ಪ್ರಕಾರ ಹೊಂಬಾಳೆ ಫಿಲ್ಮ್ಸ್ ಸಾಯಿ ಪಲ್ಲವಿ, ಆಲಿಯಾ ಭಟ್, ಸಪ್ತಮಿಗೌಡ, ರುಕ್ಮಿಣಿ ವಸಂತ್ ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡಲಿದೆ ಎಂದು ತಿಳಿದು ಬಂದಿದೆ. ಈ ಪೈಕಿ ರುಕ್ಮಿಣಿ ಅವರ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತಿದೆ.
ಆದರೆ ಚಿತ್ರತಂಡ ಈ ಬಗ್ಗೆ ಇನ್ನಷ್ಟೇ ಮಾಹಿತಿಯನ್ನು ನೀಡಬೇಕಿದೆ. ತನ್ನ ನಟನೆ ಮೂಲಕ ಮೋಡಿ ಮಾಡಿರುವ ರುಕ್ಮಿಣಿ ವಸಂತ್ ಇತ್ತೀಚೆಗೆ ಕಾಲಿವುಡ್ ನಟ ಶಿವಕಾರ್ತಿಕೇಯನ್ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಇದಲ್ಲದೇ ಶ್ರೀಮುರಳಿ ಅವರ ʼಬಘೀರʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.