ನರೇಂದ್ರ ಮೋದಿ ಕುರಿತು ರೂಪಾ ಅಯ್ಯರ್ ಸಿನಿಮಾ
Team Udayavani, Mar 7, 2018, 11:09 AM IST
ನಿರ್ದೇಶಕಿ, ಅಂಕಣಗಾರ್ತಿ ರೂಪಾ ಅಯ್ಯರ್ ಈಗ ಹೊಸ ಪ್ರಯತ್ನವೊಂದಕ್ಕೆ ಕೈ ಹಾಕಿದ್ದಾರೆ. ಅದು ಸಿನಿಮಾ ಕ್ಷೇತ್ರದಲ್ಲೇ. ಈಗಾಗಲೇ “ಮುಖಪುಟ’, “ಚಂದ್ರ’ ಹಾಗೂ “ಕಲರ್’ ನಂತಹ ವಿಭಿನ್ನ ಕಥಾಹಂದರ ಸಿನಿಮಾ ನಿರ್ದೇಶಿಸಿದ್ದ ರೂಪಾ ಅಯ್ಯರ್ ಈಗ ಹೊಸ ಸಿನಿಮಾವೊಂದನ್ನು ಮಾಡಲು ರೆಡಿಯಾಗಿದ್ದಾರೆ. ಅದು ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಎಂಬುದು ವಿಶೇಷ.
ಹೌದು, ರೂಪಾ ಅಯ್ಯರ್ “ನಮೋ’ ಎಂಬ ಹೆಸರಿನಲ್ಲಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಅಂತಿಮವಾಗಿದ್ದು, ಸದ್ಯದಲ್ಲೇ ಸಿನಿಮಾ ಶುರುವಾಗಲಿದೆ. “ನಮೋ’ ಎಂದ ಮೇಲೆ ಇದು ನರೇಂದ್ರ ಮೋದಿಯವರ ಕುರಿತಾದ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ನರೇಂದ್ರ ಮೋದಿಯವರ ಜೀವನ ಚರಿತ್ರೆಯನ್ನಾಧರಿಸಿ ರೂಪಾ ಅಯ್ಯರ್ ಈ ಸಿನಿಮಾ ಮಾಡುತ್ತಿದ್ದಾರೆ.
ಚಿತ್ರಕ್ಕಾಗಿ ನರೇಂದ್ರ ಮೋದಿಯವರ ಜೀವನದ ಕುರಿತಾದ ಅಂಶಗಳನ್ನು ಸಂಶೋಧಿಸಿ ಸ್ಕ್ರಿಪ್ಟ್ ಸಿದ್ಧಪಡಿಸಿದ್ದಾರೆ. ಈ ಚಿತ್ರ ಕೇವಲ ಕನ್ನಡವಷ್ಟೇ ಅಲ್ಲದೇ, ಹಿಂದಿಯಲ್ಲೂ ಮೂಡಿಬರುತ್ತಿದೆ. ತಮ್ಮ ಹೊಸ ಸಿನಿಮಾದ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ರೂಪಾ ಅಯ್ಯರ್, “ಒಬ್ಬ ನಾಯಕರಾಗಿ ನರೇಂದ್ರ ಮೋದಿಯವರು ಯುವ ಜನತೆಗೆ ಪ್ರೇರಣೆಯಾದ ರೀತಿ ನನಗೆ ತುಂಬಾ ಇಷ್ಟವಾಯಿತು.
ಹಾಗಾಗಿ, “ನಮೋ’ ಸಿನಿಮಾ ಮಾಡಲು ನಿರ್ಧರಿಸಿದ. ವರ್ಷದ ಹಿಂದೆ ಸ್ಕ್ರಿಪ್ಟ್ ಸಿದ್ಧಪಡಿಸಿದ್ದೆ. ಈಗ ಸಿನಿಮಾವಾಗುತ್ತಿದೆ. ಈ ಚಿತ್ರಕ್ಕೊಂದು ಆಧ್ಯಾತ್ಮಿಕ ಹಿನ್ನೆಲೆಯೂ ಇರಲಿದೆ. ಅಮೆರಿಕಾದಲ್ಲಿರುವ ಸ್ನೇಹಿತೆಯೊಬ್ಬರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ’ ಎಂದು ತಮ್ಮ ಚಿತ್ರದ ಬಗ್ಗೆ ಮಾತನಾಡುತ್ತಾರೆ ರೂಪಾ ಅಯ್ಯರ್. ಚಿತ್ರದ ಕಲಾವಿದರ ಸೇರಿದಂತೆ ಇತರ ವಿಭಾಗದ ಆಯ್ಕೆ ಪ್ರಕ್ರಿಯೆ ಇನ್ನಷ್ಟೇ ನಡೆಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಕಾರು-ಮೊಪೆಡ್ ಪರಸ್ಪರ ಢಿಕ್ಕಿ: ಗಾಯ
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.