‘ರೂಪಾಯಿ’ಯಲ್ಲಿ ಖಾರಾಬಾತ್ ರುಚಿ: ಫೆಬ್ರವರಿ 10ರಂದು ತೆರೆಗೆ
Team Udayavani, Jan 29, 2023, 2:43 PM IST
“ವಿವಿಧ್ ಸಿನಿಮಾಸ್ ‘ ಮೂಲಕ ನಿರ್ಮಾಣವಾಗಿರುವ “ರೂಪಾಯಿ’ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಖಾರಾಬಾತ್ ಸಾಮಾನ್ಯವಾಗಿ ಎಲ್ಲರಿಗೂ ಪ್ರಿಯವಾಗುವ ಖಾದ್ಯ. ಈ ಖಾರಾಬಾತ್ ಅನ್ನು ಕೇಂದ್ರವಾಗಿಟ್ಟುಕೊಂಡೆ ವಿಜಯ್ ಜಗದಾಲ್ ರೂಪಾಯಿ ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದಾರೆ. ಖ್ಯಾತ ಗಾಯಕಿ ಸುಪ್ರಿಯಾ ರಾಮ್ ಈ ಹಾಡಿಗೆ ಧ್ವನಿಯಾಗಿದ್ದು, ಆನಂದ್ ರಾಜ್ ವಿಕ್ರಮ್ ಸಂಗೀತ ನೀಡಿದ್ದಾರೆ.
ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ವಿಜಯ್ ಜಗದಾಲ್ ಈ ಚಿತ್ರ ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿದ್ದಾರೆ.
ಕೃಷಿ ತಾಪಂಡ, ಚಂದನ ರಾಘವೇಂದ್ರ, ಮೈತ್ರಿ ಜಗದೀಶ್, ರಾಮ್ ಚಂದನ್, ಪ್ರಮೋದ್ ಶೆಟ್ಟಿ, ಅನಿಲ್ ಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಮೋಷನ್ ಪೋಸ್ಟರ್ ಡಾಲಿ ಧನಂಜಯ ಬಿಡುಗಡೆ ಮಾಡಿದ್ದರು. ರೂಪಾಯಿ ಮಹತ್ವ ಸಾರುವ ಈ ಚಿತ್ರದಲ್ಲಿ, ಕಾಮಿಡಿ, ಸೆಂಟಿಮೆಂಟ್ ಹೀಗೆ ಎಲ್ಲಾ ಅಂಶಗಳು ಒಳಗೊಂಡಿದೆ. ಚಿತ್ರದ ಟ್ರೇಲರ್ ಫೆಬ್ರವರಿ 1 ರಂದು ರಿಲೀಸ್ ಆಗಲಿದೆ. ಕುತೂಹಲ ಹುಟ್ಟಿಸಿರುವ ಈ ಚಿತ್ರ ಫೆಬ್ರವರಿ 10ರಂದು ತೆರೆಗೆ ಬರಲಿದೆ.
“ವಿವಿಧ್ ಸಿನಿಮಾಸ್’ ಲಾಂಛನದಲ್ಲಿ ಮಂಜುನಾಥ್ ಎಂ, ಹರೀಶ್ ಬಿ.ಕೆ ಮತ್ತು ವಿನೋದ್ ಎನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆರ್.ಡಿ. ನಾಗಾರ್ಜುನ ಛಾಯಾಗ್ರಹಣ, ಹಾಗೂ ಶಿವರಾಜ್ ಮೇಹು ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸುನಿವಿನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.