‘ರೂಪಾಯಿ’ ನಂಬಿದ ಹೊಸಬರು
Team Udayavani, Sep 25, 2022, 5:07 PM IST
ವಿಜಯ್ ಜಗದಾಲ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ರೂಪಾಯಿ ಚಿತ್ರದ “ಕರೆಯದೆ ಹಾಡು’ ಇತ್ತೀಚೆಗೆ ಬಿಡುಗಡೆಯಾಗಿದೆ. ಉತ್ಸವ್ ಗೊನ್ವಾರ್ ಸಾಹಿತ್ಯ, ಆನಂದ್ ರಾಜ ವಿಕ್ರಮ್ ಸಂಗೀತ, ಅನನ್ಯ ಭಟ್ ಕಂಠ ಸಿರಿಯಲ್ಲಿ ಮೂಡಿ ಬಂದಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಸಂಸ್ಥೆಯ ಆನಂದ್ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು.
“ಮೂಲತಃ ರಂಗಭೂಮಿಯವನಾದ ನಾನು ನಟನಾಗಬೇಕೆಂಬ ಕನಸು ಹೊತ್ತು ಬಂದವನು. ನಿರ್ಮಾಪಕರಿಗೆ ನನ್ನ ಕನಸನ್ನು ತಿಳಿಸುವ ಸಲುವಾಗಿ ಮೂರುಲಕ್ಷ ರೂಪಾಯಿ ವೆಚ್ಚದಲ್ಲಿ ಒಂದು ಪ್ರಮೋಷನಲ್ ವಿಡಿಯೋ ಮಾಡಿ ತೋರಿಸಿದೆ. ಈ ವಿಡಿಯೋ ಇಷ್ಟಪಟ್ಟ ಮಂಜುನಾಥ್ ಹಾಗೂ ಹರೀಶ್ ಹಣಹೂಡಲು ಮುಂದಾದರು. ಆನಂತರ ಚಿತ್ರ ಆರಂಭವಾಯಿತು. ಹೆಸರೇ ಹೇಳುವಂತೆ ಹಣದ ಮಹತ್ವ ಸಾರುವ ಈ ಚಿತ್ರದಲ್ಲಿ, ಕಾಮಿಡಿ, ಸೆಂಟಿಮೆಂಟ್ ಎಲ್ಲವೂ ಇದೆ. ಐದು ಪ್ರಮುಖ ಪಾತ್ರಗಳ ಸುತ್ತ ಈ ಕಥೆ ಸಾಗುತ್ತದೆ. ನಾನು, ಕೃಷಿ ತಾಪಂಡ, ಯಶ್ವಿಕ್, ಚಂದನ ರಾಘವೇಂದ್ರ ಹಾಗೂ ರಾಮ ಚಂದನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದೇವೆ. ನಾನೇ ನಿರ್ದೇಶನ ಮಾಡಿದ್ದೀನಿ. ಇಂದು ಹಾಡು ಬಿಡುಗಡೆಯಾಗಿದೆ. ನವೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ. ಉತ್ತಮ ಚಿತ್ರ ಮಾಡಿದ್ದೀವಿ ಎಂಬ ಭರವಸೆಯಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ನಾಯಕ ಕಂ ನಿರ್ದೇಶಕ ವಿಜಯ್ ಜಗದಾಲ್.
ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಿರ್ದೇಶಕರಿಗೆ ಧನ್ಯವಾದ ಎಂದರು ಕೃಷಿ ತಾಪಂಡ. ಪ್ರಮುಖ ಪಾತ್ರಧಾರಿಗಳಾದ ಯಶ್ವಿಕ್, ರಾಮ್ ಚಂದನ್ ಹಾಗೂ ಚಂದನ ರಾಘವೇಂದ್ರ ಸಹ ತಮ್ಮ ಪಾತ್ರದ ಕುರಿತ ಮಾಹಿತಿ ಹಂಚಿಕೊಂಡರು.
ನಿರ್ಮಾಪಕ ಮಂಜುನಾಥ್, ಸಂಗೀತ ನಿರ್ದೇಶಕ ಆನಂದ್ ರಾಜ್ ವಿಕ್ರಮ್, ಛಾಯಾಗ್ರಹಕ ಆರ್.ಡಿ ನಾಗಾರ್ಜುನ ಹಾಗೂ ಸಂಕಲನಕಾರ ಶಿವರಾಜ್ ಮೇಹು ಮಾಹಿತಿ ನೀಡಿದರು. ಸಹ ನಿರ್ಮಾಪಕರಾದ ಯಶವಂತ ಶೆಟ್ಟಿ, ಗಿರೀಶ್ ಹಾಗೂ ಕಾರ್ಯಕಾರಿ ನಿರ್ಮಾಪಕ ಸುನಿದಿನಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.