ಬಿಡುಗಡೆಗೆ ಸಿದ್ದವಾದ ‘ಪಂಪ’: ಆಗಸ್ಟ್ ನಲ್ಲಿ ತೆರೆಗೆ
Team Udayavani, Jul 18, 2022, 2:00 PM IST
ಕನ್ನಡ ಸಾಹಿತ್ಯ ಮತ್ತು ಚರಿತ್ರೆಯಲ್ಲಿ ಆದಿಕವಿ “ಪಂಪ’ ಎಂಬ ಹೆಸರನ್ನು ಎಲ್ಲರೂ ಕೇಳಿರುತ್ತೀರಿ. ಈಗ ಇದೇ “ಪಂಪ’ ಎಂಬ ಹೆಸರಿನಲ್ಲೇ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿದೆ. ಅಂದಹಾಗೆ, ಈ ಸಿನಿಮಾದ ಹೆಸರು “ಪಂಪ’ ಅಂತಿದ್ದರೂ, ಆದಿಕವಿ ಪಂಪನಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ ಸಿನಿಮಾದ ಕಥೆಯಲ್ಲಿ ಕನ್ನಡಕ್ಕೆ ಸಂಬಂಧಿಸಿದ ವಿಷಯಗಳಿರುವುದರಿಂದ ಮತ್ತು ಸಿನಿಮಾದ ಕಥೆಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಚಿತ್ರತಂಡ, ತಮ್ಮ ಸಿನಿಮಾಕ್ಕೆ “ಪಂಪ’ ಅಂಥ ಟೈಟಲ್ ಇಟ್ಟುಕೊಂಡಿದೆ.
“ಕೀ (ಕೆ.ಇ.ಇ) ಕ್ರಿಯೇಷನ್ಸ್’ ಬ್ಯಾನರಿನಲ್ಲಿ ವಿ. ಲಕ್ಷ್ಮೀಕಾಂತ್ (ಕಾಲವಿ) ನಿರ್ಮಾಣದಲ್ಲಿ ಮೂಡಿಬಂದಿರುವ “ಪಂಪ’ ಸಿನಿಮಾಕ್ಕೆ ಹಿರಿಯ ನಿರ್ದೇಶಕ ಎಸ್. ಮಹೇಂದರ್ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಹಂಸಲೇಖ ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿದ್ದಾರೆ. ಸದ್ಯ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿರುವ “ಪಂಪ’ ಬಿಡುಗಡೆಯ ಹೊಸ್ತಿಲಿನಲ್ಲಿ ಬಂದು ನಿಂತಿದೆ. ಇತ್ತೀಚೆಗಷ್ಟೇ “ಪಂಪ’ನ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾತನಾಡಿತು.
ಮೊದಲಿಗೆ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಎಸ್. ಮಹೇಂದರ್, “ಇದೊಂದು ಸಸ್ಪೆನ್ಸ್, ಕ್ರೈಂ-ಥ್ರಿಲ್ಲರ್ ಶೈಲಿಯ ಕನ್ನಡ ಸಿನಿಮಾ. “ಪಂಪ’ ಎನ್ನುವುದು ಸಿನಿಮಾದಲ್ಲಿ ಪಂಚಳ್ಳಿ ಪರಶಿವಮೂರ್ತಿ ಎನ್ನುವ ಕನ್ನಡ ಉಪನ್ಯಾಸಕನ ಹೆಸರಿನ ಸಂಕ್ಷಿಪ್ತ ರೂಪ. ಆ ಉಪನ್ಯಾಸಕನ ಸುತ್ತ ಕನ್ನಡ ವಿಷಯವನ್ನು ಇಟ್ಟುಕೊಂಡು ಈ ಸಿನಿಮಾದ ಕಥೆ ಸಾಗುತ್ತದೆ. ನನ್ನ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಕನ್ನಡದ ವಿಷಯವನ್ನು ಇಟ್ಟುಕೊಂಡು ಸಸ್ಪೆನ್ಸ್, ಕ್ರೈಂ-ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ನಿರ್ದೇಶಿಸಿದ್ದೇನೆ’ ಎಂದರು.
ಇದನ್ನೂ ಓದಿ:ಮೊದಲ ಏಕದಿನ ಶತಕದಲ್ಲೇ ಹೊಸ ದಾಖಲೆ ಬರೆದ ರಿಷಭ್ ಪಂತ್
ನಿರ್ಮಾಪಕ ವಿ. ಲಕ್ಷ್ಮೀಕಾಂತ್ (ಕಾಲವಿ), ಸಂಗೀತ ನಿರ್ದೇಶಕ ಹಂಸಲೇಖ “ಪಂಪ’ ಸಿನಿಮಾ ನಿರ್ಮಾಣವಾದ ಹಿಂದಿನ ಕಥೆಯನ್ನು ಮೆಲುಕು ಹಾಕಿದರು.
“ಪಂಪ’ ಸಿನಿಮಾದಲ್ಲಿ ಅಭಿನಯಿಸಿರುವ ನಟ ಕೀರ್ತಿ ಭಾನು, ಸಂಗೀತಾ ಶೃಂಗೇರಿ, ಆದಿತ್ಯ ಶೆಟ್ಟಿ, ರವಿ ಭಟ್, ಕೃಷ್ಣಾ ಭಟ್ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ಇನ್ನುಳಿದಂತೆ ರಾಘವ ನಾಯಕ್, ಅರವಿಂದ್, ಭಾವನಾ ಭಟ್, ರೇಣುಕಾ, ಶ್ರೀನಿವಾಸ್ ಪ್ರಭು, ಪೃಥ್ವಿರಾಜ್, ಮಹಾದೇವ ಹೆಜ್ಜಾಜಿ, ಮುಂತಾದವರು “ಪಂಪ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ರಮೇಶ ಬಾಬು ಛಾಯಾಗ್ರಹಣ, ಮೋಹನ್ ಕಾಮಾಕ್ಷಿ ಸಂಕಲನವಿದೆ.
ಸದ್ಯ ನಿಧಾನವಾಗಿ “ಪಂಪ’ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಆಗಸ್ಟ್ ವೇಳೆಗೆ “ಪಂಪ’ನನ್ನು ಥಿಯೇಟರ್‌ಗೆ ತರುವ ಯೋಚನೆಯಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.