ಚೈ-ಸ್ಯಾಮ್ ದಾಂಪತ್ಯ ಮುರಿದು ಬೀಳಲು ಕಾರಣವಾಯ್ತೇ ‘ದಿ ಫ್ಯಾಮಿಲಿ ಮ್ಯಾನ್ 2’ ?
Team Udayavani, Oct 2, 2021, 6:09 PM IST
ಹೈದರಾಬಾದ್ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಇಂದು ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹೇಳಿದ್ದಾರೆ. ಪರಸ್ಪರ ಒಪ್ಪಿಕೊಂಡೇ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ. ಈ ತಾರಾ ಜೋಡಿ ಡಿವೋರ್ಸ್ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡಿತ್ತಾದರೂ, ವಿಚ್ಛೇದನಕ್ಕೆ ಕಾರಣ ಏನು ಎಂಬುದು ಮಾತ್ರ ಸದ್ಯಕ್ಕೆ ರಹಸ್ಯವಾಗಿ ಉಳಿದಿದೆ.
ತೆಲುಗು ಚಿತ್ರರಂಗದಲ್ಲಿ ಮೋಸ್ಟ್ ಕ್ಯೂಟ್ ಕಪಲ್ ಎಂದು ಗುರುತಿಸಿಕೊಂಡಿದ್ದ ಚೈ-ಸ್ಯಾಮ್ ದಾಂಪತ್ಯ ಮುರಿದು ಬಿದ್ದಿರುವುದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈ ಜೋಡಿ ವಿಚ್ಛೇದನ ಪಡೆಯುತ್ತಿರುವುದಕ್ಕೆ ಕಾರಣ ಏನು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿದೆ.
ಚೈ-ಸ್ಯಾಮ್ ದಾಂಪತ್ಯಕ್ಕೆ ಕಲ್ಲು ಹಾಕಿತಾ ಫ್ಯಾಮಿಲಿ ಮ್ಯಾನ್ ?
ನಾಗಚೈತನ್ಯ ಹಾಗೂ ಸಮಂತಾ ದಾಂಪತ್ಯದಲ್ಲಿ ಹುಳಿ ಹಿಂಡಿದ್ದು ದಿ ಫ್ಯಾಮಿಲಿ ಮ್ಯಾನ್ 2 ವೆಬ್ ಸೀರಿಸ್ ಎನ್ನುವ ಮಾತು ಇದೀಗ ಕೇಳಿ ಬರುತ್ತಿದೆ. ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್ ಸೀರಿಸ್ನಲ್ಲಿ ಕಾಣಿಸಿಕೊಂಡಿದ್ದ ಸಮಂತಾ, ಬೋಲ್ಡ್ ದೃಶ್ಯಗಳಲ್ಲಿ ನಟಿಸಿದ್ದರು. ಅನೇಕ ಇಂಟಿಮೇಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಕೆಲವು ದೃಶ್ಯಗಳು ಎಷ್ಟು ಮಾದಕವಾಗಿದ್ದವೆಂದರೆ ಸ್ವತಃ ನಿರ್ದೇಶಕರು ಈ ದೃಶ್ಯಗಳಿಗೆ ಕತ್ತರಿ ಹಾಕಿದ್ದರು. ಈ ವಿಚಾರವೇ ವಿಚ್ಛೇದನಕ್ಕೆ ಕಾರಣವಾಯ್ತು ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.
ಸಮಂತಾ ವೃತ್ತಿ ಜೀವನದ ದೃಷ್ಟಿಯಲ್ಲಿ ‘ದಿ ಫ್ಯಾಮಿಲಿ ಮ್ಯಾನ್ 2’ ಬಹಳ ಮಹತ್ವ ಪಡೆದುಕೊಂಡಿದೆ. ಈ ಕಾರಣಕ್ಕೆ ಅವರು ವೆಬ್ ಸೀರಿಸ್ ಒಪ್ಪಿಕೊಂಡಿದ್ದರು. ಇದಕ್ಕೆ ಕುಟುಂಬದವರ ವಿರೋಧವಿದ್ದರೂ ಅವರು ತಲೆಕೆಡಿಸಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ವಿಚಾರವೇ ಈಗ ಡಿವೋರ್ಸ್ವರೆಗೆ ತಂದು ನಿಲ್ಲಿಸಿತು ಎನ್ನುತ್ತಿವೆ ಮೂಲಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.