Kannada Cinema; ರಿಲೀಸ್ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..
Team Udayavani, May 20, 2024, 4:33 PM IST
ಸಂಭವಾಮಿ ಯುಗೇ ಯುಗೇ.. ಇದು ಶ್ರೀಕೃಷ್ಣ ಭಗವದ್ಗೀತೆ ಯಲ್ಲಿ ಹೇಳಿದ ಮಾತು. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ. ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ ಲಾಂಛನ ದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭವಾಮಿ ಯುಗೇ ಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಶನ್ ಪೋಸ್ಟರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.
ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದ್ದೇ. ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆ್ಯಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.
ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.
ಸಂಭವಾಮಿ ಯುಗೇಯಗೇ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖೀ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿದೆ.
ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರ ಗೌಡ ಪ್ರಮುಖ ಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಲರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.