Samyuktha hegde; ತೆರೆಗೆ ಬರಲು ಸಜ್ಜಾದ ಕ್ರೈಂ- ಥ್ರಿಲ್ಲರ್ ಕ್ರೀಂ

Team Udayavani, Feb 19, 2024, 3:33 PM IST

ತೆರೆಗೆ ಬರಲು ಸಜ್ಜಾದ ಕ್ರೈಂ- ಥ್ರಿಲ್ಲರ್ ಕ್ರೀಂ

“ಕಿರಿಕ್‌ ಪಾರ್ಟಿ’ ಖ್ಯಾತಿಯ ನಟಿ ಸಂಯುಕ್ತಾ ಹೆಗಡೆ ನಾಯಕಿಯಾಗಿ ಅಭಿನಯಿಸಿರುವ ಮಹಿಳಾ ಪ್ರಧಾನ ಕಥಾಹಂದರದ “ಕ್ರೀಂ’ ಸಿನಿಮಾ ತೆರೆಗೆ ಬರೋದಕ್ಕೆ ತಯಾರಾಗಿದೆ. ಇದೇ ಮಾ. 1 ರಂದು “ಕ್ರೀಂ’ ಸಿನಿಮಾ ತೆರೆಗೆ ಬರುತ್ತಿದ್ದು, ಸದ್ಯ ಭರದಿಂದ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೀಗ “ಕ್ರೀಂ’ ಸಿನಿಮಾದ ಟ್ರೇಲರ್‌ ಅನ್ನು ಬಿಡುಗಡೆ ಮಾಡಿದೆ.

ಡಿ. ಕೆ. ದೇವೇಂದ್ರ ಬಂಡವಾಳ ಹೂಡಿ ನಿರ್ಮಿಸಿರುವ “ಕ್ರೀಂ’ ಸಿನಿಮಾವನ್ನು ಅಭಿಷೇಕ್‌ ಬಸಂತ್‌ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ “ಕ್ರೀಂ’ ಸಿನಿಮಾಕ್ಕೆ ಕಥೆ, ಚಿತ್ರಕಥೆ,  ಸಂಭಾಷಣೆಯನ್ನು ಬರೆದಿರುವ ಮತ್ತು ಸಿನಿಮಾದ ಪಾತ್ರ ವೊಂದರಲ್ಲೂ ಕಾಣಿಸಿಕೊಂಡಿರುವ ಲೇಖಕ ಅಗ್ನಿ ಶ್ರೀಧರ್‌ ಸಿನಿಮಾದ ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ಅಗ್ನಿ ಶ್ರೀಧರ್‌, “ನನಗೆ ಬರವಣಿಗೆಯಲ್ಲಿ ಹೆಚ್ಚು ಆಸಕ್ತಿ. ನಟನೆಯಲ್ಲಿ ನನಗೆ ಆಸಕ್ತಿ ಇರಲಿಲ್ಲ. ನಿರ್ಮಾಪಕ ದೇವೇಂದ್ರ ಈ ಪಾತ್ರ ಮಾಡಲು ನನ್ನನ್ನು ಒತ್ತಾಯಿಸಿದರು. ಈ ಚಿತ್ರದ ಕಥೆ ಹಣ ಹಾಗೂ ಅಧಿಕಾರಕ್ಕಾಗಿ ನಡೆಯುವ ಹೆಣ್ಣುಮಕ್ಕಳ ಬಲಿಯನ್ನು ಕುರಿತಾದ ಕಥಾಹಂದರ ಹೊಂದಿದೆ. ಈಗಲೂ ಕೂಡ ನಮ್ಮ ಊರು, ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಈ ಕೃತ್ಯ ನಡೆಯುತ್ತಲೇ ಇದೆ. ಇಂತಹ ಸೂಕ್ಷ್ಮ ವಿಚಾರವನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ’ ಎಂದು ಸಿನಿಮಾದ ಕಥೆಯ ಎಳೆಯನ್ನು ಬಿಚ್ಚಿಟ್ಟರು.

“ಸುಮಾರು 5 ವರ್ಷಗಳ ನಂತರ ನಾನು ಅಭಿನಯಿಸಿರುವ ಕನ್ನಡ ಸಿನಿಮಾ ಇದು. ಇಲ್ಲಿಯವರೆಗೂ ಮಾಡಿರದಂಥ ಪಾತ್ರವನ್ನು ಈ ಸಿನಿಮಾದಲ್ಲಿ ಮಾಡಿದ್ದೇನೆ. ಸಿನಿಮಾದಲ್ಲಿ ಆ್ಯಕ್ಷನ್‌ ಕೂಡ ಮಾಡಿದ್ದೇನೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು ನಾಯಕಿ ಸಂಯುಕ್ತ ಹೆಗಡೆ.

ನಿರ್ದೇಶಕ ಅಭಿಷೇಕ್‌ ಬಸಂತ್‌ ಮಾತನಾಡಿ, “ನನ್ನ ಮೊದಲ ಸಿನಿಮಾದಲ್ಲಿ ವಿಭಿನ್ನ ಕಥಾಹಂದರವನ್ನು ತೆರೆಗೆ ತರಬೇಕು ಎಂಬ ಆಸೆಯಿತ್ತು. ಅಗ್ನಿ ಶ್ರೀಧರ್‌ ಅವರ ಈ ಕಥೆ ಬಹಳ ಇಷ್ಟವಾಯಿತು. ಕೊನೆಗೆ ಅದನ್ನೇ ಆಯ್ಕೆ ಮಾಡಿಕೊಂಡು ಈ ಸಿನಿಮಾ ನಿರ್ದೇಶಿಸಿದ್ದೇನೆ. ಎಲ್ಲರಿಗೂ ಸಿನಿಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ನಿರ್ಮಾಪಕ ದೇವೇಂದ್ರ ಮಾತನಾಡಿದರು

ಟಾಪ್ ನ್ಯೂಸ್

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.