ಇಹಲೋಕದ ಸಂಚಾರ ಮುಗಿಸಿದ ‘ವಿಜಯ್’

Team Udayavani, Jun 14, 2021, 1:26 PM IST

987

ಮನೋಜ್ಞ ಅಭಿನಯದ ಮೂಲಕ ರಾಷ್ಟ್ರ ಪ್ರಶಸ್ತಿ ಮುಡಿಗೇಡಿಸಿಕೊಂಡ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಇಹಲೋಕದ ಸಂಚಾರ ಮುಗಿಸಿ ಬಾರದ ಲೋಕಕ್ಕೆ ತೆರಳಿದ್ದಾರೆ.  ಈ ನಟನ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ರಂಗಭೂಮಿ ಹಿನ್ನೆಲೆಯಿಂದ ಬಂದ ನಟ ಸಂಚಾರಿ ವಿಜಯ್ ‘ನಾನು ಅವನಲ್ಲ ಅವಳು’ ಸಿನಿಮಾದಲ್ಲಿ ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿ ರಾಷ್ಟ್ರ ಪ್ರಶಸ್ತಿ ಪಡೆದರು. ವಿಭಿನ್ನ ಪಾತ್ರಗಳ ಮೂಲಕ ಮನೆ ಮಾತಾಗಿದ್ದ ಸಂಚಾರಿ ವಿಜಯ್ ಚಿತ್ರರಂಗದಲ್ಲಿ ಗಟ್ಟಿಯಾಗಿ ತಳವೂರುವ ಮೊದಲೇ ತಮ್ಮ 38ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ್ದು ಕಡಿಮೆ ಅವಧಿಯಾಗಿದ್ದರೂ ಹೆಸರು ಮಾಡಿದ್ದು ಬೆಟ್ಟದಷ್ಟು. ತಮಗೆ ಸಿಗುವ ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದ ವಿಜಯ್, ತಮ್ಮ ಅಭಿಯನದಿಂದಲೇ ನೋಡುಗರನ್ನು ಮಂತ್ರ-ಮುಗ್ದರನ್ನಾಗಿಸುತ್ತಿದ್ದರು.

ವಿಜಯ್ ಬಹಳ ಕಷ್ಟದಿಂದ ಸಿನಿಮಾರಂಗದಲ್ಲಿ ಮುಂದೆ ಬಂದವರು. ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್ ಚಿಕ್ಕಮಗಳೂರು ಮೂಲದವರು. ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದ ಸಂಚಾರಿ ವಿಜಯ್ ಬಹಳ ವರ್ಷಗಳ ಹಿಂದೆಯೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದರು.

ಸಂಚಾರಿ ನಾಟಕ ತಂಡದಲ್ಲಿ ತೊಡಗಿಸಿಕೊಂಡಿದ್ದ ವಿಜಯ್ ಕುಮಾರ್ ಬಳಿಕ ಸಂಚಾರಿ ವಿಜಯ್ ಎಂದೇ ಹೆಸರಾದರು. ಸಂಚಾರಿ ವಿಜಯ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲೆಂದು ಇಡೀ ಚಿತ್ರರಂಗವೇ ಪ್ರಾರ್ಥನೆ ಮಾಡಿತ್ತು. ಆದರೆ, ದುರಾದೃಷ್ಟವಶಾತ್ ಅವರು ಇಹಲೋಕ ತ್ಯಜಿಸಿದ್ದಾರೆ .

ಸಂಚಾರಿ ವಿಜಯ್ ಮೊದಲಿನಿಂದಲೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡವರು. ಲಾಕ್​ಡೌನ್ ಸಂದರ್ಭದಲ್ಲೂ ಅನೇಕರಿಗೆ ಸಹಾಯಹಸ್ತ ಚಾಚಿದ್ದ ಅವರು ಅಂಗಾಂಗಳನ್ನು ದಾನ ಮಾಡಲು ಅವರ ಸಹೋದರರು ನಿರ್ಧರಿಸಿದ್ದಾರೆ.

ನಾನು ಅವನಲ್ಲ ಅವಳು, ಒಗ್ಗರಣೆ, ಕೃಷ್ಣ ತುಳಸಿ, ಆಟಕ್ಕುಂಟು ಲೆಕ್ಕಕ್ಕಿಕ್ಕ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿಲ್ಲಿಂಗ್ ವೀರಪ್ಪನ್, ಅಲ್ಲಮ, ನಾತಿಚರಾಮಿ ಸೇರಿದಂತೆ ಮುಂತಾದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇತ್ತೀಚೆಗೆ ತೆರೆ ಕಂಡ ಆ್ಯಕ್ಟ್​ 1978 ಸಿನಿಮಾದಲ್ಲಿ ಕಮಾಂಡೋ ಪಾತ್ರ ನಿರ್ವಹಿಸಿದ್ದ ಸಂಚಾರಿ ವಿಜಯ್ ತಮ್ಮ ಎಲ್ಲ ಸಿನಿಮಾಗಳಲ್ಲೂ ವಿಭಿನ್ನವಾದ ಪಾತ್ರಗಳ ಮೂಲಕ ಗಮನ ಸೆಳೆದಿದ್ದರು.

ಶ್ರುತಿ ಹರಿಹರನ್ ಜೊತೆ ಸಂಚಾರಿ ವಿಜಯ್ ಅಭಿನಯಿಸಿದ್ದ ನಾತಿಚರಾಮಿ ಸಿನಿಮಾಗೂ ಅತ್ಯುತ್ತಮ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಬಂದಿತ್ತು. ಈ ಸಿನಿಮಾ ವಿಮರ್ಶಾತ್ಮಕವಾಗಿ ಕನ್ನಡ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ರಾಷ್ಟ್ರ ಪ್ರಶಸ್ತಿ ಬಂದ ಹರಿವು ಸಿನಿಮಾದಲ್ಲೂ ಸಂಚಾರಿ ವಿಜಯ್ ಮುಖ್ಯ ಪಾತ್ರ ನಿರ್ವಹಿಸಿದ್ದರು.

ಕನ್ನಡ ಮಾತ್ರವಲ್ಲದೆ ಹಲವು ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಸಂಚಾರಿ ವಿಜಯ್ ಕೆಲಸ ಮಾಡಿದ್ದಾರೆ. ಸಾಲು ಸಾಲಾಗಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಂಚಾರಿ ವಿಜಯ್​ಗೆ ಇತ್ತೀಚೆಗೆ ಹೆಚ್ಚೆಚ್ಚು ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರತೊಡಗಿದ್ದವು. ಆದರೆ, ಚಿತ್ರರಂಗದಲ್ಲಿ ಇನ್ನೇನು ತಳವೂರುತ್ತಿರುವಾಗಲೇ ಅವರು ನಮ್ಮನ್ನು ಅಗಲಿದ್ದಾರೆ.

ಚಿತ್ರರಂಗಕ್ಕೆ ಕಾಲಿಟ್ಟು ಹತ್ತು ವರ್ಷದಲ್ಲಿ ಕೆಲವೇ ಸಿನಿಮಾಗಳಲ್ಲಿ ಅಭಿನಯಿಸಿದ್ದರೂ ಸಂಚಾರಿ ವಿಜಯ್ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದರು. ಚಿತ್ರರಂಗದಲ್ಲಿ ಹೆಮ್ಮರವಾಗಿ ಬೆಳೆಯಬೇಕೆಂಬ ಅವರ ಕನಸು ಆರಂಭದಲ್ಲೇ ಕಮರಿಹೋಗಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.