ಪ್ರತಿಭಾನ್ವಿತ ನಟ ಉದಯ್ ಹುತ್ತಿನಗದ್ದೆ ಇನ್ನಿಲ್ಲ
Team Udayavani, Jun 3, 2022, 8:27 AM IST
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟರಾಗಿ ಗುರುತಿಸಿಕೊಂಡಿದ್ದ ಉದಯ್ ಹುತ್ತಿನಗದ್ದೆ (61) ಅವರು ರಾಜಾಜಿನಗರದ ತಮ್ಮ ನಿವಾಸದಲ್ಲಿ ಗುರುವಾರ ರಾತ್ರಿ ನಿಧನರಾದರು. ಅವರಿಗೆ ಪತ್ನಿ, ನಟಿ ಲಲಿತಾಂಜಲಿ ಮತ್ತು ಇಬ್ಬರು ಪುತ್ರರು ಇದ್ದಾರೆ.
ಚಿಕ್ಕಮಗಳೂರು ಸಮೀಪದ ಬಸರಿಕಟ್ಟೆ ಸಮೀಪದ ಹುತ್ತಿನಗದ್ದೆಯವರಾದ ಉದಯ್ ಅವರು ವೃತ್ತಿಪರ ಛಾಯಾಗ್ರಾಹಕರಾಗಿದ್ದರು. 1980ರ ದಶಕದ ಕೊನೆಯಲ್ಲಿ ‘ಆರಂಭ’, ‘ಕ್ರಮ’, ‘ಉಂಡೂ ಹೋದ ಕೊಂಡೂ ಹೋದ’, ‘ಶಿವಯೋಗಿ ಅಕ್ಕಮಹಾದೇವಿ’, ‘ಅಮೃತಬಿಂದು’, ‘ಉದ್ಭವ’ ಚಿತ್ರಗಳಲ್ಲಿ ಅಭಿನಯಿಸಿ ಖ್ಯಾತರಾಗಿದ್ದರು.
ಖ್ಯಾತ ನಟರಾದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅನಂತನಾಗ್ ಮುಂತಾದವರ ಜೊತೆಗೆ ಉದಯ್ ತೆರೆ ಹಂಚಿಕೊಂಡಿದ್ದರು. ಆರಂಭ ಚಿತ್ರದ ಮೂಲಕ ನಿರ್ಮಾಪಕರಾಗಿದ್ದರು.
ಇದನ್ನೂ ಓದಿ:ಕುಕ್ಕೆ ಸಮೀಪದ ಅರಣ್ಯ ನಡುವಿನ ಹೆದ್ದಾರಿ ಚಿತ್ರ ಹಂಚಿಕೊಂಡ ಆನಂದ್ ಮಹೀಂದ್ರಾ
ನವರಂಗ್ ವೃತ್ತದ ಬಳಿ ಛಾಯಾಗ್ರಹಣ ಸ್ಟುಡಿಯೋ ಹೊಂದಿದ್ದ ಉದಯ್ ಹುತ್ತಿನಗದ್ದೆ, ಆನಂದರಾವ್ ವೃತ್ತದ ಬಳಿ ಉದಯ್ ಕಲರ್‌ಲ್ಯಾಬ್ ನಡೆಸುತ್ತಿದ್ದರು.
ಇತ್ತೀಚೆಗೆ ಅವರು ನರಸಂಬಂಧಿ ಸಮಸ್ಯೆ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
ಪಾರ್ಥೀವ ಶರೀರವನ್ನು ರಾಜಾಜಿನಗರದ ಅವರ ನಿವಾಸದಲ್ಲಿ ಇರಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಪುತ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.