ಕೋವಿಡ್-19 ವೈರಾಣು ಹರಡದಂತೆ ಬೀದಿಗಳಲ್ಲಿ ರಾಸಾಯನಿಕ ಸಿಂಪಡಿಸಿದ ನಟ ವಿನೋದ್ ರಾಜ್
Team Udayavani, Mar 31, 2020, 1:30 PM IST
ಬೆಂಗಳೂರು: ಕೋವಿಡ್-19 ವೈರಾಣು ಹರಡದಂತೆ ಮುನ್ನೆಚ್ಚರಿಕೆಯಾಗಿ ನಟ ವಿನೋದ್ ರಾಜ್ ಅವರು ಸೋಲದೇವನಹಳ್ಳಿಯಲ್ಲಿ ಗ್ರಾಮದ ರಸ್ತೆ ಹಾಗೂ ಚರಂಡಿ ಬದಿಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ವಿನೋದ್ ರಾಜ್ ಇಂತಹದೊಂದು ಕಾರ್ಯಕ್ಕೆ ಕೈ ಹಾಕಿದ್ದು, ಆ ಮೂಲಕ ಜನರ ಸುರಕ್ಷತೆಗೆ ಮುಂದಾಗಿದ್ದಾರೆ.
ತೋಟದಲ್ಲಿ ಬಳಸುವ ಟ್ರ್ಯಾಕ್ಟರ್ ಹಾಗೂ ಪಂಪ್ ಸಹಾಯದಿಂದ ಕ್ರಿಮಿನಾಶಕ ಸಿಂಪಡಣೆಯನ್ನು ಖುದ್ದು ವಿನೋದ್ ರಾಜ್ ಅವರು ಮಾಡಿದ್ದು, ಮಗನ ಸಾಮಾಜಿಕ ಕಳಕಳಿಗೆ ಹಿರಿಯ ನಟಿ ಡಾ.ಲೀಲಾವತಿ ಅವರು ಕೂಡ ಕೈ ಜೋಡಿಸಿದ್ದಾರೆ.
ಎಲ್ಲೆಡೆ ಕೊರೋನಾ ಕಂಟಕ ಆವರಿಸಿದೆ. ಈಗಾಗಲೇ ಈ ವೈರಾಣು ಹರಡದಂತೆ ಮುನ್ನೆಚರಿಕೆಯಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತ್ತ ನಗರಗಳಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಮೂಲಕ ಸೋಂಕು ಹರಡದಂತೆ ಜನರನ್ನು ನಿಯಂತ್ರಿಸಲಾಗುತ್ತಿದೆ.
ಸರ್ಕಾರ ತೆಗೆದುಕೊಂಡ ಮುನ್ನಚೆರಿಕೆಯ ಕ್ರಮಗಳನ್ನು ಯಾರೂ ಮೀರಬೇಡಿ. ಸರ್ಕಾರದ ಆದೇಶದಂತೆ ಮನೆಯಲ್ಲೇ ಇರಿ. ನಿಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಮಾಸ್ಕ್ ಧರಿಸಿ ಸುರಕ್ಷತೆ ಕಾಪಾಡಿ ಎಂದು ನಟಿ ಲೀಲಾವತಿ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.