Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Team Udayavani, Nov 3, 2024, 12:11 PM IST
ಬೆಂಗಳೂರು: ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ (Director Guruprasad) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ (ನ.3ರಂದು) ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
5-6 ದಿನಗಳ ಹಿಂದೆ ಅಪಾರ್ಟ್ ಮೆಂಟ್ ಗೆ ಬಂದಿದ್ದರು. 3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅವರ ವಾಸವಾಗಿದ್ದ ಅಪಾರ್ಟ್ ಮೆಂಟ್ ನಿಂದ ಕೊಳತೆ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಸಾಲಗಾರರ ಕಿರುಕುಳದಿಂದ ಬೇಸತ್ತು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್‌ನಲ್ಲಿ ಫ್ಯಾನಿಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಅಪಾರ್ಟ್ ಮೆಂಟ್ ನಲ್ಲಿ ಅವರು ಕಳೆದ 8 ತಿಂಗಳಿನಿಂದ ವಾಸವಾಗಿದ್ದರು. ಇತ್ತೀಚೆಗೆ ಅವರು ಎರಡನೇ ಮದುವೆ ಆಗಿದ್ದರು.
ʼಮಠʼ, ʼಎದ್ದೇಳು ಮಂಜುನಾಥʼ, ʼಡೈರೆಕ್ಟರ್ ಸ್ಪೆಷೆಲ್ʼ ʼಎರಡನೇ ಸಲʼ, ʼರಂಗನಾಯಕʼ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದರು. ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.
ಸದ್ಯ ʼಅಡೆಮಾʼ ಸಿನಿಮಾದ ಚಿತ್ರೀಕರಣ ನಡೆಯುತ್ತಿತು.
ಇತ್ತೀಚೆಗೆ ದೂರು ದಾಖಲು.. ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಗುರುಪ್ರಸಾದ್ 2019ರಲ್ಲಿ ಟೋಟಲ್ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು. ತಾವು ತರಬೇತಿ ನೀಡುವ ವಿದ್ಯಾರ್ಥಿಗಳಿಗೆ ಓದಲು ಬೇಕಾದ ನೂರು ಪುಸ್ತಕ ಬೇಕು ರಿಯಾಯಿತಿ ದರದಲ್ಲಿ ಕೊಡಿ ಎಂದು ಕೇಳಿದ್ದರು. 75 ಪುಸ್ತಕಗಳ ಐದು ಸೆಟ್ ಖರೀದಿಸಿದ್ದರಂತೆ. ಒಂದು ಸೆಟ್ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕಿತ್ತಂತೆ. ಪುಸ್ತಕ ಮತ್ತು ಸಿಡಿಗಳ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕರೆ ಮಾಡಿದರೂ ರಿಸೀವ್ ಮಾಡುತ್ತಿಲ್ಲ. ಇದಲ್ಲದೆ ತನ್ನ ಮನೆಯ ವಿಳಾಸ ಕೂಡ ಬದಲಾಯಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.