Sandalwood: ಮಾನ್ವಿತಾ ನಟನೆಯ ‘ಒನ್ ಆ್ಯಂಡ್ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು
Team Udayavani, Jul 1, 2024, 4:51 PM IST
ಒನ್ ಆ್ಯಂಡ್ ಹಾಫ್- ಹೀಗೊಂದು ಸಿನಿಮಾ ಆರಂಭವಾಗಿದೆ. ಚರಣ್ ಈ ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. ಚಿತ್ರದಲ್ಲಿ ನಟಿ ಮಾನ್ವಿತಾ ನಟಿಸಿದ್ದಾರೆ.
“ನನಗೆ ಇದು ಸ್ಪೆಷಲ್ ಸಿನಿಮಾ. ಈ ಸಿನಿಮಾ ಬಂದ ಮೇಲೆ ನನ್ನ ಲೈಫ್ ಗೆ ಹೊಸ ವ್ಯಕ್ತಿ ಬಂದರು. ಸಿನಿಮಾ ತುಂಬಾ ಚೆನ್ನಾಗಿ ಮಾಡಿದ್ದಾರೆ. ಮ್ಯೂಸಿಕ್‌ಗೆ ಕುಳಿತರೆ ಮಣಿ ಅಣ್ಣ ಸೂಪರ್. ಲಿಖೀತಾ ಸಿರಿ ನನ್ನ ಕೋಸ್ಟಾರ್. ನಮ್ಮ 3 ಜನಕ್ಕೂ ಒಳ್ಳೆ ಬಾಂಡಿಂಗ್ ಇತ್ತು. ಶ್ರೇಯಸ್ ಡೈರೆಕ್ಟರ್ ಆಕ್ಟರ್ ಆಗಿ ಒಳ್ಳೆ ಕೆಲಸ ಮಾಡಿದ್ದಾರೆ’ ಎನ್ನುವುದು ಮಾನ್ವಿತಾ ಮಾತು.
ನಿರ್ದೇಶಕ ಕಂ ನಾಯಕ ಶ್ರೇಯಸ್ ಚಿಂಗಾ ಮಾತನಾಡಿ, ಇದು ತಂತ್ರಜ್ಞನರ ಸಿನಿಮಾ. ಪ್ರತಿಯೊಬ್ಬ ತಂತ್ರಜ್ಞರು ಕೂಡ ಫ್ಯಾಮಿಲಿ ತರಹ. ನಾನು ಸಿನಿಮಾವನ್ನು ತೆರೆಗೆ ತರಲು ಬೆಂಬಲಿಸಿದ ಇಡೀ ಚಿತ್ರತಂಡಕ್ಕೆ ಧನ್ಯವಾದ. ಈ ಸಮಯದಲ್ಲಿ ಜನ ಥಿಯೇಟರ್‌ಗೆ ಬರುತ್ತಿಲ್ಲ. ಇದು ತುಂಬಾ ವಿಭಿನ್ನ ಸಿನಿಮಾ. ಬೇರೆ ಭಾಷೆಯಲ್ಲಿ ಮಾಡುವ ಸಾಧ್ಯತೆ ನೂರಷ್ಟಿದೆ’ ಎಂದರು.
ನಿರ್ಮಾಪಕ ಆರ್.ಚರಣ್ ಸುಬ್ಬಯ್ಯ ಮಾತನಾಡಿ, “ನಾನು ಗಾಂಧಿನಗರದ ಹುಡ್ಗ. ಶ್ರೇಯಸ್ ಮಾಡಿದ ಡೆವಿಡ್ ಸಿನಿಮಾ ನೋಡಿ ಇಷ್ಟವಾಯ್ತು. ನನಗೆ ಊಹೆ ಕೂಡ ಮಾಡಲು ಆಗಲಿಲ್ಲ. ಈ ರೀತಿ ಸಿನಿಮಾ ಮಾಡಿದ್ದಾನೆ ಎಂದು. ಯಾವುದಾದರೂ ಕಾನ್ಸೆಪ್ಟ್ ಇದ್ದರೆ ಹೇಳು ಎಂದು ಹೇಳಿದೆ. ಅವನು ಹೇಳಿದ ಕೇಳಿದ ಕಥೆ ನನಗೆ ಇಷ್ಟವಾಯಿತು. ಒಂದೊಳ್ಳೆ ಬ್ಯೂಟಿಫುಲ್ ಸಬ್ಜೆಕ್ಟ್. ಈ ಸಿನಿಮಾವನ್ನು ಥಿಯೇಟರ್‌ಗೆ ಬಂದು ನೋಡಬೇಕು’ ಎಂದರು.
ನಟ ಶ್ರೇಯಸ್ ಚಿಂಗಾ, ಇದೀಗ “ಒನ್ ಯಂಡ್ ಹಾಫ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ನಿರ್ದೇಶನದ ಜೊತೆಗೆ ಹೀರೋ ಆಗಿಯೂ ಅವರು ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡವೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬಿಝಿಯಾಗಿದೆ. “ಒನ್ ಆ್ಯಂಡ್ ಹಾಫ್’ ಕಾಮಿಡಿ ಜಾನರ್ ಸಿನಿಮಾವಾಗಿದ್ದು, ಮನರಂಜನೆ ಪಕ್ಕ ಅನ್ನೋದು ಚಿತ್ರತಂಡದ ಭರವಸೆ.
ಶ್ರೇಯಸ್ ಚಿಂಗಾ, ಮಾನ್ವಿತಾ ಕಾಮತ್ ಜೊತೆಗೆ ಸಾಧು ಕೋಕಿಲಾ, ಅನಿನಾಶ್, ಸುಚೇಂದ್ರ ಪ್ರಸಾದ್, “ಸ್ಪರ್ಶ’ ರೇಖಾ, ಅನಂತು, ಸುಂದರ ಶ್ರೀ, “ಕಾಮಿಡಿ ಕಿಲಾಡಿ’ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.