ಶೃತಿ-ಶರಣ್ ಮನೆ ಮಗಳು ಚಿತ್ರರಂಗಕ್ಕೆ; ʻಧರಣಿʼಯ ನಾಯಕಿ ಕೀರ್ತಿ ಕೃಷ್ಣ!
ಮೂರನೇ ತಲೆಮಾರು ಬಣ್ಣದ ಜಗತ್ತಿಗೆ
Team Udayavani, Jan 27, 2023, 3:16 PM IST
ನಟಿ ಶೃತಿ ಅವರ ಮನೆಯ ಮೂರನೇ ತಲೆಮಾರು ಈಗ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿದೆ.
ಇತ್ತೀಚೆಗೆ ನಟ ಶರಣ್ ಅವರ ಮಗ ಗುರು ಶಿಷ್ಯರು ಚಿತ್ರದಲ್ಲಿ ಪಾತ್ರವೊಂದನ್ನು ನಿಭಾಯಿಸಿದ್ದರು. ಈಗ ಶರಣ್ ಅವರ ಕೊನೆಯ ಸಹೋದರಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ದೊಡ್ಡಮ್ಮ ಶೃತಿ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಕಲಾವಿದೆ. ಮಾವ ಶರಣ್ ಕನ್ನಡ ಚಿತ್ರರಂಗದ ಸ್ಟಾರ್ ನಟ. ಈ ನಡುವೆ ಕೀರ್ತಿ ಕೃಷ್ಣ ಯಾವ ಸಿನಿಮಾದೊಂದಿಗೆ ಚಿತ್ರರಂಗದಲ್ಲಿ ಲಾಂಚ್ ಆಗಬಹುದು ಎನ್ನುವ ಕುತೂಹಲ ಎಲ್ಲರಲ್ಲೂ ಇತ್ತು.
ಚಿತ್ರರಂಗದಲ್ಲಿ ಸಾಕಷ್ಟು ಜನ ಕೀರ್ತಿ ಕೃಷ್ಣ ಅವರನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಲು ತುದಿಗಾಲಲ್ಲಿ ನಿಂತಿದ್ದರು. ಅಂತಿಮವಾಗಿ ಈಗ ಕೀರ್ತಿ ತಮ್ಮ ಮೊದಲ ಸಿನಿಮಾವನ್ನು ಒಪ್ಪಿದ್ದಾರೆ. ಅದು ಧರಣಿ.
ಮನೋಜ್ ನಾಯಕನಾಗಿ ನಟಿಸುತ್ತಿರುವ ʻಧರಣಿʼ ಫಸ್ಟ್ ಲುಕ್ ಪೋಸ್ಟರ್ ಮೂಲಕವೇ ಎಲ್ಲರ ಗಮನ ಸೆಳೆದಿತ್ತು. ಕೋಳಿ ಪಂದ್ಯದ ಜೊತೆಗೆ ಕಾಡುವ ಕಥೆಯೊಂದು ಈ ಚಿತ್ರದಲ್ಲಿದೆ ಅಂತಾ ಚಿತ್ರತಂಡ ಹೇಳಿಕೊಂಡಿತ್ತು. ಈಗ ಕೀರ್ತಿ ಆಯ್ಕೆಯಾಗುವ ಮೂಲಕ ʻಧರಣಿʼಯ ಕುರಿತು ಕ್ಯೂರಿಯಾಸಿಟಿ ಹೆಚ್ಚಾಗಿದೆ.
ಸರಿ ಸುಮಾರು ಹನ್ನೆರಡು ವರ್ಷಗಳ ಹಿಂದೆ ತೆರೆ ಕಂಡಿದ್ದ ರಾಮ್ ಕುಮಾರ್ ಮತ್ತು ಶೃತಿ ಅಭಿನಯದ ʻಶ್ರೀ ನಾಗ ಶಕ್ತಿʼ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಮುಖಕ್ಕೆ ಬಣ್ಣ ಹಚ್ಚಿದ್ದವರು ಕೀರ್ತಿ. ವಿದ್ಯಾಭ್ಯಾಸದ ಕಾರಣಕ್ಕೆ ಚಿತ್ರರಂಗದಿಂದ ದೂರವೇ ಉಳಿದಿದ್ದಿದ್ದರು.
ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ಬಿಬಿಎ ಮುಗಿಸಿರುವ ಕೀರ್ತಿ ಈಗ ಪೂರ್ಣ ಪ್ರಮಾಣದಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಳ್ಳುವ ಮನಸ್ಸು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ಕಥೆ ಸಿಕ್ಕರೆ ಮಾತ್ರ ಒಪ್ಪಬೇಕು ಅಂತಾ ಕಾದಿದ್ದ ಕೀರ್ತಿ ಮತ್ತು ಅವರ ಕುಟುಂಬದವರಿಗೆ ʻಧರಣಿʼಯ ಕತೆ ಅಪಾರವಾಗಿ ಇಷ್ಟವಾಗಿದ್ದರಿಂದ ಈ ಚಿತ್ರದ ಮೂಲಕ ನಾಯಕಿಯಾಗಲು ಒಪ್ಪಿಗೆ ನೀಡಿದ್ದಾರೆ.
ಶೃತಿ ಅವರ ಇಡೀ ಕುಟುಂಬ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದೆ. ತಂದೆ ಕೃಷ್ಣ, ತಾಯಂದಿರಾದ ರಾಧ-ರುಕ್ಮಿಣಿ ರಂಗಭೂಮಿ ಮತ್ತು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕೃಷ್ಣ ಅವರ ತಾಯಿ ಕೂಡಾ ನಟಿಯಾಗಿದ್ದವರು. ನಂತರ ಶೃತಿ, ಶರಣ್ ಕೂಡಾ ಬಣ್ಣದ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಿದವರು. ಈಗ ಮೂರನೇ ತಲೆಮಾರಿನ ಕೀರ್ತಿ ಕೃಷ್ಣ ಕೂಡಾ ಭರವಸೆ ಮೂಡಿಸಿದ್ದಾರೆ.
ಅನಂತು ವರ್ಸಸ್ ನುಸ್ರತ್ ಖ್ಯಾತಿಯ ಸುಧೀರ್ ಶಾನುಭೋಗ್ ನಿರ್ದೇಶನದ ʻಧರಣಿʼ ಚಿತ್ರವನ್ನು ಯಂಗ್ ಥಿಂಕರ್ಸ್ ಫಿಲಂಸ್ ಲಾಂಛನದಲ್ಲಿ ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ಅವರು ನಿರ್ಮಿಸುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ, ಅರುಣ್ ಸುರೇಶ್ ಛಾಯಾಗ್ರಹಣ, ಅರುಣೋದಯ ಕಥೆ, ಶ್ರೀನಿಧಿ ಡಿ ಎಸ್ ಸಂಭಾಷಣೆ ಜೊತೆಗೆ ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವಕುಮಾರ್ ಮಾವಲಿ ಸಾಹಿತ್ಯ, ಟೈಗರ್ ಶಿವು ಸಾಹಸ ಸಂಯೋಜನೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.