![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2021, 1:21 PM IST
ಬೆಂಗಳೂರು: ಇಂದು ಆಚರಿಸಲಾಗುತ್ತಿರುವ ರಾಷ್ಟ್ರೀಯ ಹಿಂದಿ ದಿವಸ್ ವಿರುದ್ಧ ಕನ್ನಡ ಚಿತ್ರರಂಗದ ನಟರು ಹಾಗೂ ನಿರ್ದೇಶಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟ ಡಾಲಿ ಧನಂಜಯ್ ಟ್ವೀಟ್ ಮಾಡಿ, ಎಲ್ಲಾ ಭಾಷೆ ಗೌರವಿಸುತ್ತೇವೆ. ಆದರೆ, ಯಾವುದೇ ಭಾಷೆಯ ಹೇರಿಕೆ ಸಲ್ಲದು. ಹಿಂದಿಯನ್ನಾಗಲೀ, ಇಂಗ್ಲಿಷ್ ನ್ನಾಗಲೀ ಎಲ್ಲರೂ ಕಲಿಯಬೇಕು ಅನ್ನುವಂಥ ಅವಿವೇಕ ಮತ್ತೊಂದಿಲ್ಲ. ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದು ದಬ್ಬಾಳಿಕೆಯ ಸೂಚನೆಯಲ್ಲದೆ ಮತ್ತೇನು? ಎಂದು ಧನಂಜಯ್ ಪ್ರಶ್ನಿಸಿದ್ದಾರೆ.
#StopHindiImposition pic.twitter.com/DOvgsdtUgs
— Dhananjaya (@Dhananjayaka) September 14, 2021
ಇನ್ನು ಹಿಂದಿ ಹೇರಿಕೆಯನ್ನು ವಿರೋಧಿಸಿರುವ ನಿರ್ದೇಶಕ ಸಿಂಪಲ್ ಸುನಿ, ಭಾರತದ ವೈಶಿಷ್ಟ್ಯತೆಯೇ “ವಿವಿಧತೆಯಲ್ಲಿ ಏಕತೆ” ಹಲವಾರು ವೇಶ,,ಭಾಷೆ, ಭಕ್ಷ್ಯಭೋಜನ, ಆಟನೋಟ, ಸಂಸ್ಕೃತಿ, ಸಂಪ್ರದಾಯ ಇದ್ದರೂ ಒಂದಾಗಿರುವ ಹೆಗ್ಗಳಿಕೆ ನಮ್ಮದು. ಹೀಗಿರುವಾಗ ಒಂದೇ ಭಾಷೆಯನ್ನು ಹೇರುವುದು ತಪ್ಪು ಎನ್ನುವುದು ನನ್ನ ಅಭಿಪ್ರಾಯ. ಅವರವರ ರಾಜ್ಯದಲ್ಲಿ ಆ ಮಣ್ಣಿನ ಮಾತೃಭಾಷೆಗೆ ಪ್ರಥಮ ಸ್ಥಾನವಿರಬೇಕು ಎಂದು ಸುನಿ ಆಗ್ರಹಿಸಿದ್ದಾರೆ.
ಭಾರತದ ವೈಶಿಷ್ಟ್ಯತೆಯೇ “ವಿವಿಧತೆಯಲ್ಲಿ ಏಕತೆ” ಹಲವಾರು ವೇಶ,,ಭಾಷೆ,,ಭಕ್ಷ್ಯಭೋಜನ,, ಆಟನೋಟ,, ಸಂಸ್ಕೃತಿ,, ಸಂಪ್ರದಾಯ ಇದ್ದರೂ ಒಂದಾಗಿರುವ ಹೆಗ್ಗಳಿಕೆ ನಮ್ಮದು..
ಹೀಗಿರುವಾಗ ಒಂದೇ ಭಾಷೆಯನ್ನು ಹೇರುವುದು ತಪ್ಪು ಅಭಿಪ್ರಾಯ ..
ಅವರವರ ರಾಜ್ಯದಲ್ಲಿ ಆ ಮಣ್ಣಿನ ಮಾತೃಭಾಷೆಗೆ ಪ್ರಥಮಸ್ಥಾನವಿರಬೇಕು..#StopHindiImposition— ಸುನಿ/SuNi (@SimpleSuni) September 14, 2021
ಇನ್ನು ಹಿಂದಿ ದಿವಸ್ ವಿರುದ್ಧ ಕರ್ನಾಟಕದಲ್ಲಿಂದು ಕರಾಳ ದಿನ ಆಚರಿಸಲಾಗುತ್ತಿದೆ. ನಿನ್ನೆಯಷ್ಟೆ ಮಾಜಿ ಸಿಎಂ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ. ಕುಮಾರ ಸ್ವಾಮಿ ಅವರೂ ಕೂಡ ಹಿಂದಿ ಹೇರಿಕೆ ವಿರುದ್ಧ ಗುಡುಗಿದ್ದರು. ಒತ್ತಾಯದಿಂದ ಯಾವುದೇ ಭಾಷೆ ಹೇರುವುದು ತಪ್ಪು, ಇದರ ಪರಿಣಾಮ ನೀವು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ವತಿಯಿಂದ ಆಚರಿಸುವ ‘ಹಿಂದಿ ದಿವಸ’ ಆಚರಣೆ ವಿರೋಧಿಸಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.#hindidiwas2021 #StopHindiImposition pic.twitter.com/1Xr6ADkqmT
— Janata Dal Secular (@JanataDal_S) September 13, 2021
ಇನ್ನು ಟ್ವಿಟರ್ ನಲ್ಲಿಯೂ ಹಿಂದಿ ಹೇರಿಕೆ ವಿರುದ್ಧ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಸಾಕಷ್ಟು ಜನರ ಬೆಂಭಲ ಕೂಡ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿಂದು ಹಲವು ಕನ್ನಡಪರ ಸಂಘಟನೆಗಳು ಹಿಂದಿ ದಿವಸ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.