Sandalwood; ಮುಂದುವರಿದ ಭಾಗಕ್ಕೆ ಬಿಡುಗಡೆ ಭಾಗ್ಯ: ಸಾಲು ಸಾಲು ಸೀಕ್ವೆಲ್
Team Udayavani, Aug 4, 2023, 10:50 AM IST
ಕನ್ನಡ ಚಿತ್ರರಂಗದಲ್ಲಿ ಈಗ ಪಾರ್ಟ್ 2 ಸಿನಿಮಾಗಳ ಕ್ರೇಜ್ ಜೋರಾಗಿದೆ. ಹಿಟ್ ಆದ ಸಿನಿಮಾಗಳ ಮುಂದುವರೆದ ಭಾಗ ಮಾಡಿ, ಈಗಾಗಲೇ ಅನೇಕ ಸಿನಿಮಾಗಳು ಬಿಡುಗಡೆಯಾಗಿವೆ. ಇನ್ನೊಂದಿಷ್ಟು ಸಿನಿಮಾಗಳು ಬಿಡುಗಡೆಯ ಹಂತಕ್ಕೆ ಬಂದಿವೆ. ಸದ್ಯ ಆ ತರಹ ಪಾರ್ಟ್-2 ಆಗಿ ಮೂರು ಸಿನಿಮಾಗಳು ತೆರೆಗೆ ಬರಲು ಸಿದ್ಧವಾಗಿವೆ.
ಉಪೇಂದ್ರ ನಟನೆಯ “ಬುದ್ಧಿವಂತ-2′, ಕೋಮಲ್ ನಾಯಕರಾಗಿರುವ “ನಮೋ ಭೂತಾತ್ಮ-2′ ಹಾಗೂ ಜಗ್ಗೇಶ್- ಧನಂಜಯ್ ಮುಖ್ಯಭೂಮಿಕೆಯಲ್ಲಿರುವ “ತೋತಾಪುರಿ-2′ ಚಿತ್ರಗಳು ಬಿಡುಗಡೆ ಹಂತಕ್ಕೆ ಬಂದಿವೆ. “ಬುದ್ಧಿವಂತ-2′ ಶೀಘ್ರದಲ್ಲಿ ತೆರೆಕಾಣಲಿದ್ದು, “ನಮೋ ಭೂತಾತ್ಮ-2′ ಇಂದು ತೆರೆಕಾಣುತ್ತಿದೆ. ಇನ್ನು, “ತೋತಾಪುರಿ-2′ ಚಿತ್ರತಂಡ “ಜೈಲರ್’ ಜೊತೆ ಬರುವುದಾಗಿ ಹೇಳಿಕೊಂಡಿದೆ. ಹೀಗೆ ಬಿಡುಗಡೆಗೆ ಅಣಿಯಾಗಿರುವ ಈ ಚಿತ್ರಗಳ ಬಗ್ಗೆ ಒಂದು ರೌಂಡಪ್…
ಅಖಾಡಕ್ಕೆ ಬುದ್ಧಿವಂತ
2008ರಲ್ಲಿ ತೆರೆಕಂಡ “ಬುದ್ಧಿವಂತ’ ಚಿತ್ರ ಉಪೇಂದ್ರ ಅವರಿಗೆ ಒಂದು ಬ್ರೇಕ್ ನೀಡಿದ್ದು ಸುಳ್ಳಲ್ಲ. ಈ ಚಿತ್ರದಲ್ಲಿ ಉಪೇಂದ್ರ ಅವರ ವಿವಿಧ ಅವತಾರಗಳು ಹೈಲೈಟ್ ಆಗಿದ್ದವು. “ಪಂಚಾಮೃತ’, “ಜೋಸೆಫ್ ಫರ್ನಾಂಡೀಸ್’, “ಜಾಕೀರ್ ಹುಸೇನ್…’ ಹೀಗೆ ಒಟ್ಟು ಏಳು ಗೆಟಪ್‌ನಲ್ಲಿ ಹಾಗೂ ವಿಭಿನ್ನ ಡೈಲಾಗ್‌ನಲ್ಲಿ ಮಿಂಚಿದ್ದರು. ಈಗ ಮತ್ತೂಮ್ಮೆ “ಬುದ್ಧಿವಂತ-2′ ಮೂಲಕ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಇನ್ನು ಸೆಪ್ಟೆಂಬರ್ 18 ರಂದು ನಟ ಉಪೇಂದ್ರ ಅವರ ಹುಟ್ಟುಹಬ್ಬವಿದ್ದು, ಉಪ್ಪಿ ಅವರಿಗೆ ಮತ್ತು ಅವರ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಆಗಿ “ಬುದ್ಧಿವಂತ 2′ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ. “ಕ್ರಿಸ್ಟಲ್ ಪಾರ್ಕ್ ಸಿನಿಮಾಸ್’ ಬ್ಯಾನರ್‌ನಲ್ಲಿ ಟಿ.ಆರ್. ಚಂದ್ರಶೇಖರ್ ನಿರ್ಮಿಸಿರುವ “ಬುದ್ಧಿವಂತ 2′ ಸಿನಿಮಾಕ್ಕೆ ಜೈದೇವ್ ನಿರ್ದೇಶನವಿದೆ.
ಸಿನಿಮಾದ ಹಾಡುಗಳಿಗೆ ಗುರುಕಿರಣ್ ಸಂಗೀತ ಸಂಯೋಜಿಸಿದ್ದು, ಎಸ್. ನವೀನ್ ಕುಮಾರ್ ಛಾಯಾಗ್ರಹಣ, ಕೆ. ಎಂ. ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಚಿತ್ರದ ಸಾಹಸ ದೃಶ್ಯಗಳಿಗೆ ರವಿವರ್ಮ, ವಿಕ್ರಮ್ ಸಾಹಸ ಸಂಯೋಜನೆಯಿದೆ. “ಬುದ್ಧಿವಂತ 2′ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ಜೋಡಿಯಾಗಿ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ನಟ ಶ್ರೀನಗರ ಕಿಟ್ಟಿ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಭೂತದ ಹಿಂದೆ ಓಟ
ಕೋಮಲ್ ನಾಯಕರಾಗಿದ್ದ “ನಮೋ ಭೂತಾತ್ಮ’ ಚಿತ್ರ 2014ರಲ್ಲಿ ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿತ್ತು. ಈಗ ಅದೇ ತಂಡ ಜೊತೆಯಾಗಿ “ನಮೋ ಭೂತಾತ್ಮ-2′ ಮಾಡಿದೆ. ಈ ಚಿತ್ರವನ್ನು ಮುರಳಿ ನಿರ್ದೇಶಿಸಿದ್ದಾರೆ. ಜೊತೆಗೆ ನಿರ್ಮಾಣ ದಲ್ಲೂ ಕೈ ಜೋಡಿಸಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದ್ದು, ಚಿತ್ರ ಇಂದು ತೆರೆಕಾಣುತ್ತಿದೆ.
ಚಿತ್ರದ ಬಗ್ಗೆ ಮಾತನಾಡುವ ಕೋಮಲ್, “ನಾನು ನಿರ್ಮಿಸಿ, ನಟಿಸಿದ್ದ ಮುರಳಿ ಮಾಸ್ಟರ್ ನಿರ್ದೇಶಿಸಿದ್ದ “ನಮೋ ಭೂತಾತ್ಮ’ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ “ನಮೋ ಭೂತಾತ್ಮ-2′ ಚಿತ್ರ ನಮ್ಮಿಬ್ಬರ ಕಾಂಬಿನೇಶನ್‌ನಲ್ಲಿ ಬರುತ್ತಿದೆ. ಮೊದಲ ಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ’ ಎಂದು ಚಿತ್ರದ ಬಗ್ಗೆ ಹೇಳಿದರು.
ನಿರ್ದೇಶಕ ಮುರಳಿ ಈ ಬಾರಿ ನಿರ್ಮಾಣದಲ್ಲೂ ತೊಡಗಿದ್ದಾರೆ. ಚಿತ್ರದ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿರುವ ಮುರಳಿ ಸಿನಿಮಾದ ಬಗ್ಗೆ ಖುಷಿಯಿಂದ ಮಾತನಾಡಿದ್ದಾರೆ. “2014 ರಲ್ಲಿ ನನಗೆ ಕೋಮಲ್ ಅವರು “ನಮೋ ಭೂತಾತ್ಮ’ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ “ನಮೋ ಭೂತಾತ್ಮ-2′ ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೊನಾ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ಧ ಮಾಡಿಕೊಂಡಿದ್ದೆ. ಆ ನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು’ ಎನ್ನುತ್ತಾರೆ.
ತೋತಾಪುರಿಯಲ್ಲಿ ಧನಂಜಯ್ ಮಿಂಚು
ಜಗ್ಗೇಶ್ ಮುಖ್ಯಭೂಮಿಕೆಯಲ್ಲಿದ್ದ “ತೋತಾಪುರಿ’ ಚಿತ್ರ ಕಳೆದ ವರ್ಷ ತೆರೆಕಂಡು ಮೆಚ್ಚುಗೆ ಪಡೆದಿತ್ತು. ಈಗ ಅದರ ಮುಂದುವರೆದ ಭಾಗವಾಗಿ “ತೋತಾಪುರಿ-2′ ಬರುತ್ತಿದೆ. ಮೊದಲ ಭಾಗದಲ್ಲಿ ಜಗ್ಗೇಶ್ ಅವರ ಪಾತ್ರ ಹೆಚ್ಚು ಹೈಲೈಟ್ ಆಗಿತ್ತು. ಧನಂಜಯ್ ಅವರ ಪಾತ್ರ ಕೊನೆಗೆ ಬಂದಿತ್ತು. ಆದರೆ, “ತೋತಾಪುರಿ-2’ನಲ್ಲಿ ಧನಂಜಯ್ ಅವರ ಪಾತ್ರ ಸಿನಿಮಾದುದ್ದಕ್ಕೂ ಸಾಗಿಬರಲಿದೆ. ಈ ಚಿತ್ರದಲ್ಲಿ ಧನಂಜಯ್ ನಾರಾಯಣ್ ಪಿಳ್ಳೈ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಹಲವು ವಿಶೇಷತೆಗಳಿಂದ ಕೂಡಿದೆಯಂತೆ. ಇಲ್ಲಿ ಅವರು ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ.
ಚಿತ್ರದಲ್ಲಿ ಅವರ ಲೈಫ್ಸ್ಟೈಲ್, ಲವ್‌ಸ್ಟೋರಿ ಸೇರಿದಂತೆ ಹಲವು ಅಂಶಗಳು ತೆರೆಮೇಲೆ ಬರಲಿದೆ. ಇತ್ತೀಚೆಗಷ್ಟೇ ಸಿನಿಮಾದ “ಮೊದಲ ಮಳೆ’ ಎಂಬ ಹಾಡು ಬಿಡುಗಡೆಯಾಗಿ ಹಿಟ್ ಲಿಸ್ಟ್ ಸೇರಿದೆ. ಧನಂಜಯ್ ಹಾಗೂ ಸುಮನ್ ರಂಗನಾಥ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ಮೂರ್‍ನಾಲ್ಕು ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯಪ್ರಸಾದ್ ನಿರ್ದೇಶನವಿರುವ ಈ ಚಿತ್ರವನ್ನು ಕೆ.ಎ.ಸುರೇಶ್ ನಿರ್ಮಿಸಿದ್ದಾರೆ. ಇನ್ನು ಡಾಲಿ ಜೋಡಿಯಾಗಿ ಸುಮನ್ ರಂಗನಾಥ್ ನಟಿಸಿದ್ದಾರೆ. ಹಾಗೆಯೇ ಈ ಚಿತ್ರದಲ್ಲಿ ಜಗ್ಗೇಶ್, ಅದಿತಿ ಪ್ರಭುದೇವ, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ರವಿಪ್ರಕಾಶ್ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.