![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 13, 2023, 10:54 AM IST
ಮುಂಬಯಿ: ಕೆಜಿಎಫ್ ನಲ್ಲಿನ ಪಾತ್ರದ ಬಳಿಕ ನಟ ಸಂಜಯ್ ದತ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರ ರಗಡ್ ಲುಕ್ ಗಳ ಪಾತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ. ಸ್ಯಾಂಡಲ್ ವುಡ್ ನಟ ಸಂಜಯ್ ದತ್ ಮತ್ತೊಮ್ಮೆ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ.
ಜೋಗಿ ಪ್ರೇಮ್ ನಿರ್ದೇಶನದ ʼಕೆಡಿʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಬಹು ನಿರೀಕ್ಷಿತ ಬಿಗ್ ಬಜೆಟ್ ಸಿನಿಮಾಗಳಲ್ಲಿ ಒಂದಾಗಿರುವ ʼಕೆಡಿʼಯಲ್ಲಿ ಧ್ರುವ ಸರ್ಜಾ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಸಿನಿಮಾದಲ್ಲಿ ನಟಿ ಶಿಲ್ಪಾ ಶೆಟ್ಟಿ ʼ ಸತ್ಯವತಿʼ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ನಟ ಸಂಜಯ್ ದತ್ ನೆಗೆಟಿವ್ ಲುಕ್ ನಲ್ಲಿ ಬಣ್ಣ ಹಚ್ಚಲಿದ್ದಾರೆ. ಇತ್ತೀಚೆಗೆ ಚಿತ್ರೀಕರಣದ ಸಾಹಸ ದೃಶ್ಯದ ವೇಳೆ ನಟ ಸಂಜಯ್ ಅವರಿಗೆ ಗಾಯವಾಗಿದೆ ಎನ್ನುವ ಸುದ್ದಿಯೊಂದು ಹಬ್ಬಿತ್ತು. ತನ್ನ ನೆಚ್ಚಿನ ನಟನ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು.
ಸುದ್ದಿ ವೈರಲ್ ಆಗುತ್ತಿದ್ದಂತೆ ಸ್ವತಃ ಸಂಜಯ್ ದತ್ ಅವರೇ ಈ ಬಗ್ಗೆ ಟ್ವೀಟ್ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ʼಕೆಡಿʼ ಚಿತ್ರೀಕರಣದ ವೇಳೆ ನನಗೆ ಗಾಯವಾಗಿದೆ ಎನ್ನುವ ಸುದ್ದಿ ಸಂಪೂರ್ಣ ಸುಳ್ಳು ಹಾಗೂ ಅರ್ಥಹೀನ. ದೇವರ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ಸಿನಿಮಾ ತಂಡ ನನ್ನ ದೃಶ್ಯದ ಚಿತ್ರೀಕರಣದ ವೇಳೆ ಹೆಚ್ಚಿನ ಮುಂಜಾಗ್ರತ ಕ್ರಮವನ್ನು ಕೈಗೊಂಡಿದೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳೆಂದಿದ್ದಾರೆ.
ಇನ್ನು ಈ ಬಗ್ಗೆ ನಿರ್ದೇಶಕ ಪ್ರೇಮ್ ಕೂಡ ಇದೊಂದು ಸುಳ್ಳು ಸುದ್ದಿಯೆಂದು ನಟನ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡು ಹೇಳಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ʼಕೆಡಿʼ ಸಿನಿಮಾವನ್ನು ಕೆವಿಎನ್ ಪ್ರೂಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ. ಅರ್ಜುನ್ ಜನ್ಯ ಮ್ಯೂಸಿಕ್ ನೀಡಿದ್ದಾರೆ.
There are reports of me getting injured. I want to reassure everyone that they are completely baseless. By God’s grace, I am fine & healthy. I am shooting for the film KD & the team’s been extra careful while filming my scenes. Thank you everyone for reaching out & your concern.
— Sanjay Dutt (@duttsanjay) April 12, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.